ನಮ್ಮ 50 ಶಾಸಕರಿಗೆ ತಲಾ ₹50 ಕೋಟಿ ಬಿಜೆಪಿ ಆಮಿಷ: ಸಿಎಂ ಹೇಳಿಕೆ ಸಮರ್ಥಿಸಿದ ಡಿ ಕೆ ಶಿವಕುಮಾರ್

Date:

ಐವತ್ತು ಜನ ಕಾಂಗ್ರೆಸ್ ಶಾಸಕರಿಗೆ ಬಿಜೆಪಿಯವರು ₹50 ಕೋಟಿ ಆಮಿಷ ಒಡ್ಡಿರುವುದು ನಿಜ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಯನ್ನು ಸಮರ್ಥಿಸಿದರು.

ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿ, “ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪಕ್ಷದ ಐವತ್ತು ಶಾಸಕರಿಗೆ ತಲಾ ₹50 ಕೋಟಿಯಂತೆ ಬಿಜೆಪಿಯವರು ಆಮಿಷ ಒಡ್ದುತ್ತಿದ್ದಾರೆ. ಹಿಂದೆಯೂ ಈ ಬಗ್ಗೆ ನಾನು ಹೇಳಿದ್ದೆ” ಎಂದರು.

“ಆಪರೇಷನ್ ಕಮಲದ ಬಗ್ಗೆ ನಮ್ಮ ಶಾಸಕರ ಬಳಿ ಮಾತನಾಡಿದ್ದಾರೆ. ಈ ವಿಚಾರವನ್ನು ಕೆಲವರು ಬಂದು ಮುಖ್ಯಮಂತ್ರಿಯ ಬಳಿ ತಿಳಿಸಿದ್ದಾರೆ. ಈ ಸಂಗತಿಯನ್ನು ಮುಖ್ಯಮಂತ್ರಿಗಳು ಮಾಧ್ಯಮದ ಮುಂದೆ ಹೇಳಿದ್ದಾರೆ. ಮಿಕ್ಕ ವಿಚಾರಗಳನ್ನು ಅನಂತರ ನಿಮಗೆ ತಿಳಿಸುತ್ತೇನೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿ ಎಂದೂ ಸ್ವಂತ ಬಲದ ಮೇಲೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿಲ್ಲ, ಆಪರೇಷನ್ ಕಮಲದ ಮೂಲಕ ಮಾತ್ರ ಅಧಿಕಾರಕ್ಕೆ ಬಂದಿದೆ. ಬಿಜೆಪಿಯವರು ಸಾಕಷ್ಟು ಭ್ರಷ್ಟಾಚಾರ ಮಾಡಿ ಲಂಚದಿಂದ ಕೋಟಿಗಟ್ಟಲೆ ಹಣ ಸಂಪಾದನೆ ಮಾಡಿದ್ದಾರೆ. ಆ ಹಣದಿಂದ ನಮ್ಮ 50 ಶಾಸಕರಿಗೆ ತಲಾ ₹50 ಕೋಟಿ ಕೊಟ್ಟು ಖರೀದಿ ಮಾಡಲು ಯತ್ನಿಸಿದ್ದರು. ಆದರೆ, ನಮ್ಮ ಯಾವ ಶಾಸಕರೂ ಪಕ್ಷ ಬಿಟ್ಟು ಹೋಗಿಲ್ಲ. ಹಾಗಾಗಿ ನನ್ನ ಮೇಲೆ ಮುಡಾ ಪ್ರಕರಣ ಎಂದು ಸುಳ್ಳು ಆರೋಪ ಮಾಡಿ ಕಪ್ಪು ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಒಬ್ಬೊಬ್ಬ ಶಾಸಕರಿಗೆ ₹50 ಕೋಟಿ ಕೊಟ್ಟು ಖರೀದಿಸಲು ಯಡಿಯೂರಪ್ಪ ಏನು ಪ್ರಿಂಟ್ ಮಾಡಿದ್ದಾರಾ? ಬೊಮ್ಮಾಯಿ, ಅಶೋಕ್, ವಿಜಯೇಂದ್ರ ಹಣ ಪ್ರಿಂಟ್ ಮಾಡಿದ್ದಾರಾ? ಎಲ್ಲವೂ ಭ್ರಷ್ಟಾಚಾರ ಲಂಚದಿಂದ ಸಂಪಾದನೆ ಮಾಡಿರುವ ಹಣ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...