ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿ; ಸಾವಿರ ಕೋಟಿ ರೂ. ಕ್ರಿಯಾ ಯೋಜನೆಗೆ ಮುಖ್ಯಮಂತ್ರಿ ಸೂಚನೆ

Date:

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ.ಗಳ ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಶುಕ್ರವಾರ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ, ಅನುದಾನ ಹಂಚಿಕೆ ಮಾಡುವಂತೆ ಸೂಚಿಸಿದರು.

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಕೇಂದ್ರ ಸರ್ಕಾರ ನೀಡುತ್ತಿದ್ದ ವಿದ್ಯಾರ್ಥಿ ವೇತನ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಇದನ್ನು ಭರಿಸಲು ತೀರ್ಮಾನಿಸಿದ್ದು, 6.4 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆಗೆ ಸಿದ್ಧವಾಗಿದೆ. ಆಯವ್ಯಯದಲ್ಲಿ 60 ಕೋಟಿ ರೂ. ನಿಗದಿಯಾಗಿದ್ದು, ಇಲಾಖೆಗೆ ಲಭ್ಯ ಅನುದಾನದಲ್ಲಿಯೇ ಮರುಹಂಚಿಕೆ ಮಾಡಿ ಹೆಚ್ಚುವರಿ 40 ಕೋಟಿ ಭರಿಸಲು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲ್ಪಸಂಖ್ಯಾತರಿಗೆ ಸವಲತ್ತು ವಿತರಿಸುವ ವಿವಿಧ ಯೋಜನೆಗಳಿಗೆ ಆನ್‌ಲೈನ್‌ ಮೂಲಕ ಭಾರಿ ಪ್ರಮಾಣದಲ್ಲಿ ಅರ್ಜಿ ಸ್ವೀಕೃತವಾಗಿದ್ದು, ಮುಂದಿನ ವರ್ಷ ಇದಕ್ಕೆ ಹೆಚ್ಚಿನ ಅನುದಾನ ಒದಗಿಸಲು ತೀರ್ಮಾನಿಸಲಾಯಿತು.

ವಸತಿ ಇಲಾಖೆ

ವಿವಿಧ ವಸತಿ ಯೋಜನೆಗಳಡಿ ಪ್ರಸಕ್ತ ಸಾಲಿನಲ್ಲಿ 3 ಲಕ್ಷ ಮನೆಗಳ ನಿರ್ಮಾಣದ ಗುರಿಗೆದುರಾಗಿ ಈ ವರೆಗೆ 1.31 ಲಕ್ಷ ಮನೆಗಳ ನಿರ್ಮಾಣ ಪೂರ್ಣಗೊಂಡಿದೆ. ಮುಕ್ತಾಯದ ಹಂತದಲ್ಲಿರುವ 1.6 ಲಕ್ಷ ಮನೆಗಳನ್ನು ಮಾರ್ಚ್‌ ಒಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಈ ಬಗ್ಗೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಸಂಬಂಧಿಸಿದ ಎಂಜಿನಿಯರುಗಳ ಸಭೆ ನಡೆಸಿ, ಲಿಂಟೆಲ್‌ ಮತ್ತು ಛಾವಣಿ ಹಂತದಲ್ಲಿರುವ ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮನೆಗಳನ್ನು ಮಾರ್ಚ್‌ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ತಿಳಿಸಲು ನಿರ್ದೇಶಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಜಾಬ್ ಹಿಂಜರಿಕೆ; ರಣತಂತ್ರವೋ, ಇಲ್ಲವೇ ಪಲಾಯನ ಮಂತ್ರವೇ?

ಕೊಳಗೇರಿ ಅಭಿವೃದ್ಧಿ ಮಂಡಳಿ

ಕೊಳೆಗೇರಿ ಅಭಿವೃದ್ಧಿ ಮಂಡಳಿಯ ವ್ಯಾಪ್ತಿಯಲ್ಲಿ ವಿವಿಧ ಯೋಜನೆಗಳಡಿ 1.8 ಲಕ್ಷ ಮನೆಗಳು ಪ್ರಗತಿಯಲ್ಲಿದೆ. ಫಲಾನುಭವಿಗಳ ವಂತಿಗೆ ಸೇರಿದಂತೆ 5 ಲಕ್ಷ ರೂ. ಗಳನ್ನು ಭರಿಸಲು ಹಾಗೂ ಇದಕ್ಕಾಗಿ ಮತ್ತು ಬಡಾವಣೆಗಳ ಮೂಲಸೌಕರ್ಯ ಅಭಿವೃದ್ಧಿಗಾಗಿ 500 ಕೋಟಿ ರೂ. ಬಿಡುಗಡೆ ಮಾಡಲು ಸಚಿವ ಸಂಪುಟ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ಮುಕ್ತಾಯದ ಹಂತದಲ್ಲಿರುವ 25 ಸಾವಿರ ಮನೆಗಳನ್ನು ಫೆಬ್ರುವರಿ ಅಂತ್ಯದ ವೇಳೆ ಪೂರ್ಣಗೊಳಿಸುವಂತೆ ಸೂಚಿಸಿದರು.

ರಾಜೀವ್‌ ಗಾಂಧಿ ವಸತಿ ನಿಗಮದ ಮುಕ್ತಾಯದ ಹಂತದಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಅಗತ್ಯವಿರುವ ಅನುದಾನಕ್ಕೆ ಸಂಬಂಧಿಸಿದ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸುವಂತೆ ಹೇಳಿದರು. ನಿಗಮದ ವ್ಯಾಪ್ತಿಯಲ್ಲಿ 2,133 ಕೋಟಿ ರೂ. ಲಭ್ಯವಿದ್ದು, ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿರುವ ಮನೆಗಳನ್ನು ಪೂರ್ಣಗೊಳಿಸಲು ಸೂಚಿಸಿದರು.

ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ಹಜ್‌ ಸಚಿವ ಬಿ.ಝಡ್‌. ಜಮೀರ್‌ ಅಹ್ಮದ್‌ ಖಾನ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ.ಗೋವಿಂದರಾಜು, ನಸೀರ್‌ ಅಹ್ಮದ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್‌, ಹಣಕಾಸು ಇಲಾಖೆ ಕಾರ್ಯದರ್ಶಿ ಪಿ.ಸಿ. ಜಾಫರ್‌, ವಸತಿ ಇಲಾಖೆ ಕಾರ್ಯದರ್ಶಿ ನವೀನ್‌ ರಾಜ್‌ ಸಿಂಗ್‌, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್‌ ಜೈನ್‌ ಹಾಗೂ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...