8 ಬಿಜೆಪಿ ಶಾಸಕರು ಕಾಂಗ್ರೆಸ್​ ಸೇರುತ್ತಾರೆ; ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ ಹೊಸ ಬಾಂಬ್

Date:

ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿಯಿಂದ ಟಿಕೆಟ್‌ ಸಿಗದೆ ಅಸಮಾಧಾನಗೊಂಡು ಸಿ.ಪಿ ಯೋಗೇಶ್ವರ್ ಕಾಂಗ್ರೆಸ್‌ ಸೇರಿಸಿದ್ದಾರೆ. ಎಂಎಲ್‌ಸಿ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು, ಉಪಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಯೋಗೇಶ್ವರ್ ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುತ್ತಿದ್ದಂತೆಯೇ ಬಿಜೆಪಿ ಶಾಸಕ ಎಸ್‌.ಟಿ ಸೋಮಶೇಖರ್ ಶಾಸಕರು ಪಕ್ಷಾಂತರಗೊಳ್ಳುವ ಬಗ್ಗೆ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಠಿಯಾಗಿದೆ.

ಇತ್ತ, ಶೀಘ್ರವೇ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪತನವಾಗುತ್ತದೆ ಎಂದು ಬಿಜೆಪಿ-ಜೆಡಿಎಸ್‌ ನಾಯಕರು ಹೇಳುತ್ತಿದ್ದಾರೆ. ಒಂದು ಹೆಜ್ಜೆ ಮುಂದೆ ಹೋಗಿ, ‘2028ರ ಚುನಾವಣೆಗೂ ಮುನ್ನ ನಾನು ಮತ್ತೆ ಮುಖ್ಯಮಂತ್ರಿ ಆಗುತ್ತೇನೆ’ ಎಂದು ಕುಮಾರಸ್ವಾಮಿ ಹೇಳಿಕೊಂಡಿದ್ದಾರೆ. ಈ ನಡುವೆ, ‘8 ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರುತ್ತಾರೆ’ ಎಂದು ಎಸ್‌.ಟಿ ಸೋಮಶೇಖರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಖಾಸಗಿ ಮಾಧ್ಯಮವೊಂದಕ್ಕೆ ಪ್ರತಿಕ್ರಿಯಿಸಿರುವ ಸೋಮಶೇಖರ್, “ಬಿಜೆಪಿಯ 8 ಮಂದಿ ಶಾಸಕರು ಕಾಂಗ್ರೆಸ್‌ ಸೇರುತ್ತಾರೆ. ಅವರಲ್ಲಿ, ಇಬ್ಬರು ಶಾಸಕರು ಬೆಂಗಳೂರಿನವರೇ ಆಗಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಹೇಳಿಕೆ ನೀಡಿದ್ದಕ್ಕೆ ನನ್ನ ಮೇಲೆ ಯಾವುದೇ ಶಿಸ್ತು ಕ್ರಮ ಜರುಗಿಸಬಹುದು. ಆ ಬಗ್ಗೆ ನನಗೆ ಭಯವಿಲ್ಲ. ನನ್ನ ಕ್ಷೇತ್ರದ ಅಭಿವೃದ್ಧಿಯಾಗಬೇಕು ಎಂಬುದೇ ನನ್ನ ಗುರಿ. ಅದಕ್ಕಾಗಿಯೇ ನಾನು ಆಗ್ಗಾಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯನ್ನು ಭೇಟಿ ಮಾಡುತ್ತೇನೆ. ಆರ್‌ ಅಶೋಕ್ ಮಾತಿಗೆ ಬೆಲೆ ಕೊಡಬಾರದು” ಎಂದಿದ್ದಾರೆ.

ಅಂದಹಾಗೆ, 2023ರ ಚುನಾವಣೆ ನಡೆದು, ಕಾಂಗ್ರೆಸ್‌ ಸರ್ಕಾರ ರಚಿಸಿದ ನಂತರದಲ್ಲಿ ಎಸ್‌.ಟಿ ಸೋಮಶೇಖರ್‌ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುತ್ತಾರೆಂಬ ವದಂತಿಗಳು ಆಗ್ಗಾಗ್ಗೆ ಸುದ್ದಿಯಾಗುತ್ತಲೇ ಇವೆ. ಆದರೆ, ಅವರು ಈವರೆಗೂ ತಾವು ಕಾಂಗ್ರೆಸ್‌ ಸೇರುವ ಬಗ್ಗೆ ಮಾತನಾಡಿಲ್ಲ. ಇದೀಗ, 8 ಮಂದಿ ಬಿಜೆಪಿ ಶಾಸಕರು ಕಾಂಗ್ರೆಸ್‌ ಸೇರುತ್ತಾರೆಂದು ಹೇಳಿಕೊಂಡಿದ್ದಾರೆ. ಆ 8 ಮಂದಿಯಲ್ಲಿ ಸೋಮಶೇಖರ್ ಕೂಡ ಒಬ್ಬರಾಗಬಹುದು ಎಂಬ ಅನುಮಾನ ಮತ್ತೆ ಮುನ್ನೆಲೆಗೆ ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...