ಬಿಜೆಪಿಗೆ ಮತ ಹಾಕದ ಮರಾಠರ ಮೇಲೆ ಹಲ್ಲೆ; ಕ್ರಮಕ್ಕೆ ಮರಾಠ ಮೀಸಲಾತಿ ಹೋರಾಟಗಾರ ಒತ್ತಾಯ

Date:

ಮಹಾರಾಷ್ಟ್ರದ ಬೀಡ್ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮತ ಹಾಕದ ಮರಾಠರ ಮೇಲೆ ಹಲ್ಲೆ ನಡೆಸುತ್ತಿರುವ ಕೆಲವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಮಹಾರಾಷ್ಟ್ರ ಗೃಹ ಸಚಿವ ದೇವೇಂದ್ರ ಫಡ್ನವೀಸ್ ಅವರನ್ನು ಮರಾಠ ಮೀಸಲಾತಿ ಹೋರಾಟಗಾರ ಮನೋಜ್ ಜಾರಂಗೆ ಭಾನುವಾರ ಒತ್ತಾಯಿಸಿದ್ದಾರೆ.

ಅಂತರವಾಲಿ ಸಾರಥಿ ಗ್ರಾಮದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದ ಎರಡನೇ ದಿನದಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇತ್ತೀಚೆಗೆ ಎನ್‌ಸಿಪಿ (ಎಸ್‌ಪಿ) ಅಭ್ಯರ್ಥಿ ಬಜರಂಗ ಸೋನಾವಣೆ ವಿರುದ್ಧ ಸೋತ ಬಿಜೆಪಿಯ ಪಂಕಜಾ ಮುಂಡೆ ಅವರಿಗೆ ಮತ ಹಾಕದ ಕಾರಣಕ್ಕೆ ಬೀಡ್ ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಮರಾಠಿಗರ ಮೇಲೆ ಹಲ್ಲೆ ನಡೆಸಲಾಗುತ್ತಿದೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ| ಬಿಜೆಪಿ ಸೋಲಿನ ಬಳಿಕ ಅಯೋಧ್ಯೆ ಜನರ ನಿಂದನೆ; ಕ್ರಮಕ್ಕೆ ಎಸ್‌ಪಿ ನಾಯಕ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇಂತಹ ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರು ಹಾಗೂ ಬೀಡಿನ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಮಾಡಿದ ಮನೋಜ್ ಜಾರಂಗೆ ಮರಾಠ ಯುವಕರು ಶಾಂತಿ ಮತ್ತು ಕೋಮು ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡಿದರು.

ಮರಾಠಾ ಹಿತಾಸಕ್ತಿಗಳನ್ನು ವಿರೋಧಿಸುವ ನಾಯಕರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಇದರ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು.

ಇದನ್ನು ಓದಿದ್ದೀರಾ?  ಬೀದರ್‌ | ಮರಾಠಿಗರ ಒಗ್ಗಟ್ಟಿನ ಲಾಭ ರಾಜಕೀಯ ಪಕ್ಷಗಳು ಬಳಕೆ : ಮನೋಜ ಜರಾಂಗೇ ಪಾಟೀಲ್

ಮರಾಠಾ ಸಮುದಾಯದ ಎಲ್ಲರನ್ನು ಕುಂಬಿಗಳೆಂದು (ಕೃಷಿಕ ಗುಂಪು) ಗುರುತಿಸುವ ಕರಡು ಅಧಿಸೂಚನೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ, ಕುಂಬಿಗಳನ್ನು ಮರಾಠರೆಂದು ಗುರುತಿಸಲು ಕಾನೂನು ರೂಪಿಸಬೇಕೆಂದು ಒತ್ತಾಯಿಸಿ ಜಾರಂಗೆ ಶನಿವಾರ ಅನಿರ್ದಿಷ್ಟಾವಧಿ ಉಪವಾಸ ಆರಂಭಿಸಿದರು.

ಕೃಷಿಕ ಗುಂಪು ಕುಂಬಿ ಪ್ರಸ್ತುತ ಒಸಿಬಿ ವರ್ಗದ ಅಡಿಯಲ್ಲಿ ಬರುತ್ತದೆ. ಜಾರಂಗೆ ಮರಾಠರು ಕೋಟಾ ಪ್ರಯೋಜನಗಳಿಗೆ ಅರ್ಹರಾಗುವಂತೆ ಮಾಡಲು ಎಲ್ಲಾ ಮರಾಠಿಗರಿಗೆ ಕುಂಬಿ ಪ್ರಮಾಣಪತ್ರಗಳನ್ನು ನೀಡಬೇಕೆಂದು ಒತ್ತಾಯಿಸುತ್ತಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...