ಗಾಝಾದ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ: ಬೈಡನ್ ಜೊತೆಗಿನ ಸಭೆ ರದ್ದುಗೊಳಿಸಿದ ಅರಬ್ ದೇಶಗಳ ನಾಯಕರು

Date:

ಗಾಝಾದ ಆಸ್ಪತ್ರೆಯೊಂದರ ಮೇಲೆ ಇಸ್ರೇಲ್ ವಾಯು ದಾಳಿ ನಡೆಸಿ, ಸುಮಾರು 500ಕ್ಕೂ ಹೆಚ್ಚು ಜನರ ಬಲಿ ಪಡೆದುಕೊಂಡ ಘಟನೆಯ ಬೆನ್ನಲ್ಲೇ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಜೊತೆಗಿನ ಸಭೆಯನ್ನು ಅರಬ್ ದೇಶಗಳ ನಾಯಕರು ರದ್ದುಗೊಳಿಸಿದ್ದಾರೆ.

ಗಾಝಾದ ಆಸ್ಪತ್ರೆಯೊಂದರ ಮೇಲೆ ವಾಯು ದಾಳಿ ನಡೆಸಿ, ಸುಮಾರು 500ಕ್ಕೂ ಹೆಚ್ಚು ಜನರ ಬಲಿ ಪಡೆದುಕೊಂಡ ಘಟನೆಯ ಬೆನ್ನಲ್ಲೇ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಜೊತೆಗಿನ ಸಭೆಯನ್ನು ಅರಬ್ ದೇಶಗಳ ನಾಯಕರು ರದ್ದುಗೊಳಿಸಿರುವುದಾಗಿ ‘ಅಲ್-ಜಝೀರಾ’ ವರದಿ ಮಾಡಿದೆ.

ಅರಬ್ ನಾಯಕರು ಶೃಂಗಸಭೆಯನ್ನು ರದ್ದುಗೊಳಿಸಿರುವ ಬೆಳವಣಿಗೆಯು ಅಮೆರಿಕದ ಅಧ್ಯಕ್ಷರಿಗಾದ ದೊಡ್ಡ ಹಿನ್ನಡೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವಿಶ್ಲೇಷಣೆ ಮಾಡಿವೆ. ಯುದ್ಧ ಈವರೆಗೆ ಮುಂದುವರೆಯಲು ಅಮೆರಿಕಾವು ಇಸ್ರೇಲ್‌ಗೆ ನೀಡಿದ ನೇರ ಬೆಂಬಲವೇ ಕಾರಣ ಎಂದು ಮಾನವ ಹಕ್ಕುಗಳ ಹೋರಾಟಗಾರರು ಆರೋಪಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಸ್ರೇಲ್‌ಗೆ ಬೆಂಬಲ ಸೂಚಿಸುವುದಕ್ಕಾಗಿ ಅಮೆರಿಕದ ಅಧ್ಯಕ್ಷ ಜೋ ಬೈಡನ್ ಇಂದು ಇಸ್ರೇಲ್‌ಗೆ ಆಗಮಿಸುತ್ತಿದ್ದಾರೆ. ಇದರ ಮುನ್ನಾದಿನವೇ ಗಾಝಾದ ಅಹ್ಲಿ ಅರಬ್ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ದಾಳಿಯಿಂದ 500ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ.

ಇದನ್ನು ಓದಿದ್ದೀರಾ? ಇಸ್ರೇಲ್‌ನಿಂದ ಅಮಾನವೀಯ ಕೃತ್ಯ: ಆಸ್ಪತ್ರೆ ಮೇಲೆ ಬಾಂಬ್ ದಾಳಿ; 500ಕ್ಕೂ ಹೆಚ್ಚು ಮಂದಿ ಬಲಿ

ಈ ಘಟನೆಯ ಬೆನ್ನಲ್ಲೇ, ಜೋರ್ಡಾನ್‌ನ ವಿದೇಶಾಂಗ ಸಚಿವ ಅಬ್ದುಲ್ಲಾ ಹೇಳಿಕೆ ನೀಡಿದ್ದು, ಈಜಿಪ್ಟ್ ಅಧ್ಯಕ್ಷ ಅಬುಲ್ ಫತ್ತಾಹ್ ಎಲ್-ಸಿಸ್ಸಿ ಮತ್ತು ಪ್ಯಾಲೆಸ್ತೀನ್ ಪ್ರಾಧಿಕಾರದ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ಜೋ ಬೈಡನ್ ನಡೆಸಬೇಕಿದ್ದ ಶೃಂಗಸಭೆಯನ್ನು ರದ್ದುಗೊಳಿಸಲಾಗಿದೆ ಎಂದು ಘೋಷಿಸಿದ್ದಾರೆ.

‘ಆಸ್ಪತ್ರೆ ಘಟನೆಗೆ ಹಮಾಸ್ ಕಾರಣ’ ಎಂದು ಆರೋಪಿಸಿದ ಇಸ್ರೇಲ್ ಪ್ರಧಾನಿ

ಈ ನಡುವೆ ಘಟನೆಯ ಬಗ್ಗೆ ಹೇಳಿಕೆ ನೀಡಿರುವ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಗಾಝಾದ ಅಹ್ಲಿ ಅರಬ್ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ ನಡೆಸಿಲ್ಲ. ಈ ದುರಂತಕ್ಕೆ ಗಾಝಾದಲ್ಲಿನ ಹಮಾಸ್‌ ಅವರೇ ಹೊಣೆಗಾರರಾಗಿದ್ದಾರೆ. ಅವರು ಇಸ್ರೇಲ್ ಅನ್ನು ಗುರಿಯಾಗಿರಿಸಿ ಹಾರಿಸಿರುವ ರಾಕೆಟ್ ಆಸ್ಪತ್ರೆಗೆ ಬಿದ್ದಿದೆ ಎಂದು ಆರೋಪಿಸಿದ್ದಾರೆ.

ಇಸ್ರೇಲ್ ಪ್ರಧಾನಿ ಓರ್ವ ಸುಳ್ಳುಗಾರ: ವಿಶ್ವಸಂಸ್ಥೆಯ ಪ್ಯಾಲೆಸ್ತೀನ್ ರಾಯಭಾರಿ

ಇಸ್ರೇಲ್ ಪ್ರಧಾನಿಯ ಹೇಳಿಕೆಯ ಬಗ್ಗೆ ಪತ್ರಕರ್ತರೋರ್ವರು ಕೇಳಿದ ಪ್ರಶ್ನೆಗೆ ಉತ್ತರಿಸಿರುವ ವಿಶ್ವಸಂಸ್ಥೆಯ ಪ್ಯಾಲೆಸ್ತೀನ್ ರಾಯಭಾರಿ ರಿಯಾದ್ ಮನ್ಸೂರ್, ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಓರ್ವ ಸುಳ್ಳುಗಾರ. ಈ ಆಸ್ಪತ್ರೆಯ ಸುತ್ತಲೂ ಹಮಾಸ್‌ನ ನೆಲೆ ಇದೆ ಎಂದು ಭಾವಿಸಿ ಇಸ್ರೇಲ್ ದಾಳಿ ಮಾಡಿದೆ ಎಂದು ಅವರ ಡಿಜಿಟಲ್ ವಕ್ತಾರನೋರ್ವ ಟ್ವೀಟ್ ಮಾಡಿದ್ದಾರೆ. ಆ ನಂತರ ಅವರು ಆ ಟ್ವೀಟ್ ಅನ್ನು ಅಳಿಸಿದ್ದಾರೆ. ಆ ಟ್ವೀಟ್‌ನ ಪ್ರತಿ ನಮ್ಮ ಬಳಿ ಇದೆ. ಈಗ ಅವರು ಕಥೆಯನ್ನು ಬದಲಾಯಿಸಿದ್ದಾರೆ. ಪ್ಯಾಲೆಸ್ತೀನಿಯನ್ನರನ್ನು ದೂಷಿಸಲು ಈ ಪ್ರಯತ್ನ ಎಂದು ಆಕ್ರೋಶ ಹೊರಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...