ದೆಹಲಿ ಸಿಎಂ ಕೇಜ್ರಿವಾಲ್ ಬಂಧನ ಖಂಡಿಸಿ ಎಎಪಿ ಪ್ರತಿಭಟನೆ

Date:

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನವನ್ನು ವಿರೋಧಿಸಿ ಆಮ್ ಆದ್ಮಿ ಪಕ್ಷ (ಎಎಪಿ) ಭಾನುವಾರ ದೆಹಲಿಯಾದ್ಯಂತ ಮೇಣದಬತ್ತಿ ಮೆರವಣಿಗೆ ಮತ್ತು ಬಿಜೆಪಿ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲು ಕರೆ ಕೊಟ್ಟಿದೆ. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ.

ಪ್ರತಿಭಟನೆಗೆ ಕರೆಕೊಟ್ಟು ಎಎಪಿ ಪ್ರಕಟಣೆ ಹೊರಡಿಸಿದೆ. “ಬಿಜೆಪಿಯ ಸರ್ವಾಧಿಕಾರ ಮತ್ತು ಅರವಿಂದ್ ಕೇಜ್ರಿವಾಲ್ ಅವರ ಬಂಧನವನ್ನು ವಿರೋಧಿಸಿ ಭಾನುವಾರ ದೆಹಲಿಯಾದ್ಯಂತ ಮೇಣದಬತ್ತಿ ಮೆರವಣಿಗೆ ನಡೆಸಿ, ಬಿಜೆಪಿಯ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಲಾಗುತ್ತದೆ. ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನವನ್ನು ವಿರೋಧಿಸಿ ಈಗಾಗಲೇ ದೆಹಲಿಯ ಜನರು ಬೀದಿಗಿಳಿದಿದ್ದಾರೆ. ಕೇಜ್ರಿವಾಲ್ ಅವರ ಬೆಂಬಲಕ್ಕೆ ನಾವೆಲ್ಲರೂ ಒಟ್ಟಾಗಿ ನಿಲ್ಲಬೇಕಾಗಿದೆ. ಕೇಜ್ರಿವಾಲ್ ಬಂಧನವು ಮೋದಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವ ಕೊನೆಯ ಮೊಳೆಯೆಂಬುದನ್ನು ಸಾಬೀತುಪಡಿಸುತ್ತದೆ” ಎಂದು ಹೇಳಿದೆ.

ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21ರಂದು ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿತ್ತು.  ವಿಚಾರಣಾಧೀನ ನ್ಯಾಯಾಲಯವು ಮಾರ್ಚ್ 22ರಂದು ಅವರಿಗೆ ಜಾಮೀನು ನೀಡಲು ನಿರಾಕರಿಸಿದೆ. ಜಾಮೀನು ನಿರಾಕರಣೆ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಶನಿವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಪ್ರಕಟ; ಸೆಂಥಿಲ್ ಸ್ಪರ್ಧೆ

“ಬಂಧನ ಮತ್ತು ಜಾಮೀನು ನಿರಾಕರಣೆ ಆದೇಶ – ಎರಡೂ ‘ಕಾನೂನುಬಾಹಿರ’ವಾಗಿವೆ. ಬಂಧನದಿಂದ ಬಿಡುಗಡೆಯಾಗುವ ಅರ್ಹತೆಯನ್ನು ಸಿಎಂ ಕೇಜ್ರಿವಾಲ್‌ ಹೊಂದಿದ್ದಾರೆ” ಎಂದು ಅವರ ಕಾನೂನು ತಂಡ ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿರುವ ಮನವಿಯಲ್ಲಿ ತಿಳಿಸಿದೆ.

ಎಎಪಿ ಮಾರ್ಚ್ 24ರ ಭಾನುವಾರದಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿಗಳಿಂದ ತಕ್ಷಣದ ವಿಚಾರಣೆ ಕೋರಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...