ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ: ಬಿಜೆಪಿಯ ಅಮಿತ್ ಮಾಳವೀಯ

Date:

ಆಧಾರ್ ಕಾರ್ಡ್‌ ಪೌರತ್ವದ ಪುರಾವೆಯಲ್ಲ. ಸುಪ್ರೀಂ ಕೋರ್ಟ್ ತನ್ನ ಮಧ್ಯಂತರ ಆದೇಶದಲ್ಲಿ ಆಧಾರ್ ಅನ್ನು SIRಗೆ ಮಾನ್ಯ ದಾಖಲೆಯಾಗಿ ಬಳಸಬೇಕೆಂದು ಸೂಚಿಸಿಲ್ಲ ಅಥವಾ ನಿರ್ದೇಶಿಸಿಲ್ಲ. ವಿರೋಧ ಪಕ್ಷವು ಈ ವಿಷಯದ ಬಗ್ಗೆ ಅಪಪ್ರಚಾರ ಮಾಡುತ್ತಿದೆ ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಹೇಳಿದ್ದಾರೆ.

ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(SIR)ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ತಾವು ಬಿಹಾರದ ಮತದಾರರು ಎಂದು ಸಾಬೀತುಪಡಿಸಲು ಮತದಾರರು ಒಟ್ಟು 11 ದಾಖಲೆಗಳನ್ನು ಸಲ್ಲಿಸಬಹುದಾಗಿದೆ. ಆದರೆ ಆಧಾರ್ ಕಾರ್ಡ್ ಅನ್ನು ಪುರಾವೆಯಾಗಿ ಪರಿಗಣಿಸಿಲ್ಲ. ಆದರೆ ಮತದಾರರನ್ನು ಸೇರಿಸಲು 11 ದಾಖಲೆಗಳು ಅಥವಾ ಆಧಾರ್ ಕಾರ್ಡ್ ಅನ್ನು ಸ್ವೀಕರಿಸುವಂತೆ ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ತಿಳಿಸಿದೆ. ಆದರೆ SIRಗೆ ಮಾನ್ಯ ದಾಖಲೆಯಾಗಿ ಬಳಸಬೇಕೆಂದು ಸೂಚಿಸಿಲ್ಲ ಅಥವಾ ನಿರ್ದೇಶಿಸಿಲ್ಲ ಎಂದು ಅಮಿತ್ ಮಾಳವೀಯ ಹೇಳಿಕೊಳ್ಳುತ್ತಿದ್ದಾರೆ.

ಇದನ್ನು ಓದಿದ್ದೀರಾ? ಹಾಸನ | ನಕಲಿ ಆಧಾರ್ ಕಾರ್ಡ್ ಬಳಸಿ ಅಕ್ರಮ ವಾಸ: ಮೂವರು ಬಾಂಗ್ಲಾದೇಶಿಯರ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆಗಸ್ಟ್ 22ರಂದು ಅಸೋಸಿಯೇಷನ್ ​​ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ vs ಚುನಾವಣಾ ಆಯೋಗ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನೀಡಿದ ಆದೇಶದ ವಿವಿಧ ವ್ಯಾಖ್ಯಾನಗಳನ್ನು ನೋಡುವುದು ತಮಾಷೆಯಾಗಿದೆ, ವಿಶೇಷವಾಗಿ ಆಧಾರ್‌ಗೆ ಸಂಬಂಧಿಸಿದ ವ್ಯಾಖ್ಯಾನ. ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಎಲ್ಲಿಯೂ ಆಧಾರ್ ಅನ್ನು ವಿಶೇಷ ತೀವ್ರ ಪರಿಷ್ಕರಣೆ (SIR) ಗಾಗಿ ಮಾನ್ಯ ದಾಖಲೆಯಾಗಿ ಬಳಸಬೇಕೆಂದು ಸೂಚಿಸುವುದಿಲ್ಲ, ನಿರ್ದೇಶಿಸಿಲ್ಲ” ಮಾಳವೀಯ ಹೇಳಿದ್ದಾರೆ.

ಹಾಗೆಯೇ, “ಒಬ್ಬ ವ್ಯಕ್ತಿಯ ಹೆಸರು ಸ್ಪಷ್ಟವಾಗಿಲ್ಲ ಎಂದು ಸಮರ್ಥ ನ್ಯಾಯಾಲಯವು ಘೋಷಿಸಿದರೆ ಅಥವಾ ಚುನಾವಣೆಗಳಲ್ಲಿ ಭ್ರಷ್ಟಾಚಾರ ಅಥವಾ ಅಪರಾಧಗಳಿಗೆ ಸಂಬಂಧಿಸಿದಂತೆ ಕಾನೂನಿನಡಿಯಲ್ಲಿ ಆ ವ್ಯಕ್ತಿಯನ್ನು ಅನರ್ಹಗೊಳಿಸಿದರೆ, ಆ ವ್ಯಕ್ತಿಯ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಬಹುದು” ಎಂದೂ ಮಾಳವೀಯ ಹೇಳಿಕೊಂಡಿದ್ದಾರೆ.

ಇನ್ನು ಬಿಹಾರದಲ್ಲಿ ಚುನಾವಣಾ ಆಯೋಗ ಎಸ್‌ಐಆರ್ ಪ್ರಕ್ರಿಯೆ ನಡೆಸಿ 65 ಲಕ್ಷ ಮಂದಿಯನ್ನು ಮತದಾರರ ಪಟ್ಟಿಯಿಂದ ಅಳಿಸಿ ಹಾಕಿದೆ. ಹಲವು ಬಡವರು ತಮ್ಮ ಹಕ್ಕನ್ನು ಕಳೆದುಕೊಂಡಿದ್ದಾರೆ ಎಂದು ವಿರೋಧ ಪಕ್ಷಗಳು ಆರೋಪಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಳವೀಯ, “ಚುನಾವಣಾ ಆಯೋಗವು ನಕಲಿ, ಸತ್ತ, ಬಾಂಗ್ಲಾದೇಶಿ ಮತ್ತು ರೋಹಿಂಗ್ಯಾ ಹೆಸರುಗಳನ್ನು ಅಳಿಸಿ ಹಾಕಿದೆ” ಎಂದಿದ್ದಾರೆ.

ಮಾಳವೀಯ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಕೇಂದ್ರ ಸರ್ಕಾರದ ಅದೆಷ್ಟೋ ಯೋಜನೆಗಳಿಗೆ ಆಧಾರ್ ಕಾರ್ಡ್ ಕಡ್ಡಾಯ ದಾಖಲೆಯಾಗಿದೆ. ಹಾಗೆಯೇ ಭಾರತೀಯರಾಗಿದ್ದರೆ ಮಾತ್ರ ಆಧಾರ್ ಕಾರ್ಡ್ ನೀಡಲಾಗುತ್ತದೆ. ಹಾಗಿರುವಾಗ ಆಧಾರ್ ಪೌರತ್ವದ ದಾಖಲೆ ಯಾಕೆ ಆಗುವುದಿಲ್ಲ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...