ವಕ್ಫ್ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಎಎಪಿ ಶಾಸಕ ಅಮಾನತುಲ್ಲಾ

Date:

ವಕ್ಫ್‌ ಮಸೂದೆ ವಿರುದ್ಧ ಆಮ್ ಆದ್ಮಿ ಪಕ್ಷ (ಎಎಪಿ) ಶಾಸಕ ಅಮಾನತುಲ್ಲಾ ಖಾನ್ ಅವರು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆಯನ್ನು ಸಂವಿಧಾನಬಾಹಿರವೆಂದು ಘೋಷಿಸುವಂತೆ ಎಎಪಿ ಶಾಸಕರು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ವಕ್ಫ್ ಮಸೂದೆಯು ಮೂಲಭೂತ ಹಕ್ಕು7ಗಳನ್ನು ಉಲ್ಲಂಘಿಸುತ್ತದೆ. ಸಂವಿಧಾನದ 14, 15, 21, 25, 26, 29, 30 ಮತ್ತು 300-A ವಿಧಿಯನ್ನು ಉಲ್ಲಂಘಿಸುವುದಾಗಿಯೂ ಅಮಾನತುಲ್ಲಾ ಖಾನ್ ಉಲ್ಲೇಖಿಸಿದ್ದಾರೆ.

ಇದನ್ನು ಓದಿದ್ದೀರಾ? ವಕ್ಫ್ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಸಜ್ಜಾದ ಕಾಂಗ್ರೆಸ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದು ಮುಸ್ಲಿಮರ ಧಾರ್ಮಿಕ ಮತ್ತು ಸಾಂಸ್ಕೃತಿಕ ಸ್ವಾಯತ್ತತೆಯನ್ನು ಮೊಟಕುಗೊಳಿಸುತ್ತದೆ. ಕಾರ್ಯಾಂಗದ ಹಸ್ತಕ್ಷೇಪಕ್ಕೆ ಅನುವು ಮಾಡಿಕೊಡುತ್ತದೆ. ಧಾರ್ಮಿಕ ಮತ್ತು ದತ್ತಿ ಸಂಸ್ಥೆಗಳನ್ನು ನಿರ್ವಹಿಸುವ ಅಲ್ಪಸಂಖ್ಯಾತರ ಹಕ್ಕುಗಳನ್ನು ದುರ್ಬಲಗೊಳಿಸುತ್ತದೆ ಎಂದು ಖಾನ್ ಹೇಳಿದ್ದಾರೆ.

12 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಲೋಕಸಭೆ ಮತ್ತು ರಾಜ್ಯಸಭೆ ಎರಡೂ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದವು. ನಿರೀಕ್ಷೆಯಂತೆ 288 ಮತಗಳು ಮಸೂದೆ ಪರವಾಗಿ, 232 ಮತಗಳು ಮಸೂದೆ ವಿರುದ್ಧವಾಗಿ ಚಲಾವಣೆಯಾದವು. ರಾಜ್ಯಸಭೆಯಲ್ಲಿ, ಮಸೂದೆ ಪರವಾಗಿ 128 ಸದಸ್ಯರು ಮತ್ತು ವಿರುದ್ಧವಾಗಿ 95 ಸದಸ್ಯರು ಮತ ಚಲಾಯಿಸಿದರು. ಈ ಮಸೂದೆಗೆ ರಾಷ್ಟ್ರಪತಿ ಸಹಿ ಹಾಕಬೇಕಿದೆ.

ಇದಾದ ಬೆನ್ನಲ್ಲೇ ಹಲವು ನಾಯಕರು ವಕ್ಫ್ ಮಸೂದೆ ವಿರುದ್ಧವಾಗಿ ಕೋರ್ಟ್ ಕದ ತಟ್ಟಿದ್ದಾರೆ ಮತ್ತು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಮತ್ತು ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಈಗಾಗಲೇ ಅಪೆಕ್ಸ್ ಕೋರ್ಟ್‌ಗೆ ವಕ್ಫ್ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ.

ಕಾಂಗ್ರೆಸ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವುದಾಗಿ ಜೈರಾಮ್ ರಮೇಶ್ ಅವರು ಇತ್ತೀಚೆಗೆ ತಿಳಿಸಿದ್ದಾರೆ. ತಮಿಳುನಾಡಿನ ಮದುರೈನಲ್ಲಿ ನಡೆಯುತ್ತಿರುವ ಭಾರತೀಯ ಕಮ್ಯೂನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ (ಸಿಪಿಐಎಂ) ಅಖಿಲ ಭಾರತ ಮಹಾ ಅಧಿವೇಶನದಲ್ಲಿ ವಕ್ಫ್ ಮಸೂದೆ ವಿರುದ್ಧವಾಗಿ ನಿರ್ಣಯ ಅಂಗೀಕರಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...