ದೆಹಲಿ ವಿಧಾನಸಭೆ ಚುನಾವಣೆ | ಎಎಪಿಯ ಅಂತಿಮ ಅಭ್ಯರ್ಥಿ ಪಟ್ಟಿ ಬಿಡುಗಡೆ

Date:

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷ (ಎಎಪಿ) ಭಾನುವಾರ (ಡಿಸೆಂಬರ್ 15) 38 ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದು, ದೆಹಲಿ ಮುಖ್ಯಮಂತ್ರಿ ಅತಿಶಿ ಮತ್ತೊಮ್ಮೆ ಕಲ್ಕಾಜಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಸೌರಭ್ ಭಾರದ್ವಾಜ್ ಗ್ರೇಟರ್ ಕೈಲಾಶ್‌ನಲ್ಲಿ ಎಎಪಿ ಟಿಕೆಟ್‌ನಲ್ಲಿ ಕಣಕ್ಕಿಳಿಯಲಿದ್ದಾರೆ.

ಇದನ್ನು ಓದಿದ್ದೀರಾ? ಆರೋಪ-ಜೈಲು-ಜಾಮೀನು; ದೆಹಲಿಯನ್ನು ಮತ್ತೆ ಗೆಲ್ಲುವರೇ ಕೇಜ್ರಿವಾಲ್‌?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಸ್ತೂರ್ಬಾ ನಗರದಲ್ಲಿ ಹಾಲಿ ಶಾಸಕ ಮದನ್ ಲಾಲ್ ಬದಲಿಗೆ ರಮೇಶ್ ಪೆಹಲ್ವಾನ್‌ಗೆ ಎಎಪಿ ಟಿಕೆಟ್ ನೀಡಿದೆ. ರಮೇಶ್ ಪೆಹಲ್ವಾನ್‌ ಮತ್ತು ಕೌನ್ಸಿಲರ್ ಕುಸುಮ್ ಲತಾ ಇಂದೇ ಬಿಜೆಪಿಯಿಂದ ಎಎಪಿಗೆ ಸೇರ್ಪಡೆಯಾಗಿದ್ದಾರೆ.

ಇನ್ನು ಎಎಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಗೋಪಾಲ್ ರೈ (ಬಾಬರ್‌ಪುರ), ಅಮಾನತುಲ್ಲಾ ಖಾನ್ (ಓಖ್ಲಾ) ಮತ್ತು ಸತ್ಯೇಂದ್ರ ಕುಮಾರ್ ಜೈನ್ (ಶಕುರ್ ಬಸ್ತಿ) ಹೆಸರುಗಳಿವೆ. ಮುಂಬರುವ ದೆಹಲಿ ಚುನಾವಣೆಗೆ ಎಎಪಿ ತನ್ನ 20 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದೆ.

ಎಎಪಿಯ ಮೊದಲ ಅಭ್ಯರ್ಥಿ ಪಟ್ಟಿಯಲ್ಲಿ, 11 ಹೆಸರುಗಳನ್ನು ಪ್ರಕಟಿಸಲಾಗಿತ್ತು. ಆ ಪೈಕಿ ಆರು ಮಂದಿ ಈ ಹಿಂದೆ ಬಿಜೆಪಿ ಮತ್ತು ಕಾಂಗ್ರೆಸ್‌ನಿಂದ ಎಎಪಿಗೆ ಸೇರ್ಪಡೆಗೊಂಡ ನಾಯಕರಾಗಿದ್ದು ಮೂವರು ಎಎಪಿ ನಾಯಕರಾಗಿದ್ದಾರೆ.

ಇದನ್ನು ಓದಿದ್ದೀರಾ? ಬ್ರೇಕಿಂಗ್ ನ್ಯೂಸ್ | ಕೈಲಾಶ್ ರಾಜೀನಾಮೆ ಬೆನ್ನಲ್ಲೇ ಬಿಜೆಪಿ ಮಾಜಿ ಶಾಸಕ ಅನಿಲ್ ಝಾ ಎಎಪಿ ಸೇರ್ಪಡೆ

ಎರಡನೇ ಪಟ್ಟಿಯಲ್ಲಿ ಎಎಪಿ 15 ಹಾಲಿ ಶಾಸಕರ ಹೆಸರನ್ನು ಬದಲಿಸಿದೆ. ಬದಲಿಗೆ ಎಎಪಿ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ನಾಯಕರನ್ನು ಆಯ್ಕೆ ಮಾಡಿದೆ.

ದೆಹಲಿ ವಿಧಾನಸಭೆಗೆ ಫೆಬ್ರವರಿಯಲ್ಲಿ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಶೀಘ್ರದಲ್ಲೇ ಚುನಾವಣೆಯ ಘೋಷಣೆಯನ್ನು ಮಾಡಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...