ಶೇಕಡ 90ರಷ್ಟು ಸಂವಿಧಾನ ಸಭೆ ಸದಸ್ಯರು ‘ಸನಾತನಿಗಳು’ ಎಂದ ಪ್ರಧಾನಿ ಮೋದಿ!

Date:

ಬಿಜೆಪಿಯು ಭಾರತದ ಸಂವಿಧಾನ ಬದಲಾಯಿಸಲು ಪ್ರಯತ್ನಿಸುತ್ತಿದೆ ಎಂಬ ವಿಪಕ್ಷಗಳ ಆರೋಪವನ್ನು ತಳ್ಳಿಹಾಕಿದ ಪ್ರಧಾನಿ ನರೇಂದ್ರ ಮೋದಿ “ಶೇ.90ರಷ್ಟು ಸಂವಿಧಾನ ಸಭೆ ಸದಸ್ಯರು ಸನಾತನಿಗಳು ಆಗಿದ್ದರು, ಸಂವಿಧಾನವನ್ನು ರಚಿಸಿದ ಬಾಬಾ ಸಾಹೇಬ್ ಬಿಆರ್ ಅಂಬೇಡ್ಕರ್ ಅವರು ಕೂಡಾ ಸಂವಿಧಾನವನ್ನು ಬದಲಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ಬಿಹಾರದ ಗಯಾದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, “ಬಿಜೆಪಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ಬದಲಾಯಿಸುತ್ತದೆ ಎಂದು ಸುಳ್ಳುಗಳನ್ನು ಹರಡುವ ಮೂಲಕ ಸಂವಿಧಾನವನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದ್ದಾರೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ?   ರಾಜಸ್ಥಾನ | ಕೆಲವು ಕಠಿಣ ನಿರ್ಧಾರ ತಳೆಯಬೇಕಿದೆ: ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ ಬಿಜೆಪಿ ಅಭ್ಯರ್ಥಿ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಡಾ ರಾಜೇಂದ್ರ ಪ್ರಸಾದ್ ಅವರು ಸಂವಿಧಾನ ರಚನಾ ಸಭೆಯ ನೇತೃತ್ವ ವಹಿಸಿದ್ದರು. ಸನಾತನಿಗಳು ಬೆಂಬಲಿಸಿದರು” ಎಂದು ಇದೇ ಸಂದರ್ಭದಲ್ಲಿ ಮೋದಿ ಹೇಳಿದ್ದಾರೆ. “ಸಂವಿಧಾನ ಸಭೆಯಲ್ಲಿ, 80-90 ಪ್ರತಿಶತಕ್ಕೂ ಹೆಚ್ಚು ಸದಸ್ಯರು ಸನಾತನಿಗಳು, ಅವರು ಅಂಬೇಡ್ಕರ್ ಅವರಿಗೆ ಭಾರತದ ಅಂತಹ ಶ್ರೇಷ್ಠ ಸಂವಿಧಾನವನ್ನು ರಚಿಸಲು ತಮ್ಮ ಬೆಂಬಲವನ್ನು ನೀಡಿದರು” ಎಂದು ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ.

“ಸಂವಿಧಾನವನ್ನು ರಾಜಕೀಯ ಶಕ್ತಿಯನ್ನಾಗಿ ಬಳಸಿಕೊಳ್ಳುವವರು ಸುಳ್ಳುಗಳನ್ನು ಹರಡುವುದನ್ನು ನಿಲ್ಲಿಸಿ. ಸಂವಿಧಾನವನ್ನು ರಚಿಸಿದ ಡಾ.ಬಿ.ಆರ್. ಅಂಬೇಡ್ಕರ್ ಕೂಡ ಭಾರತದ ಸಂವಿಧಾನವನ್ನು ಬದಲಾಯಿಸಲು ಸಾಧ್ಯವಿಲ್ಲ. ಸಂವಿಧಾನವನ್ನು ಅವಮಾನಿಸುವವರಿಗೆ ಸಾರ್ವಜನಿಕ ಜೀವನದಲ್ಲಿ ಉಳಿಯುವ ಹಕ್ಕಿಲ್ಲ” ಎಂದಿದ್ದಾರೆ.

ಇದನ್ನು ಓದಿದ್ದೀರಾ?  ಅನಂತ ಕುಮಾರ್‌ರವರ ಸಂವಿಧಾನ ಬದಲಾವಣೆ ಹೇಳಿಕೆ ಮನುಸ್ಮೃತಿ ಜಾರಿಯ ಆಲೋಚನೆ: ಸಿಎಂ ಸಿದ್ದರಾಮಯ್ಯ

ಈ ಹಿಂದೆ ಉತ್ತರ ಕನ್ನಡ ಸಂಸದ ಅನಂತ್‌ ಕುಮಾರ್‌ ಹೆಗಡೆ ಮತ್ತು ಬಿಜೆಪಿ ನಾಯಕಿ ಜ್ಯೋತಿ ಮಿರ್ಧಾ ಸಂವಿಧಾನ ಬದಲಾವಣೆಯ ಬಗ್ಗೆ ಹೇಳಿಕೆಯನ್ನು ನೀಡಿದ್ದರು. “ಸಂವಿಧಾನ ಬದಲಾವಣೆ ಮಾಡಬೇಕಾದರೆ 400 ಸ್ಥಾನವನ್ನು ನಾವು ಗೆಲ್ಲಬೇಕು” ಎಂದು ಅನಂತ್ ಕುಮಾರ್ ಹೆಗಡೆ ಹೇಳಿಕೆ ನೀಡಿದ್ದರು. ಇದೀಗ ಬಿಜೆಪಿಯ ಫೈಜಾಬಾದ್ ಸಂಸದ ಲಲ್ಲು ಸಿಂಗ್ ಅವರು “ಸಂವಿಧಾನದ ಬದಲಾವಣೆಗೆ ಬಿಜೆಪಿಗೆ ಮೂರನೇ ಎರಡರಷ್ಟು ಬಹುಮತದ ಅಗತ್ಯವಿದೆ” ಎಂದು ಹೇಳಿದ್ದಾರೆ.

ಎಪ್ರಿಲ್ 13 ರಂದು ಅಯೋಧ್ಯೆಯ ಮಿಲ್ಕಿಪುರ್ ತೆಹಸಿಲ್‌ನಲ್ಲಿ ಮಾತನಾಡಿದ ಲಲ್ಲು ಸಿಂಗ್ ಈ ಹೇಳಿಕೆ ನೀಡಿದ್ದು ಇದರ ವಿಡಿಯೋ ಈಗ ವೈರಲ್‌ ಆಗಿದೆ. “ಲೋಕಸಭೆ ಚುನಾವಣೆಯಲ್ಲಿ 272 ಸಂಸದರಿದ್ದರೆ ಸರ್ಕಾರ ರಚಿಸಬಹುದು, ಆದರೆ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಅಥವಾ ಹೊಸ ಸಂವಿಧಾನವನ್ನು ಪಡೆಯಬೇಕಿದ್ದರೆ ನಮಗೆ ಮೂರನೇ ಎರಡರಷ್ಟು ಬಹುಮತ ಬೇಕು” ಎಂದು ಬಿಜೆಪಿ ಸಂಸದ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...