ಲೈಂಗಿಕ ದೌರ್ಜನ್ಯ ಸಂತ್ರಸ್ತೆಯ ಅಪಹರಣ | ಮೇ 8ರವರೆಗೆ ಎಸ್‌ಐಟಿ ಕಸ್ಟಡಿಗೆ ಎಚ್ ಡಿ ರೇವಣ್ಣ

Date:

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಮಾಜಿ ಸಚಿವ, ಶಾಸಕ ಎಚ್‌ ಡಿ ರೇವಣ್ಣ ಅವರನ್ನು ಬೆಂಗಳೂರು ನ್ಯಾಯಾಲಯದ ನ್ಯಾಯಾಧೀಶರು ಮೂರು ದಿನಗಳ ಕಾಲ ಸಿಐಡಿ ಎಸ್‌ಐಟಿ (ವಿಶೇಷ ತನಿಖಾ ತಂಡದ) ವಶಕ್ಕೆ ನೀಡಿದ್ದಾರೆ.

ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರ ಪುತ್ರ ಹಾಗೂ ಜೆಡಿಎಸ್‌ ನಾಯಕರಾಗಿರುವ ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ ಹದಿನೇಳನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ರವೀಂದ್ರ ಕುಮಾರ್‌ ಎಂ ಕಟ್ಟಿಮನಿ ಅವರ ನಿವಾಸದಲ್ಲಿ ರವಿವಾರ ಸಂಜೆ ಎಸ್‌ಐಟಿ ಹಾಜರುಪಡಿಸಿತು.

ವಿಚಾರಣೆ ವೇಳೆ ಐದು ದಿನಗಳ ಕಾಲ ರೇವಣ್ಣ ಅವರನ್ನು ವಶಕ್ಕೆ ನೀಡಬೇಕೆಂದು ಕೋರಿ ರಿಮ್ಯಾಂಡ್‌ ಅರ್ಜಿ ಸಲ್ಲಿಸಿದ ಎಸ್‌ಐಟಿ “ಇದೊಂದು ಗಂಭೀರ ಪ್ರಕರಣ. ರೇವಣ್ಣ ಅವರು ಮಾಜಿ ಸಚಿವರಾಗಿದ್ದು ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ” ಎಂದು ತಿಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತ ರೇವಣ್ಣ ಪರ ವಕೀಲರ ಮೂರ್ತಿ ಡಿ ನಾಯಕ್‌ ಅವರು, “ಅಪಹರಣ ಪ್ರಕರಣಕ್ಕೂ ರೇವಣ್ಣನವರಿಗೂ ಯಾವುದೇ ಸಂಬಂಧ ಇಲ್ಲ. ಸಂತ್ರಸ್ತೆ ಈಗಾಗಲೇ ದೊರೆತಿದ್ದಾರೆ. ರೇವಣ್ಣನವರ ಪಾತ್ರದ ಬಗ್ಗೆ ಎಸ್‌ಐಟಿ ಕೂಡ ಏನನ್ನೂ ತಿಳಿಸಿಲ್ಲ. ಯಾವುದೇ ಸಾಕ್ಷ್ಯ ನಾಶ ಮಾಡುವುದಿಲ್ಲ” ಎಂದು ಭರವಸೆ ನೀಡಿದರು.

ಇದನ್ನು ಬಲವಾಗಿ ವಿರೋಧಿಸಿದ ಎಸ್‌ಐಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹದಿನೈದು ಅಂಶಗಳನ್ನು ಪ್ರಸ್ತಾಪಿಸಿತು. ಈ ಹಿನ್ನೆಲೆಯಲ್ಲಿ ರೇವಣ್ಣನವರನ್ನು ತನ್ನ ವಶಕ್ಕೆ ನೀಡಬೇಕೆಂದು ಮನವಿ ಮಾಡಿತು. ವಾದ ಆಲಿಸಿದ ನ್ಯಾಯಾಧೀಶರು ಮೇ 8ರವರೆಗೆ ಎಸ್‌ಐಟಿ ವಶಕ್ಕೆ ನೀಡಿ ಆದೇಶ ಹೊರಡಿಸಿದರು.

ಇದನ್ನು ಓದಿದ್ದೀರಾ? ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ | ಸಂತ್ರಸ್ತರಿಗೆ ಸಹಾಯವಾಣಿ ಆರಂಭಿಸಿದ ಎಸ್‌ಐಟಿ

ಪ್ರಕರಣಕ್ಕೆ ಸಂಬಂಧಿಸಿದಂತೆ ರೇವಣ್ಣ ಅವರು ಸಲ್ಲಿಸಿದ್ದ ಮಧ್ಯಂತರ ನಿರೀಕ್ಷಣಾ ಜಾಮೀನನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ನಿರಾಕರಿಸಿದ್ದ ಹಿನ್ನೆಲೆಯಲ್ಲಿ ರೇವಣ್ಣ ಅವರನ್ನು ದೇವೇಗೌಡರ ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ಕೂಡಲೇ ಬಂಧಿಸಲಾಗಿತ್ತು.

ನಿನ್ನೆ ಎಸ್‌ಐಟಿ ಕಚೇರಿಯಲ್ಲಿದ್ದ ಅವರನ್ನು ಇಂದು (ಭಾನುವಾರ ಸಂಜೆ) ಬೆಂಗಳೂರಿನ ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಿ ಆ ಬಳಿಕ ನ್ಯಾಯಾಧೀಶರೆದುರು ಹಾಜರುಪಡಿಸಲಾಗಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...