ಕೇಜ್ರಿವಾಲ್ ಬಂಧನದ ವಿರುದ್ಧ ಎಎಪಿ ಪ್ರತಿಭಟನೆ: ದೇಶದಾದ್ಯಂತ ಸಾಮೂಹಿಕ ಉಪವಾಸ

Date:

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರು ಮತ್ತು ಕಾರ್ಯಕರ್ತರು ಇಂದು ‘ಸಾಮೂಹಿಕ ಉಪವಾಸ’ ನಡೆಸಲಿದ್ದಾರೆ.

ಭಾರತ ಮತ್ತು ವಿದೇಶಗಳಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಬೆಂಬಲಿಗರು ಪಕ್ಷದ ‘ಸಾಮೂಹಿಕ ಉಪವಾಸ’ದಲ್ಲಿ ಭಾಗವಹಿಸಲಿದ್ದಾರೆ ಎಂದು ಎಎಪಿ ನಾಯಕ ಗೋಪಾಲ್ ರೈ ಹೇಳಿದ್ದಾರೆ. “ಜನರು ತಮ್ಮ ಮನೆಗಳಲ್ಲಿ ಉಪವಾಸ ಆಚರಿಸಬಹುದು ಮತ್ತು ದೆಹಲಿ ಮುಖ್ಯಮಂತ್ರಿಯನ್ನು ಬೆಂಬಲಿಸಬಹುದು” ಎಂದು ಅವರು ಹೇಳಿದರು.

ಇದನ್ನು ಓದಿದ್ದೀರಾ?   ತಿಹಾರ್ ಜೈಲಿನಿಂದಲೇ ಶಾಸಕರಿಗೆ ಕೇಜ್ರಿವಾಲ್ ನಿರ್ದೇಶನ: ಜನರ ಸಮಸ್ಯೆ ಪರಿಹರಿಸಲು ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎಎಪಿಯ ಎಲ್ಲಾ ಶಾಸಕರು, ಪದಾಧಿಕಾರಿಗಳು ಜಂತರ್ ಮಂತರ್‌ನಲ್ಲಿ ಬೆಳಗ್ಗೆ 11 ಗಂಟೆಗೆ ಸಾಮೂಹಿಕ ಉಪವಾಸ ಆರಂಭಿಸಲಿದ್ದಾರೆ. ಬೃಹತ್ ಸಮಾವೇಶಕ್ಕೆ ಸಿದ್ಧತೆ ನಡೆದಿದ್ದು, ಪ್ರತಿಭಟನಾ ಸ್ಥಳಕ್ಕೆ ತೆರಳುವ ರಸ್ತೆಗಳಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ. ಅಲ್ಲಲ್ಲಿ ಬ್ಯಾರಿಕೇಡಿಂಗ್‌ ಇದ್ದು ಇಂದು ಮಧ್ಯ ದೆಹಲಿಯ ಕೆಲವು ಭಾಗಗಳಲ್ಲಿ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆಯಿದೆ.

ಆಮ್ ಆದ್ಮಿ ಪಕ್ಷ ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ‘ಘೇರಾವ್’ ಕರೆ ನೀಡಿತ್ತು. ಪ್ರತಿಭಟನೆಯ ಸಮಯದಲ್ಲಿ ಹಲವಾರು ಎಎಪಿ ನಾಯಕರು ಮತ್ತು ಮಹಿಳೆಯರು ಸೇರಿದಂತೆ ಕಾರ್ಯಕರ್ತರನ್ನು ಪೊಲೀಸ್ ವಶಕ್ಕೆ ಪಡೆಯಲಾಗಿದೆ.

ಇದನ್ನು ಓದಿದ್ದೀರಾ? ಸಿಎಂ ಸ್ಥಾನದಿಂದ ಕೇಜ್ರಿವಾಲ್ ವಜಾ ಕೋರಿದ್ದ ಅರ್ಜಿ ವಿಚಾರಣೆಗೆ ಹೈಕೋರ್ಟ್ ನಕಾರ

ಬಂಧನದ ಸಮಯದ ಬಗ್ಗೆ ಎಎಪಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ಮುಂಬರುವ ಲೋಕಸಭೆ ಚುನಾವಣೆಗೆ ಕೇಜ್ರಿವಾಲ್ ಪ್ರಚಾರ ಮಾಡುವುದನ್ನು ತಡೆಯಲು ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ. ಸಚಿವರಾದ ಅತಿಶಿ ಮತ್ತು ಸೌರಭ್ ಭಾರದ್ವಾಜ್ ಅವರು ಸಿಎಂ ಜೈಲಿನಿಂದಲೇ ಆಡಳಿತಕ್ಕೆ ಸಂಬಂಧಿಸಿದ ಆದೇಶಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಸಿಎಂ ಜೈಲಿನಲ್ಲಿದ್ದರೂ ಕೂಡಾ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಎಎಪಿ ಸ್ಪಷ್ಟಪಡಿಸಿದೆ. ಈ ನಡುವೆ ಕೇಜ್ರಿವಾಲ್ ಸಿಎಂ ಸ್ಥಾನದಿಂದ ಅಮಾನತುಗೊಳಿಸಲು ಬಿಜೆಪಿಯು ಒತ್ತಾಯಿಸಿದೆ. ದೆಹಲಿ ಹೈಕೋರ್ಟ್ ಸತತ ಎರಡು ಬಾರಿ ಈ ಸಂಬಂಧ ಸಲ್ಲಿಸಲಾದ ಅರ್ಜಿ ತಿರಸ್ಕರಿಸಿದೆ. ಇನ್ನು ಕೇಜ್ರಿವಾಲ್ ಬಂಧನದ ಬಳಿಕ ಪರಸ್ಪರ ಭಿನ್ನಾಭಿಪ್ರಾಯ ಹೊಂದಿದ್ದ ಎಎಪಿ ಬಣವು ಈಗ ಒಟ್ಟಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...