ಸಿಎಂ ಕಣ್ಣಿನ ಕೆಳಗೆಯೇ ಕೋಟ್ಯಂತರ ರೂಪಾಯಿ ಹಗರಣ; ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್‌.ಅಶೋಕ್ ಆಗ್ರಹ‌

Date:

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು ಸಚಿವರೂ ಆಗಿದ್ದಾರೆ. ಅವರ ಕಣ್ಣಿನ ಕೆಳಗೆಯೇ ಕೋಟ್ಯಂತರ ರೂಪಾಯಿ ಹಗರಣ ನಡೆದರೂ ಅವರಿಗೆ ತಿಳಿದಿಲ್ಲ. ಕೂಡಲೇ ಸಿಎಂ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧಿಕಾರಿ, ಮೃತ ಪಿ.ಚಂದ್ರಶೇಖರನ್‌ ಅವರ ಕುಟುಂಬ ಕಷ್ಟದಲ್ಲಿದೆ. ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದ್ದರೂ, ತಮ್ಮ ಬಳಿಯೇ ಇರುವ ಹಣಕಾಸು ಇಲಾಖೆಯಿಂದ ಎಲ್ಲ ಮಾಹಿತಿ ಪಡೆದಿದ್ದರೂ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಮಾತ್ರ ಪಡೆಯುತ್ತಿಲ್ಲ. ಸರ್ಕಾರದ ಹಣವನ್ನು ಯಾರು ಹೇಗೆ ಬೇಕಾದರೂ ವರ್ಗಾವಣೆ ಮಾಡಬಹುದು ಎಂಬುದು ಇದರ ಅರ್ಥ. ಈ ಹಣದಲ್ಲಿ ಸೋನಿಯಾ ಗಾಂಧಿ ಅವರಿಗೂ ಪಾಲು ಸಿಕ್ಕಿದೆ ಎನ್ನುವುದು ನನ್ನ ಅನುಮಾನ” ಎಂದರು.

“ಆಂಧ್ರಪ್ರದೇಶದ ಜ್ಯುಬಿಲಿ ಹಿಲ್ಸ್‌ ಬ್ಯಾಂಕ್‌ಗೆ ಹಣವನ್ನು ವರ್ಗಾವಣೆ ಮಾಡಲಾಗಿದೆ. ಜೊತೆಗೆ 9 ಐಟಿ ಕಂಪನಿಗಳಿಗೆ ವರ್ಗಾಯಿಸಲಾಗಿದೆ. ಈ ಹಣವನ್ನು ದಲಿತರ ಶ್ರೇಯಸ್ಸಿಗಾಗಿ ಇಡಲಾಗಿತ್ತು. ಇಂತಹ ಹಣವನ್ನೇ ಕಾಂಗ್ರೆಸ್‌ನವರು ಲೂಟಿ ಮಾಡುತ್ತಿದ್ದಾರೆ. ಇಲ್ಲಿ ಯಾರು ಮುಖ್ಯಮಂತ್ರಿ ಎಂಬುದೇ ಅರ್ಥವಾಗುತ್ತಿಲ್ಲ. ಇಲ್ಲಿ ಇಬ್ಬರು ಮುಖ್ಯಮಂತ್ರಿ ಹಾಗೂ ಸೂಪರ್‌ ಸಿಎಂ ಇದ್ದಾರೆ” ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿದ್ದರಾಮಯ್ಯನವರ ಸರ್ಕಾರದಲ್ಲಿ ಲೂಟಿಯನ್ನು ತಡೆದವರು ನಿವೃತ್ತರಾಗಬೇಕು ಅಥವಾ ಆತ್ಮಹತ್ಯೆ ಮಾಡಿಕೊಳ್ಳಬೇಕು. ಈ ಹಗರಣ ದೆಹಲಿಯನ್ನು ತಲುಪಿದ್ದು, ಮುಂದೆ ದೆಹಲಿ ನಾಯಕರ ವಿಚಾರವೂ ಬಹಿರಂಗವಾಗಲಿದೆ. ದಲಿತರಿಗೆ ಮೀಸಲಿಟ್ಟ ಹಣ ಎಲ್ಲಿಗೆ ಹೋಗಿದೆ ಎಂಬುದನ್ನು ಇನ್ನೂ ಪತ್ತೆ ಮಾಡಬೇಕಿದೆ. ಮಹಿಳೆಯರ ಅಕೌಂಟ್‌ಗೆ ಟಕಾಟಕ್‌ ಎಂದು ಹಣ ವರ್ಗಾವಣೆಯಾಗಲಿದೆ ಎಂದು ರಾಹುಲ್‌ ಗಾಂಧಿ ಹೇಳಿದ್ದರು. ಆದರೆ ಇಲ್ಲಿ ಐಟಿ ಕಂಪನಿಗಳ ಖಾತೆಗೆ ಟಕಾಟಕ್‌ ಎಂದು ವರ್ಗಾವಣೆಯಾಗಿದೆ” ಎಂದು ದೂರಿದರು.

“ಸಮಪಾಲು, ಸಮಬಾಳು ಎಂಬಂತೆ ಸಚಿವ ಸಂಪುಟದಲ್ಲಿರುವ ಎಲ್ಲರೂ ಹಣವನ್ನು ಸಮಪಾಲು ಮಾಡಿಕೊಂಡಿದ್ದಾರೆ. ರಾಜ್ಯದ ಆರ್ಥಿಕ ಪರಿಸ್ಥಿತಿ ಹಾಳು ಮಾಡಿ, 187 ಕೋಟಿ ರೂ. ಲೂಟಿ ಮಾಡಲಾಗಿದೆ. ತಮ್ಮ ಕಣ್ಣಿನ ಕೆಳಗೆ ಇವೆಲ್ಲ ನಡೆಯುತ್ತಿದ್ದರೂ ಸಿದ್ದರಾಮಯ್ಯ ಮೂಕ ಪ್ರೇಕ್ಷಕರಂತೆ ನಿಂತಿದ್ದಾರೆ” ಎಂದರು.

“ಹಣ ವರ್ಗಾವಣೆಯಾಗಿರುವ ಐಟಿ ಕಂಪನಿಗಳು ಕಾಂಗ್ರೆಸ್ಸಿಗರ ಹಿಂಬಾಲಕರಾಗಿದ್ದಾರೆ. ಹೈದರಾಬಾದಿನ ಜ್ಯೂಬ್ಲಿ ಹಿಲ್ಸ್ ವರೆಗೂ ಯಾರೂ ಹೋಗುವುದಿಲ್ಲ ಎಂಬ ಕಾರಣಕ್ಕೆ ಅಲ್ಲಿಗೆ ವರ್ಗಾವಣೆ ಮಾಡಲಾಗಿದೆ. ಕಾನೂನು ಪ್ರಕಾರ ಎಲ್ಲ ಅವಕಾಶ ಬಳಸಿಕೊಂಡು ಬಿಜೆಪಿ ಹೋರಾಟ ಮಾಡಲಿದೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೂ ದಾಖಲೆ ಸಮೇತ ಮಾಹಿತಿ ನೀಡಲಾಗಿದೆ” ಎಂದು ತಿಳಿಸಿದರು.

ತಪ್ಪಿಸಿಕೊಳ್ಳಲು ಎಸ್‌ಐಟಿ

“ಈ ಹಗರಣದ ತನಿಖೆ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಸಿಐಡಿ ಬದಲು ಎಸ್‌ಐಟಿ ರಚಿಸಿದರೆ ಈ ಪ್ರಕರಣ ಮುಚ್ಚಿಹಾಕಬಹುದೆಂಬ ಉಪಾಯವನ್ನು ಸರ್ಕಾರ ಮಾಡಿದೆ. ಪದೇ ಪದೆ ತನಿಖಾ ಏಜೆನ್ಸಿ ಬದಲಿಸಲಾಗುತ್ತಿದೆ. ಆದ್ದರಿಂದ ಇದನ್ನು ಸಿಬಿಐಗೆ ವಹಿಸಬೇಕು” ಎಂದು ಒತ್ತಾಯಿಸಿದರು.

“ಡಿಸಿಎಂ ಡಿ.ಕೆ.ಶಿವಕುಮಾರ್‌ ಸಿಂಪಥಿ ಸೃಷ್ಟಿಸಲು ಹಾಗೂ ದೇವೇಗೌಡರೇ ಇದನ್ನು ಮಾಡುತ್ತಿದ್ದಾರೆ ಎಂದು ಬಿಂಬಿಸಲು ಮಾಟ ಮಂತ್ರದ ಹೇಳಿಕೆ ನೀಡಿದ್ದಾರೆ. ಕೇರಳ ಸರ್ಕಾರ ಅದಕ್ಕಾಗಿ ಸ್ಪಷ್ಟನೆ ನೀಡಿ ಕಾಂಗ್ರೆಸ್‌ ಸರ್ಕಾರಕ್ಕೆ ಛೀಮಾರಿ ಹಾಕಿದೆ. ಕರ್ನಾಟಕವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿದ್ದು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಇಷ್ಟು ಕಳಪೆಯಾಗಿದ್ದಾರೆ. ಇವರ ಗುಪ್ತಚರ ಸಂಸ್ಥೆ ವಿಫಲವಾಗಿದೆ. ಇದು ಜನರಿಗೆ ಮಾಡಿದ ಅಪಮಾನ. ಮುಖ್ಯಮಂತ್ರಿ ಈಗ ಕೇರಳ ಸರ್ಕಾರಕ್ಕೆ ಪತ್ರ ಬರೆಯಲಿ, ಇಲ್ಲವೆಂದರೆ ಜನರ ಕ್ಷಮೆ ಕೋರಲಿ” ಎಂದು ಆಗ್ರಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...