ರಾಜ್ಯಕ್ಕೆ ವಿಶೇಷ ಅನುದಾನ ನೀಡದಂತೆ ತಡೆ ನೀಡಿದ್ದೇ ನಿರ್ಮಲಾ ಸೀತಾರಾಮನ್ : ಸಿಎಂ ಸಿದ್ದರಾಮಯ್ಯ

Date:

  • ನಿರ್ಮಲಾ ಸೀತಾರಾಮನ್ ಒಪ್ಪಿಗೆ ನೀಡಲು ನಿರಾಕರಿಸಿದ್ದರು : ಸಿಎಂ ಆರೋಪ
  • ’16ನೇ ಹಣಕಾಸು ಆಯೋಗದ ಮುಂದೆ ರಾಜ್ಯದ ವಾದ ಸಮರ್ಥವಾಗಿ ಮಂಡಿಸುತ್ತೇವೆ’

ರಾಜ್ಯಕ್ಕೆ 5,495 ಕೋಟಿ ರೂ. ವಿಶೇಷ ಅನುದಾನ ನೀಡಲು 15ನೇ ಹಣಕಾಸು ಆಯೋಗ ಮಾಡಿದ್ದ ಶಿಫಾರಸನ್ನು ಕೇಂದ್ರ ಸರ್ಕಾರ ಪರಿಗಣಿಸಿಲ್ಲ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ ನೀಡಲು ನಿರಾಕರಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಗುರುವಾರ ಜೆಡಿಎಸ್‌ನ ಕೆ ಎ ತಿಪ್ಪೇಸ್ವಾಮಿ, ಟಿ ಎ ಶರವಣ ಅವರ ಪ್ರಶ್ನೆಗಳಿಗೆ ಉತ್ತರ ನೀಡಿದ ಸಿಎಂ ಸಿದ್ದರಾಮಯ್ಯ, ಹಣಕಾಸು ಆಯೋಗದ ಶಿಫಾರಸಿನಂತೆ ಅನುದಾನ ಮತ್ತು ತೆರಿಗೆ ಹಂಚಿಕೆ ಮಾಡಲಾಗುತ್ತದೆ. 2018-19ರಲ್ಲಿ 35,894 ಕೋಟಿ ರೂ. ದೊರೆತಿತ್ತು. ನಂತರ ಪ್ರತಿ ವರ್ಷವೂ ಕಡಿಮೆ ದೊರೆತಿದೆ. ನಾಲ್ಕು ವರ್ಷಗಳ ಹಣಕಾಸಿನ ಸ್ಥಿತಿಗತಿಗೆ ಹೋಲಿಸಿದರೆ ಅದು ತೀರ ಕಡಿಮೆ ಮೊತ್ತ. 14ನೇ ಹಣಕಾಸು ಆಯೋಗದಲ್ಲಿ ರಾಜ್ಯದ ಪಾಲು ಶೇ 4.71 ಇತ್ತು. 15ನೇ ಹಣಕಾಸು ಆಯೋಗದಲ್ಲಿ ಅದು ಶೇ. 3.65ಕ್ಕೆ ಕುಸಿದಿದೆ. ಶೇ 1.06ರಷ್ಟು ಕಡಿಮೆ ನಿಗದಿ ಮಾಡಲಾಗಿದೆ ಎಂದು ವಿವರಿಸಿದ್ದಾರೆ.

15ನೇ ಹಣಕಾಸು ಆಯೋಗದ ಶಿಫಾರಸಿನ ಪ್ರಕಾರ ವಿಶೇಷ ಅನುದಾನ ನೀಡುವಂತೆ ರಾಜ್ಯ ಸರ್ಕಾರ ಮಾಡಿದ್ದ ಮನವಿಯನ್ನು ಕೇಂದ್ರ ಪುರಸ್ಕರಿಸಿಲ್ಲ. ಕೇಂದ್ರದ ಮೇಲೆ ಒತ್ತಡ ಹಾಕಲು ರಾಜ್ಯ ನಿರಂತರ ಪ್ರಯತ್ನ ಮಾಡುತ್ತಿದೆ. ಜಿಎಸ್‌ಟಿಯಲ್ಲೂ ರಾಜ್ಯದ ಪಾಲು ಸಮರ್ಪಕವಾಗಿ ಸಿಗುತ್ತಿಲ್ಲ. ಈ ಕುರಿತು ಹಿಂದಿನ ಬಿಜೆಪಿ ಸರ್ಕಾರ ಧ್ವನಿಯನ್ನೇ ಎತ್ತಲಿಲ್ಲ. ಇದನ್ನು ಹೇಳಿದರೆ ವಿರೋಧ ಪಕ್ಷದ ನಾಯಕರಿಗೆ ಬೇಸರವಾಗುತ್ತದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದಿಂದ ಕೇಂದ್ರಕ್ಕೆ ಸಂದಾಯವಾಗುವ ಎಲ್ಲ ರೀತಿಯ ತೆರಿಗೆ ಮಾಹಿತಿ ರಾಜ್ಯ ಸರ್ಕಾರದ ಬಳಿ ಇಲ್ಲ. ನೀಡಬೇಕಿರುವ ಪಾಲನ್ನೂ ಸರಿಯಾಗಿ ನೀಡದಿದ್ದರೆ ಹೇಗೆ? ಉತ್ತರದ ರಾಜ್ಯಗಳಿಗೆ ಹೆಚ್ಚಿನ ನೆರವು ನೀಡಲಾಗಿದೆ. ಕರ್ನಾಟಕಕ್ಕೆ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪುಣೆ | ಹಿಂದೂ ಸಂಘಟನೆ ಕಾರ್ಯಕರ್ತರಿಂದ ಪ್ರಾಂಶುಪಾಲರ ಮೇಲೆ ಹಲ್ಲೆ

16ನೇ ಹಣಕಾಸು ಆಯೋಗದ ಮುಂದೆ ರಾಜ್ಯದ ವಾದ ಸಮರ್ಥವಾಗಿ ಮಂಡಿಸುತ್ತೇವೆ. ವಾದ ಮಂಡನೆಗೆ ಅಗತ್ಯವಾದ ಪ್ರಸ್ತಾವನೆ ಸಿದ್ಧಪಡಿಸಲಾಗುತ್ತಿದೆ. ಆಗಿರುವ ತಾರತಮ್ಯ ಸರಿಪಡಿಸಲು ಆಯೋಗಕ್ಕೆ ಕೋರಿಕೆ ಸಲ್ಲಿಸುತ್ತೇವೆ ಎಂದಿದ್ದಾರೆ.

ಅಬಕಾರಿ ಆದಾಯದಲ್ಲಿ ಗಣನೀಯ ಏರಿಕೆಯಾಗಿದೆ. 2022-23ನೇ ಸಾಲಿನಲ್ಲಿ 29,920 ಕೋಟಿ ರೂ. ಬಂದಿದೆ. ವಾಣಿಜ್ಯ ತೆರಿಗೆ ಸೋರಿಕೆ ತಡೆಗೂ ಕ್ರಮ ಕೈಗೊಳ್ಳಲಾಗಿದ್ದು, 1,320 ಕೋಟಿ ರೂ. ವಸೂಲಿ ಮಾಡಲಾಗಿದೆ ಎಂದು ಕಾಂಗ್ರೆಸ್‌ನ ಎಂ ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...