ಎಎಪಿ ಹರಿಯಾಣದಲ್ಲಿ ಸ್ಪರ್ಧಿಸಿದ್ದೇ ಕಾಂಗ್ರೆಸ್ ಸೋಲಿಸಲು; ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಆರೋಪ

Date:

ಹರಿಯಾಣ ಚುನಾವಣಾ ಫಲಿತಾಂಶ ಹೊರಬೀಳುತ್ತಿದೆ. ಆಡಳಿತಾರೂಢ ಬಿಜೆಪಿ 50 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಗೆಲುವಿನ ಹಾದಿಯಲ್ಲಿದೆ. ಗೆದ್ದೇಗೆಲ್ಲುತ್ತೇವೆಂಬ ಆತ್ಮವಿಶ್ವಾಸದಲ್ಲಿದ್ದ ಕಾಂಗ್ರೆಸ್‌ 35 ಸ್ಥಾನಗಳಲ್ಲಿ ಮುಂದಿದ್ದು, ನಿರಾಶೆಗೊಂಡಿದೆ. ಹರಿಯಾಣದಲ್ಲಿ ಕಾಂಗ್ರೆಸ್‌ ಗೆಲುವಿನಿಂದ ಹೊರಗುಳಿಯಲು ಎಎಪಿಯೇ ಕಾರಣವೆಂದು ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಆರೋಪಿಸಿದ್ದಾರೆ.

ಹರಿಯಾಣಕ್ಕೆ ಎಎಪಿ ಬಂದಿದ್ದೇ ಕಾಂಗ್ರೆಸ್‌ಅನ್ನು ದುರ್ಬಲಗೊಳಿಸಲು. ಪಕ್ಷಕ್ಕೆ ಹಿನ್ನಡೆ ಉಂಟುಮಾಡುವ ಮೂಲಕ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟಕ್ಕೆ ಎಎಪಿ ವಿಶ್ವಾಸ ದ್ರೋಹ ಎಸಗಿದೆ ಎಂದು ಆರೋಪಿಸಿದ್ದಾರೆ.

ಬಿಜೆಪಿ ಸವಾಲು ಹಾಕಿದ್ದ, ಪ್ರತಿಭಟನೆ ನಡೆಸಿದ್ದ ವಿನೇಶ್ ಫೋಗಟ್ ಥರದವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಅಂತಹ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಹಾನಿ ಮಾಡುವುದಕ್ಕಾಗಿಯೇ ಎಎಪಿ ಹರಿಯಾಣ ಚುನಾವಣಾ ಕಣಕ್ಕೆ ಪ್ರವೇಶಿಸಿತ್ತು. ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಎಎಪಿಗೆ ಬಿಜೆಪಿಯನ್ನು ಸೋಲಿಸುವತ್ತ ಗಮನ ಇರಲಿಲ್ಲ ಎಂದು ಸ್ವಾತಿ ದೂರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...