ಆಲ್ಕೋಹಾಲ್ ಉತ್ಪನ್ನಗಳಿಗೆ ಇನ್ನೂ ಹೆಚ್ಚಿನ ತೆರಿಗೆ ವಿಧಿಸುವಂತೆ ತಜ್ಞರ ಸಭೆ ಸರ್ಕಾರಕ್ಕೆ ಶಿಫಾರಸು

Date:

ಸಾರ್ವಜನಿಕ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮದ ಹಿನ್ನೆಲೆಯಲ್ಲಿ ಆಲ್ಕೋಹಾಲ್ ಉತ್ಪನ್ನಗಳಿಗೆ ಇನ್ನೂ ಹೆಚ್ಚಿನ ತೆರಿಗೆ ವಿಧಿಸುವಂತೆ ವಿವಿಧ ಕ್ಷೇತ್ರಗಳ ತಜ್ಞರ ಸಭೆಯು ಶಿಫಾರಸು ಮಾಡಿದೆ.

ಬೆಂಗಳೂರಿನಲ್ಲಿ ಕನ್ಸೂಮರ್ ವಾಯ್ಸ್ ಸಂಸ್ಥೆಯು ಇನ್‌ಸ್ಟಿಟ್ಯೂಟ್ ಫಾರ್ ಪಾಲಿಸಿ ರೀಸರ್ಚ್ ಸಹಭಾಗಿತ್ವದಲ್ಲಿ ರಾಜ್ಯ ಸರ್ಕಾರಕ್ಕೆ ಮಹತ್ವದ ಸಲಹೆ ಸೂಚನೆಗಳನ್ನು ನೀಡಲು ವಿವಿಧ ಕ್ಷೇತ್ರಗಳ ತಜ್ಞರ ಸಭೆ ಅಯೋಜಿಸಿತ್ತು.

ತಜ್ಞರ ಸಭೆಯಲ್ಲಿ ರಾಜ್ಯ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಪಿ.ಕೃಷ್ಣ ಭಟ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕ್ ಚಂದ್ರ, ಆರೋಗ್ಯ ಇಲಾಖೆ ಆಯುಕ್ತ ಡಿ.ರಣದೀಪ್,ರಾಜ್ಯ ಸರ್ಕಾರದ ಎನ್ ಸಿಡಿ ಕಾರ್ಯಪಡೆಯ ಸದಸ್ಯ ಡಾ.ವಿಶಾಲ್ ರಾವ್ ಇನ್ನಿತರರು ಪಾಲ್ಗೊಂಡು ಆಲ್ಕೋಹಾಲ್ ಉತ್ಪನ್ನಗಳಿಗೆ ಹೆಚ್ಚಿನ ತೆರಿಗೆ ವಿಧಿಸಲು ಶಿಫಾರಸು ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮದ್ಯದ ಸೇವನೆ ಬಳಕೆ ಪ್ರಮಾಣವನ್ನು ಕಡಿಮೆ ಮಾಡುವ ಕುರಿತು ನೀತಿ, ಶಿಫಾರಸುಗಳನ್ನು ರೂಪಿಸುವುದು ಮತ್ತು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗುವ ಸಹಭಾಗಿತ್ವವನ್ನು ಹೊಂದುವುದರ ಬಗ್ಗೆ ಸಭೆಯಲ್ಲಿ ವಿಸ್ತೃತವಾಗಿ ಚರ್ಚಿಸಲಾಯಿತು.

ನ್ಯಾಯಮೂರ್ತಿ ಪಿ.ಕೃಷ್ಣ ಭಟ್ ಅವರು, “ಆಲ್ಕೋಹಾಲ್ ಪ್ರಮಾಣವನ್ನು ಸ್ಪಷ್ಟವಾಗಿ ಸೂಚಿಸುವ ವ್ಯವಸ್ಥೆ ಜಾರಿಗೆ ಬರಬೇಕು” ಎಂದು ಸಲಹೆ ನೀಡಿದರು. ಇದಕ್ಕೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕ್ ಚಂದ್ರ ಅವರು, ತಮ್ಮ ಸಹಮತ ವ್ಯಕ್ತಪಡಿಸಿ, “ಸಿಗರೇಟ್ ಪ್ಯಾಕೇಟ್ ಗಳಲ್ಲಿ ಇರುವ ರೀತಿಯಲ್ಲಿ ಈ ಲೇಬಲಿಂಗ್ ವ್ಯವಸ್ಥೆ ಉತ್ತಮ” ಎಂದರು.

“ಇಂತಹ ನೀತಿ ನಿರೂಪಣೆಗಳನ್ನು ಸಂರಚಿಸುವ ವಿಚಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ಇಲಾಖೆ ಆಯುಕ್ತ ಡಿ.ರಣದೀಪ್ ತಿಳಿಸಿದರು.

ಐಪಿಆರ್ ನಿರ್ದೇಶಕ ಅಮಿತ್ ಕಾರ್ಣಿಕ್ ಅವರು ಮಾತನಾಡಿ, “ಮದ್ಯ ಸೇವನೆ ಪ್ರಮಾಣವನ್ನು ಕಡಿಮೆ ಮಾಡುವ ದಿಸೆಯಲ್ಲಿ ಮದ್ಯಪಾನ ಸಂಯಮ ಮಂಡಳಿ ಕಾರ್ಯಪ್ರವೃತ್ತವಾಗಬೇಕಾದ ಅಗತ್ಯವಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...