ಶಾಸಕ ಮುನಿರತ್ನ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂಗೆ ಕಾಂಗ್ರೆಸ್‌ನ ಒಕ್ಕಲಿಗ ನಾಯಕರ ನಿಯೋಗ ಆಗ್ರಹ

Date:

ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ಅವರು ಒಕ್ಕಲಿಗ ಸಮುದಾಯ ಹಾಗೂ ಒಕ್ಕಲಿಗ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಪದ ಬಳಸಿ ನಿಂದನೆ ಮಾಡಿರುವ ಹಿನ್ನೆಲೆಯಲ್ಲಿ ಒಕ್ಕಲಿಗ ಸಚಿವರು, ಶಾಸಕರು ಹಾಗೂ ಕಾಂಗ್ರೆಸ್ ಮುಖಂಡರನ್ನು ಒಳಗೊಂಡ ನಿಯೋಗ ಸಿಎಂ ಸಿದ್ದರಾಮಯ್ಯಗೆ ಮನವಿ ಸಲ್ಲಿಸಿತು.

ಸೋಮವಾರ ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿದ ಕಾಂಗ್ರೆಸ್ಸಿನ ಒಕ್ಕಲಿಗ ನಾಯಕರ ನಿಯೋಗ ಮುನಿರತ್ನ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತು. ನಿಯೋಗದಲ್ಲಿ ಸಚಿವರಾದ ಚಲುವರಾಯಸಾಮಿ, ಡಾ. ಎಂ ಸಿ ಸುಧಾಕರ್‌, ಶಾಸಕ ಹೆಚ್‌ ಸಿ ಬಾಲಕೃಷ್ಣ, ಪುಟ್ಟಣ್ಣ, ಶರತ್ ಬಚ್ಚೇಗೌಡ ಸೇರಿದಂತೆ ಇತರ ನಾಯಕರು ಇದ್ದಾರೆ.

ಪ್ರಕರಣ ಹಿನ್ನೆಲೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಎಂಬುವರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡುವ ಮೂಲಕ ಹೆಂಡತಿಯ ಬಗ್ಗೆ ಅಶ್ಲೀಲವಾಗಿ ಮಾತನಾಡಿರುವ ಆರೋಪ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಕೇಳಿಬಂದಿದೆ.

ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಲು ₹30 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಮೇಲೆ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ಬೆಂಗಳೂರಿನ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಶನಿವಾರ ದೂರು ದಾಖಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ನಾಗಮಂಗಲ ಕೋಮುಗಲಭೆ ವೇಳೆ ಪಾಕ್ ಪರ ಘೋಷಣೆ?: ಆರ್‌ ಅಶೋಕ್‌ ಆರೋಪ

ಪೊಲೀಸರಿಂದ ಯಾವುದೇ ಕ್ರಮವಾಗದಿದ್ದಾಗ ಗುತ್ತಿಗೆದಾರ ಚಲುವರಾಜು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, “ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿ ಅಸಹ್ಯವಾಗಿ ವರ್ತಿಸಿರುವ ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು, ಎಫ್‌ಐಆರ್‌ ಆದ ಬಳಿಕ ಪೊಲೀಸರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ” ಎಂದು ಗಮನಕ್ಕೆ ತಂದರು.

ಮುನಿರತ್ನ ಚಲನವಲನ ಬಗ್ಗೆ ನಿಗಾ ಇರಿಸಿದ್ದ ಬೆಂಗಳೂರಿನ ಪೊಲೀಸರು, ಮುನಿರತ್ನ ಅವರ ಮೊಬೈಲ್‌ ಲೊಕೇಶನ್‌ ಟ್ರ್ಯಾಕ್‌ ಮಾಡಿ, ಆಂಧ್ರಕ್ಕೆ ತೆರಳುತ್ತಿದ್ದ ಮುನಿರತ್ನ ಅವನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿದ್ದಾರೆ. ಈಗ ಪೊಲೀಸರ ವಶದಲ್ಲಿ ಶಾಸಕ ಮುನಿರತ್ನ ಇದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...