ಎಸ್‌ ಟಿ ಸೋಮಶೇಖರ್‌ ವಿರುದ್ಧ ಕ್ರಮ; ಹಿರಿಯ ವಕೀಲರ ಜೊತೆ ಚರ್ಚಿಸಿ ನಿರ್ಧಾರ: ಆರ್‌ ಅಶೋಕ್‌

Date:

ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಅವರು ಅಡ್ಡಮತದಾನ ಮಾಡಿರುವ ಬಗ್ಗೆ ಪ್ರತಿಪಕ್ಷದ ನಾಯಕ ಆರ್‌ ಅಶೋಕ್‌ ಪ್ರತಿಕ್ರಿಯಿಸಿದ್ದು, “ಹೈಕೋರ್ಟ್‌ನ ಹಿರಿಯ ವಕೀಲರ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ತಗೆದುಕೊಳ್ಳಲಾಗುವುದು” ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಥವಾ ಮೈತ್ರಿ ಅಭ್ಯರ್ಥಿಗೆ ಮತ ಹಾಕುವ ಬದಲು ಕಾಂಗ್ರೆಸ್‌ನ ಮೂರನೇ ಅಭ್ಯರ್ಥಿಗೆ ಮತ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಅವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ” ಎಂದರು.

“ಎಸ್ ಟಿ ಸೋಮಶೇಖರ್ ಮತ್ತು ಶಿವರಾಮ ಹೆಬ್ಬಾರ್‌ಗೂ ವಿಪ್ ಕಳಿಸಿದ್ದೆವು. ಕೊನೆಯ ಕ್ಷಣದವರೆಗೂ ನಮ್ಮ ಜೊತೆ ಮಾತಾಡಿದ್ದಾರೆ. ಪದೇ ಪದೇ ಮೋಸ ಮಾಡುವುದನ್ನು ಜನ ಸಹಿಸಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸೋಮಶೇಖರ್ ಅವರು ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೊತೆಗೆ ಓಡಾಡುವಾಗಲೇ ಗುಮಾನಿ ಇತ್ತು. ಜನ ಅವರನ್ನು ಕ್ಷಮಿಸಲ್ಲ. ಅವರನ್ನು ಮಂತ್ರಿ ಮಾಡಿ, ಮೈಸೂರು ಉಸ್ತುವಾರಿ ಮಾಡಿದ್ದೆವು. ಅಭಿವೃದ್ಧಿಗೆ ಹಣ ಅಂತಾರೆ. ಹಿಂದೆ ಎಷ್ಟು ಬಾರಿ ಹಣ ಕೊಟ್ಟಿಲ್ಲ? ಇಂದು ಸೋಮಶೇಖರ್ ರಾಜಕೀಯವಾಗಿ ಸೂಸೈಡ್ ಮಾಡಿಕೊಂಡಿದ್ದಾರೆ” ಎಂದರು.

ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಪ್ರಸಾದ ಬೇಡ ಬಸ್ ಬೇಕು’ ಎಂದ ಬಾಲಕಿಯ ಮನವಿಯಲ್ಲಿದೆ ಮಹತ್ವದ ಸಂದೇಶ

ಎನ್​ ರವಿಕುಮಾರ್​ ಕಿಡಿ

“ನಮ್ಮ ಇಬ್ಬರು ಶಾಸಕರ ಮತ ಪಡೆಯಲು ಕಾಂಗ್ರೆಸ್ ದುಷ್ಟರಾಜಕಾರಣ ಮಾಡಿದೆ. ಕಾಂಗ್ರೆಸ್​ಗೆ ಮತ ಹಾಕಿದವರಿಗೆ ಇದು ಆತ್ಮದ್ರೋಹ ಎಂದು ಹೇಳುತ್ತೇವೆ. ಅವರಾಗಿಯೇ ಬಂದು ಪಕ್ಷ ಸೇರಿದರು, ಅಧಿಕಾರ ಅನುಭವಿಸಿದರು. ಮುಂದಿನ ದಿನಗಳಲ್ಲಿ ಆ ಎರಡೂ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ” ಎಂದು ವಿಧಾನ‌ ಪರಿಷತ್‌ನ ಬಿಜೆಪಿ ಸದಸ್ಯ ಎನ್​ ರವಿಕುಮಾರ್ ಹೇಳಿದರು.

ಎಸ್​ ಟಿ ಸೋಮಶೇಖರ್​​, ಶಿವರಾಮ್​ ಹೆಬ್ಬಾರ್ ವಿರುದ್ಧ ನಮ್ಮ ಪಕ್ಷದ ರಾಜ್ಯಾಧ್ಯಕ್ಷರು, ಕರ್ನಾಟಕದ ಉಸ್ತುವಾರಿಗಳು ಹೈಕಮಾಂಡ್​​ಗೆ ದೂರು ನೀಡಲಿದ್ದಾರೆ. ಪಕ್ಷದಲ್ಲಿ ಇಬ್ಬರೂ ಶಾಸಕರಿಗೂ ಯಾವುದೇ ಸಮಸ್ಯೆ ಆಗಿರಲಿಲ್ಲ. ಇದು ಅನುಕೂಲ ಸಿಂಧು ರಾಜಕಾರಣ ಎಂದು ಹೇಳಿದರು.

ರಾಜಕಾರಣದ ವ್ಯಭಿಚಾರ: ಸಿ ಟಿ ರವಿ

“ವ್ಯಕ್ತಿಯ ಸಂಬಂಧಕ್ಕಾಗಿ ರಾಜೀ ರಾಜಕಾರಣ ಒಳ್ಳೆಯದ್ದಲ್ಲ. ರಾಜಕಾರಣ ವ್ಯಭಿಚಾರ ಮಾಡುವವರು ಎಲ್ಲಾ ಕಡೆ ಸೆಟ್ ಆಗುತ್ತಾರೆ. ಹಾರ್ಡ್​ಕೋರ್, ಸಿದ್ಧಾಂತ ರಾಜಕಾರಣ ಮಾಡುವುದು ನಿಷ್ಠೂರ ಆಗುತ್ತಾರೆ. ವ್ಯಭಿಚಾರದ ರಾಜಕಾರಣಕ್ಕೆ ಯಾರೂ ಮಣೆ ಹಾಕಬಾರದು. ಪಕ್ಷದೊಳಗಿದ್ದು ರಾಜಕೀಯ ವ್ಯಭಿಚಾರ ಮಾಡುವುದು ಶೂನ್ಯ ಸಹನೆ” ಎಂದು ಸಿ ಟಿ ರವಿ ವಾಗ್ದಾಳಿ ನಡೆಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...