ರದ್ದಾದ ಕೃಷಿ ಕಾನೂನುಗಳನ್ನು ಮತ್ತೆ ಜಾರಿಗೆ ತರಬೇಕು: ಕಂಗನಾ ರಣಾವತ್

Date:

ಮೋದಿ ಜಪ ಮಾಡುತ್ತಲೇ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಂಡು, ಸಂಸದೆಯೂ ಆಗಿರವು ನಟಿ ಕಂಗನಾ ರಣಾವತ್ ಕೆಲ ಬಿಜೆಪಿ ನಾಯಕರಂತೆ ವಿವಾದಾತ್ಮಕ ಹೇಳಿಕೆಯಿಂದಲೇ ಸುದ್ದಿಯಾಗುತ್ತಿದ್ದಾರೆ. ಹರಿಯಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಬಿಜೆಪಿಗೆ ತಲೆನೋವಾಗಿ ಪರಣಮಿಸುತ್ತಿದ್ದಾರೆ. ಇಂದಿರಾ ಗಾಂಧಿ ಅವರ ವೇಷಭೂಷಣದಲ್ಲಿ ಕಂಗನಾ ನಿರ್ಮಿಸಿರುವ ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆಗೆ ಬಿಜೆಪಿಯೇ ಅಡ್ಡಿಯಾಗಿದೆ. ಆ ಸಿನಿಮಾ ಬಿಡುಗಡೆಯಾದರೆ, ಹರಿಣಾಣದ ಸಿಖ್ ಸಮುದಾಯ ತಮಗೆ ಮತ ಹಾಕುವುದಿಲ್ಲವೆಂಬ ಭಯ ಬಿಜೆಪಿ ನಾಯಕರಲ್ಲಿದೆ. ಇದೀಗ, ಕಂಗನಾ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದು, ಹರಿಯಾಣವೂ ಸೇರಿದಂತೆ ದೇಶದ ರೈತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಬಿಜೆಪಿಯನ್ನೂ ಗುರಿ ಮಾಡಿದ್ದಾರೆ.

ಅಕ್ಟೋಬರ್ 5ರಂದು ಹರಿಣಾಮ ವಿಧಾನಸಭೆಗೆ ಮತದಾನ ನಡೆಯಲಿದೆ. ಮೂರನೇ ಅವಧಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದೆ. ಇಂತಹದ ಸಮಯದಲ್ಲಿ, ಪಂಜಾಬ್-ಹರಿಯಾಣ ರೈತರ ಸುದೀರ್ಘ ಹೋರಾಟದ ನಂತರ ರದ್ದಾದ ಮೂರು ಕೃಷಿ ಕಾನೂನುಗಳನ್ನು ಮರಳಿ ತರಬೇಕೆಂದು ಕಂಗನಾ ಹೇಳಿದ್ದಾರೆ. ರೈತರು ಹಾಗೂ ಪ್ರತಿ ಪಕ್ಷಗಳ ವಾಗ್ದಾಳಿಗೆ ಸಿಲುಕಿದ್ದಾರೆ. ರದ್ದಾದ ಕೃಷಿ ಕಾನೂನುಗಳನ್ನು ಮರಳಿ ತರಲು ಎಂದಿಗೂ ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್‌ ಪ್ರತಿಜ್ಞೆ ಮಾಡಿದೆ.

ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ನಾಚನ್ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ನಡೆದ ಸ್ಥಳೀಯ ಜಾತ್ರೆಯಲ್ಲಿ ಕಂಗನಾ ಭಾವಹಿಸಿ ಮಾತನಾಡಿದ್ದಾರೆ. “ಕಂಗನಾ ಹೇಳಿಕೆ ವಿವಾದಕ್ಕೆ ಸಿಲುಕಬಹುದು ಎಂದು ನನಗೆ ತಿಳಿದಿದೆ. ಮೂರು ಕೃಷಿ ಕಾನೂನುಗಳನ್ನು ಮರಳಿ ತರಬೇಕು. ಆ ಕಾನೂನುಗಳು ರೈತರ ಕಲ್ಯಾಣ-ಆಧಾರಿತ ಕಾನೂನುಗಳೆಂದು ನಾನು ನಂಬುತ್ತೇನೆ. ರೈತರು ಈ ಕಾನೂನುಗಳ ಜಾರಿಗೆ ಒತ್ತಾಯಿಸಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಂಗನಾ ಹೇಳಿಕೆಯಿಂದ ಹರಿಯಾಣ ಬಿಜೆಪಿ ಅಂತರ ಕಾಯ್ದುಕೊಂಡಿದೆ. ‘ಆಕೆಯ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ’ ಎಂದು ಹರಿಯಾಣ ಬಿಜೆಪಿ ಮುಖ್ಯಸ್ಥ ಮೋಹನ್ ಲಾಲ್ ಬಡೋಲಿ ಹೇಳಿದ್ದಾರೆ. “ಕಂಗನಾ ಹಲವಾರು ವಿಷಯಗಳ ಬಗ್ಗೆ ಮಾತನಾಡುತ್ತಲೇ ಇರುತ್ತಾರೆ. ಆ ಕಾನೂನುಗಳನ್ನು ಒಮ್ಮೆ ಪ್ರಧಾನಿ ಮೋದಿ ಹಿಂತೆಗೆದುಕೊಂಡ ಮೇಲೆ, ಆ ಬಗ್ಗೆ ಹೆಚ್ಚಿಗೆ ಮಾತನಾಡಲು ಪಕ್ಷದಲ್ಲಿ ಯಾರಿಗೂ ಏನೂ ಉಳಿದಿರುವುದಿಲ್ಲ” ಎಂದು ಬಡೋಲಿ ಹೇಳಿದ್ದಾರೆ.

ಕೃಷಿ ಕಾನೂನುಗಳು ಮತ್ತೆ ಜಾರಿಯಾಗಲು ಎಂದಿಗೂ ಬಿಡುವುದಿಲ್ಲ ಎಂದು ಕಾಂಗ್ರೆಸ್‌ ಮತ್ತು ಎಎಪಿ ಹೇಳಿವೆ. “ಸರ್ಕಾರವು ಆ ಕರಾಳ ಕಾನೂನುಗಳನ್ನು ರದ್ದುಗೊಳಿಸುವುದಕ್ಕೂ ಮುನ್ನ 750ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಬಿಜೆಪಿ ಈಗ ಆ ಕಾನೂನುಗಳನ್ನು ಮತ್ತೆ ತರಲು ಯೋಜಿಸುತ್ತಿದೆ ಎಂಬುದನ್ನು ರೈತರು ಅರ್ಥಮಾಡಿಕೊಳ್ಳಬೇಕು” ಎಂದು ಹರಿಯಾಣ ಕಾಂಗ್ರೆಸ್‌ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...