ಪಂಜಾಬ್ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಲಕ್ಕಿ ಒಬೆರಾಯ್ ಅವರನ್ನು ಶುಕ್ರವಾರ ಜಲಂಧರ್‌ನ ಐಷಾರಾಮಿ ಮಾಡೆಲ್ ಟೌನ್ ಪ್ರದೇಶದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮಾಡೆಲ್ ಟೌನ್ ಗುರುದ್ವಾರದ ಹೊರಗೆ ಈ ದಾಳಿ ನಡೆದಿದ್ದು, ದುಷ್ಕರ್ಮಿಗಳು ಒಬೆರಾಯ್ ಅವರ ಕಾರಿನ ಮೇಲೆ ಗುಂಡು ಹಾರಿಸಿದ್ದಾರೆ.
ಗುಂಡಿನ ದಾಳಿ ನಡೆಸಿದವರು ವಾಹನದ ಮೇಲೆ ಕನಿಷ್ಠ ಐದು ಸುತ್ತು ಗುಂಡು ಹಾರಿಸಿದ್ದಾರೆ, ಇದರಿಂದಾಗಿ ಕಾರಿನ ಕಿಟಕಿಗಳು ಪುಡಿಪುಡಿಯಾಗಿದೆ. ಗುಂಡೇಟಿನಿಂದ ಗಂಭೀರ ಗಾಯಗೊಂಡಿದ್ದ ಒಬೆರಾಯ್ ಅವರನ್ನು ತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ವೇಳೆ ಎಎಪಿ ನಾಯಕ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಬಿಹಾರ | ಜೆಡಿಯು ಹಿರಿಯ ನಾಯಕನ ಗುಂಡಿಕ್ಕಿ ಹತ್ಯೆ
ಘಟನೆಯ ನಂತರ, ಸ್ಥಳದಲ್ಲಿ ಭಾರೀ ಪೊಲೀಸ್ ಪಡೆ ನಿಯೋಜಿಸಲಾಗಿದೆ. ಪೊಲೀಸರು ಪ್ರದೇಶವನ್ನು ಸುತ್ತುವರೆದಿದ್ದು, ಭದ್ರತಾ ವ್ಯವಸ್ಥೆಗಳನ್ನು ಬಿಗಿಗೊಳಿಸಲಾಗಿದೆ.
ದಾಳಿ ನಡೆಸಿದವರನ್ನು ಗುರುತಿಸಲು ಮತ್ತು ಪತ್ತೆಹಚ್ಚಲು ಪೊಲೀಸ್ ತಂಡಗಳು ಸುತ್ತಮುತ್ತಲಿನ ಪ್ರದೇಶಗಳಿಂದ ಸಿಸಿಟಿವಿ ಪರಿಶೀಲಿಸುತ್ತಿದೆ.

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್ ಸುದ್ದಿಗಳಲ್ಲಿ ಆಸಕ್ತಿ.




