ಶಿಡ್ಲಘಟ್ಟ | ವಿಪ್‌ ಉಲ್ಲಂಘನೆ; 7 ಮಂದಿ ಸದಸ್ಯರು ಅನರ್ಹ

Date:

ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ವಿಪ್‌ ಉಲ್ಲಂಘನೆಯ ಕಾರಣ 7 ಮಂದಿ ನಗರಸಭೆ ಸದಸ್ಯರ ಸದಸ್ಯತ್ವ ರದ್ದುಗೊಳಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ನ್ಯಾಯಾಲಯ ಏ.28ರಂದು ಆದೇಶ ಹೊರಡಿಸಿದೆ.

ಶಿಡ್ಲಘಟ್ಟ ನಗರದ 3ನೇ ವಾರ್ಡ್‌ ಸದಸ್ಯೆ ಎಸ್‌ ಚಿತ್ರಾ ಮನೋಹರ್‌, 10ನೇ ವಾರ್ಡ್‌ನ ಎಸ್‌ ಎಂ ಮಂಜುನಾಥ್‌, 11ನೇ ವಾರ್ಡ್‌ನ ಅನಿಲ್‌ ಕುಮಾರ್‌, 16ನೇ ವಾರ್ಡಿನ ಎನ್‌ ಕೃಷ್ಣಮೂರ್ತಿ, 22ನೇ ವಾರ್ಡಿನ ಮಂಜುನಾಥ್‌ ಟಿ, 28ನೇ ವಾರ್ಡಿನ ಜಬೀವುಲ್ಲಾ, 7ನೇ ವಾರ್ಡಿನ ಶಿವಮ್ಮ ಮುನಿರಾಜು ಅನರ್ಹರಾಗಿರುವ ಶಿಡ್ಲಘಟ್ಟ ನಗರಸಭೆ ಸದಸ್ಯರು.

IMG 20250430 173843 1

ಕಳೆದ 2024ರ ಸೆಪ್ಟೆಂಬರ್‌ ತಿಂಗಳಲ್ಲಿ ನಡೆದ ಶಿಡ್ಲಘಟ್ಟ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸದೆ ವಿರೋಧ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವ ಮೂಲಕ ಕಾಂಗ್ರೆಸ್‌ ಪಕ್ಷದ 7 ಮಂದಿ ಸದಸ್ಯರು ವಿಪ್‌ ಉಲ್ಲಂಘನೆ ಮಾಡಿದ್ದರು. ಈ ಕುರಿತು ಕಾಂಗ್ರೆಸ್ ಜಿಲ್ಲಾಧ್ಯಕ್ಷ‌ ಕೆ.ಎನ್.ಕೇಶವರೆಡ್ಡಿ ಮತ್ತು 31ನೇ ವಾರ್ಡಿನ ಸದಸ್ಯ ಎಂ ಶ್ರೀನಿವಾಸ್‌ ಸೆ.26ರಂದು ನಗರಸಭೆ ಪೌರಾಯುಕ್ತರಿಗೆ ಲಿಖಿತ ದೂರು ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೂರಿನ ಮೇರೆಗೆ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಲಾಗಿದ್ದು, ನಗರಸಭೆ ಸದಸ್ಯರು ವಿಪ್‌ ಉಲ್ಲಂಘಿಸಿರುವುದು ದಾಖಲೆಗಳಿಂದ ಸಾಬೀತಾಗಿರುತ್ತದೆ. ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ ಅಧಿನಿಯಮ 1987 ಕಲಂ 4ರಡಿಯಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಜಿಲ್ಲಾ ಚುನಾವಣಾಧಿಕಾರಿಗಳ ನ್ಯಾಯಾಲಯ ಪುರಸ್ಕರಿಸಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಪಿ ಎನ್‌ ರವೀಂದ್ರ ಅವರು, ವಿಪ್‌ ಉಲ್ಲಂಘಿಸಿರುವ 7 ಮಂದಿ ಸದಸ್ಯರನ್ನು ಅನರ್ಹಗೊಳಿಸಿ ಆದೇಶಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...