ಧಾರ್ಮಿಕ ಕಟ್ಟುಪಾಡು ಮೀರಿ ಅಂಗಾಂಗ ದಾನ ಮಾಡಿದ ಮುಸ್ಲಿಂ ಕುಟುಂಬ: ಆರೋಗ್ಯ ಸಚಿವರಿಂದ ಸನ್ಮಾನ

Date:

  • ತುಮಕೂರಿನ ಶಿರಾ ಬಳಿ ವಾಹನ ಅಪಘಾತದಲ್ಲಿ ಮಡಿದಿದ್ದ ಫರ್ದೀನ್‌
  • ಸಾವಿನ ಬಳಿಕ ಹಲವರಿಗೆ ಅಂಗಾಂಗ ದಾನ ಮಾಡಿದ ಮೃತನ ಕುಟುಂಬ

ಸಾವಿನ ಬಳಿಕ ಅಂಗಾಂಗ ದಾನ ಮಾಡುವ ಮೂಲಕ ಮುಸ್ಲಿಂ ಧಾರ್ಮಿಕ ಕಟ್ಟುಪಾಡು ಮೀರಿದ ಕುಟುಂಬವೊಂದರ ಕಾರ್ಯವನ್ನು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಗುರುತಿಸಿ ಸನ್ಮಾನಿಸುವ ಮೂಲಕ ಅವರ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿದರು.

ಇಂದು ಫರ್ದೀನ್ ಖಾನ್ ಅವರ ನಿವಾಸಕ್ಕೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿದ ಗುಂಡೂರಾವ್, ಅಂಗಾಂಗ ದಾನ ಮಾಡುವ ನಿರ್ಧಾರ ಕೈಗೊಂಡಿದ್ದ ಫರ್ದೀನ್ ಕುಟಂಬವನ್ನ ಸನ್ಮಾನಿಸಿದರು.

ಭೇಟಿ ಬಳಿಕ ತಮ್ಮ ಅಭಿಪ್ರಾಯ ಹಂಚಿಕೊಂಡ ದಿನೇಶ್‌ ಗುಂಡೂರಾವ್‌, ಅಂಗಾಂಗ ದಾನ ನಿಜವಾಗಿ ಆತ್ಮ ಚೈತನ್ಯ ನೀಡುವ ಕಾರ್ಯ,‌ ಮುಸ್ಲಿಂ ಸಮುದಾಯದಲ್ಲಿ ಅಂಗಾಂಗ ದಾನಕ್ಕೆ ಧಾರ್ಮಿಕ ಕಟ್ಟುಪಾಡುಗಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಫರ್ದೀನ್ ಕುಟುಂಬ ಧಾರ್ಮಿಕ ಕಟ್ಟುಪಾಡುಗಳನ್ನು ಮೀರಿ ಆತನ ದೇಹದ ಅಂಗಾಂಗಳನ್ನು ದಾನ ಮಾಡುವ ಮೂಲಕ ಆರು ಜನರ ಬದುಕಿಗೆ ಮರುಜೀವ ನೀಡಿದ್ದು ಮಾದರಿ ಕಾರ್ಯ, ಎಲ್ಲರೂ ಇದೇ ರೀತಿ ಅಂಗಾಂಗ ದಾನಕ್ಕೆ ಮುಂದಾದರೆ ಹಲವರ ಜೀವ ಉಳಿಸಬಹುದು ಎಂದರು.

ಅಂಗಾಗ ದಾನದ ಹಿನ್ನೆಲೆ
22 ವರ್ಷದ ಫರ್ದೀನ್ ಖಾನ್ ಜೂನ್ 4 ರಂದು ಮದುವೆ ಸಮಾರಂಭ‌ ಮುಗಿಸಿ ವಾಪಸ್ ಬರುತ್ತಿದ್ದಾಗ ತುಮಕೂರಿನ ಶಿರಾ ಬಳಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದರು. ಆಸ್ಪತ್ರೆಗೆ ದಾಖಲಿಸಿದರೂ, ಗಂಭೀರ ಸ್ವರೂಪದ ಗಾಯಗಳಾಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಫರ್ದೀನ್ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದರು.ದಿನೇಶ್_ ಗುಂಡೂರಾವ್

ಈ ಸುದ್ದಿ ಓದಿದ್ದೀರಾ?:ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟೀನ್ ಪ್ರಾರಂಭ: ಸಿಎಂ ಸಿದ್ದರಾಮಯ್ಯ

ಜೂನ್ 7 ಬೆಳಗ್ಗೆ 11.55ಕ್ಕೆ ಫರ್ದೀನ್ ಖಾನ್ ‘ಮೆದುಳು ನಿಷ್ಕ್ರೀಯ’ಗೊಂಡಿರುವುದಾಗಿ ಆಸ್ಪತ್ರೆಯ ವೈದ್ಯರು ಘೋಷಿಸಿದ್ದರು. ಆದರೆ, ಮೆದುಳು ಮಾತ್ರ ನಿಷ್ಕ್ರಿಯಗೊಂಡರೂ ಉಳಿದೆಲ್ಲಾ ಅಂಗಾಂಗಗಳು ವೆಂಟಿಲೇಟರ್ ಸಹಾಯದಿಂದ ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದ್ದವು.

ಈ ದುಃಖದ ಸನ್ನಿವೇಶದಲ್ಲಿ ಫರ್ದೀನ್ ಕುಟುಂಬದವರು ತಮ್ಮ ಮಗನ ದೇಹದ ಅಂಗಾಂಗಗಳನ್ನು ದಾನ ಮಾಡುವ ದೊಡ್ಡ ನಿರ್ಧಾರ ತೆಗೆದುಕೊಳ್ಳುವ ಮೂಲಕ 6 ಜನರಿಗೆ ಜೀವ ತುಂಬಿದ್ದರು. ಆತನ ಹೃದಯವನ್ನು ನಾರಾಯಣ ಹೃದಯಾಲಯದಲ್ಲಿ ದಾಖಲಾಗಿದ್ದ 57 ವರ್ಷದ ವ್ಯಕ್ತಿಗೆ ಕಸಿ ಮಾಡಲಾಗಿದೆ.

ಪಿತ್ತಜನಕಾಂಗವನ್ನು ಯಶವಂತಪುರ ಸ್ಪರ್ಶ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ 42 ವರ್ಷದ ರೋಗಿಗೆ ಕಸಿ ಮಾಡಲಾಗಿದೆ. ಎಡ ಮೂತ್ರಪಿಂಡ ಮತ್ತು ಪ್ಯಾಂಕ್ರಿಯಾಸ್‌ನ್ನು ಅಪೋಲೋ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರೋಗಿಗೆ ಬಹು ಅಂಗಾಂಗ ಕಸಿ ಮಾಡಲಾಗಿದೆ. ಬಲ ಮೂತ್ರಪಿಂಡವನ್ನು ಸ್ಪರ್ಶ್ ಆಸ್ಪತ್ರೆಯ ರೋಗಿಗೆ ಕಸಿ ಮಾಡಿದರೆ, ಕಣ್ಣಿನ ಕಾರ್ನಿಯಾವನ್ನು ನಾರಾಯಣ ನೇತ್ರಾಲಯಕ್ಕೆ ನೀಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...