9 ಮತ್ತು 10ನೇ ತರಗತಿಗೆ ಮೊಟ್ಟೆ ವಿಸ್ತರಣೆ; ಸಿದ್ದರಾಮಯ್ಯರನ್ನು ಅಭಿನಂದಿಸಿ ಪತ್ರ ಬರೆದ ವಿದ್ಯಾರ್ಥಿನಿ

Date:

  • ಕುಂದಗೋಳ ತಾಲ್ಲೂಕಿನ ಆಶಾ ನೆಹರು ಪಾಟೀಲ್‌ ಪತ್ರ ಬರೆದ ವಿದ್ಯಾರ್ಥಿನಿ
  • ‘ಮಕ್ಕಳಲ್ಲಿನ ಭೇದಭಾವ ಹೋಗಲಾಡಿಸಿದ ನಿಮಗೆ ವಿಶೇಷ ಅಭಿನಂದನೆಗಳು’

1 ರಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು ಕಾಂಗ್ರೆಸ್ ಸರ್ಕಾರವು 9 ಮತ್ತು 10ನೇ ತರಗತಿಗೂ ವಿಸ್ತರಿಸಿ‌ದ್ದು, ಈ ಬಗ್ಗೆ ಸ್ವತಃ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ವಿದ್ಯಾರ್ಥಿನಿಯೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಸಂತಸ ಹಂಚಿಕೊಂಡಿದ್ದಾರೆ.

ತಾವು ಮುಖ್ಯಮಂತ್ರಿಯಾಗಿ ಜಾರಿಗೆ ತಂದಂತಹ ಅನೇಕ ಯೋಜನೆಗಳು ರಾಜ್ಯದ ಅನೇಕ ಕುಟುಂಬಗಳಿಗೆ ವರದಾನವಾಗಿವೆ. ವಿಶೇಷವಾಗಿ ತಾವು ಜಾರಿ ಮಾಡಿರುವ ಕ್ಷೀರಭಾಗ್ಯ, ಶ್ಯೂ ಭಾಗ್ಯ ಇಂದು ಅನೇಕ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಸಹಕಾರಿಯಾಗಿದೆ ಎಂದು ವಿದ್ಯಾರ್ಥಿನಿ ಆಶಾ ನೆಹರು ಪಾಟೀಲ್‌ ತಿಳಿಸಿದ್ದಾರೆ.

ಮುಂದುವರಿದು, ಹಿಂದಿನ ಸರ್ಕಾರ 1 ರಿಂದ 8ನೇ ತರಗತಿವರೆಗೂ ಮಾತ್ರ ಮೊಟ್ಟೆ ವಿತರಿಸಿತ್ತು. ಇದರಿಂದ ಒಂದೇ ಶಾಲೆಯಲ್ಲಿ ಕಲಿಯುತ್ತಿದ್ದ 9 ಮತ್ತು 10ನೇ ತರಗತಿ ಮಕ್ಕಳಿಗೆ ಭೇದಭಾವ ಮಾಡಿದಂತಾಗಿತ್ತು. ಇದನ್ನು ಹೋಗಲಾಡಿಸಿರುವ ನಿಮಗೆ ವಿಶೇಷ ಅಭಿನಂದನೆಗಳು” ಎಂದು ವಿದ್ಯಾರ್ಥಿನಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ಅನ್ನಭಾಗ್ಯ’ದಲ್ಲಿ ವಂಚನೆ: ಟ್ವಿಟ್ಟರ್ ದೂರಿಗೆ ಸ್ಪಂದಿಸಿದ ಸಿಎಂ ಕಚೇರಿ; ನ್ಯಾಯಬೆಲೆ ಅಂಗಡಿ ಅಮಾನತು

ವಿದ್ಯಾರ್ಥಿನಿಯ ಪತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸಿದ್ದರಾಮಯ್ಯ, “ನಾಡಿನ ಪ್ರತಿ ವಿದ್ಯಾರ್ಥಿಗೂ ಪೌಷ್ಟಿಕ ಆಹಾರ ದೊರಕಬೇಕು, ಯಾರೊಬ್ಬರೂ ಈ ಅವಕಾಶದಿಂದ ವಂಚಿತರಾಗಬಾರದು ಎಂಬ ಸದಾಶಯದೊಂದಿಗೆ ಈ ಮೊದಲು 1 ರಿಂದ 8ನೇ ತರಗತಿಯ ವರೆಗಿನ ಮಕ್ಕಳಿಗೆ ವಿತರಿಸಲಾಗುತ್ತಿದ್ದ ಮೊಟ್ಟೆಯನ್ನು ನಮ್ಮ ಸರ್ಕಾರವು 9 ಮತ್ತು 10ನೇ ತರಗತಿಗೂ ವಿಸ್ತರಿಸಿದೆ. ನಮ್ಮ ಈ ವಿದ್ಯಾರ್ಥಿಸ್ನೇಹಿ ನಿರ್ಧಾರದ ಬಗ್ಗೆ ಆಶಾ ನೆಹರು ಪಾಟೀಲ್ ಎಂಬ ಪುಟ್ಟ ಬಾಲಕಿಯೊಬ್ಬಳು ನನಗೆ ಪತ್ರ ಬರೆದು ತನ್ನ ಸಂತಸ ಹಂಚಿಕೊಂಡಿದ್ದಾಳೆ ಮಾತ್ರವಲ್ಲ, ಇಂತಹ ಕಾರ್ಯಕ್ರಮಗಳನ್ನು ನೀಡುತ್ತಿರುವ ತಾವು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಅಕ್ಕರೆಯಿಂದ ಸಲಹೆ ನೀಡಿದ್ದಾಳೆ” ಎಂದು ಪ್ರತಿಕ್ರಿಯಿಸಿದ್ದಾರೆ.

“ಪುಟ್ಟ ಬಾಲಕಿಯ ಪತ್ರವು ಈ ಯೋಜನೆಯನ್ನು ರೂಪಿಸಿ ಜಾರಿಗೊಳಿಸಿದ ನನ್ನ ಉದ್ದೇಶವನ್ನು ಸಾರ್ಥಕವಾಗಿಸಿತು. ಇಂಥ ಮುಗ್ಧ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿಸುವುದು ನಮ್ಮ‌ ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಶಾಂತಿ, ಸೌಹಾರ್ದತೆಯ ಸಮೃದ್ಧ ಕರ್ನಾಟಕ ನಿರ್ಮಾಣದ ನನ್ನ ಸಂಕಲ್ಪಕ್ಕೆ ಈ ದಿನ ಇನ್ನಷ್ಟು ಬಲ ಬಂದಿದೆ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...