ಆ್ಯಸಿಡ್ ದುರ್ಬಳಕೆ ತಡೆಗೆ ಇನ್ನೆರಡು ದಿನದಲ್ಲಿ ಕ್ರಮ: ಸಚಿವ ಪರಮೇಶ್ವರ್

Date:

ಆ್ಯಸಿಡ್ ನಿಷೇಧದ ಕುರಿತು ರಾಜ್ಯ ಪೊಲೀಸ್ ಮಹಾನಿರ್ದೇಶಕರು ಸಂಬಂಧಪಟ್ಟ ಇಲಾಖೆಗೆ ಪತ್ರ ಬರೆಯಲಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ‌ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಆ್ಯಸಿಡ್ ದುರ್ಬಳಕೆಯಾಗುತ್ತಿದೆ. ಇದರಿಂದ ಮಹಿಳೆಯರು ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಎಲ್ಲರ ಕೈಗೂ ಸುಲಭವಾಗಿ ಆ್ಯಸಿಡ್ ಸಿಗಬಾರದು. ಅಗತ್ಯತೆ ಇರುವರಿಗೆ ಮಾತ್ರ ಸಿಗಬೇಕು. ಈ ಕುರಿತು ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು, ಇನ್ನೆರಡು ದಿನದಲ್ಲಿ ಸಂಬಂಧಪಟ್ಟ ಇಲಾಖೆ ಹಾಗೂ ಇಂಡಸ್ಟ್ರಿಗಳಿಗೆ ಪತ್ರ ಬರೆದು ಕ್ರಮ ತೆಗೆದುಕೊಳ್ಳಲಿದ್ದಾರೆ” ಎಂದು ತಿಳಿಸಿದರು.

“ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಕುರಿತು ಕೆಲವು ಮಹತ್ವದ ಸುಳಿವು ಸಿಕ್ಕಿವೆ. ಘಟನೆಯ ನಂತರ ಬಟ್ಟೆ ಬದಲಾಯಿಸಿಕೊಂಡು, ಬಸ್ಸಿನಲ್ಲಿ ಹೋಗಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿದೆ. ಪ್ರಕರಣದ ಎಲ್ಲ ವಿಷಯಗಳನ್ನು ಈಗಲೇ ಬಹಿರಂಗಪಡಿಸಲು ಸಾಧ್ಯವಿಲ್ಲ. ಆದಷ್ಟು ಶೀಘ್ರ ಆರೋಪಿಯನ್ನು ಹಿಡಿಯಲಾಗುವುದು” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...