- ಡಿವಿಎಸ್, ಕಟೀಲ್ ವಿರುದ್ಧ ಆಕ್ರೋಶ ಹೊರಹಾಕಿದ ಕಾರ್ಯಕರ್ತರು
- ಪಕ್ಷದ ಹೀನಾಯ ಸೋಲಿನ ಕಾರಣಕ್ಕೆ ಪಕ್ಷದ ನಾಯಕರ ವಿರುದ್ದ ಸಿಡಿಮಿಡಿ
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿರುವ ಬಿಜೆಪಿ, ಮತ್ತದರ ನಾಯಕರ ವಿರುದ್ಧ ಹಿಂದುತ್ವದಾದಿ ಸಂಘಟನೆಗಳ ಕಾರ್ಯಕರ್ತರ ಪಡೆ ಆಕ್ರೋಶ ಹೊರಹಾಕಿದೆ.
ಅದರಲ್ಲೂ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ವಿರುದ್ಧ ಕಿಡಿಕಾರಿದ್ದಾರೆ.
ತಮ್ಮ ಸಿಟ್ಟನ್ನು ಬಹಿರಂಗವಾಗಿಯೇ ಹೊರಹಾಕಿರುವ ಕಾರ್ಯಕರ್ತರು, ಸೋತ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಚಪ್ಪಲಿ ಹಾರ ಹಾಕಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಬ್ಯಾನರ್ ಅಳವಡಿಸಿರುವ ಕಾರ್ಯಕರ್ತರು, ತವರು ಕ್ಷೇತ್ರದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂಗೆ ಸೋಲಿನ ಬಿಸಿ ತಟ್ಟುವಂತೆ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ?: ಚಿಕ್ಕಮಗಳೂರು | ಬಿಜೆಪಿಯಿಂದ ನನ್ನ ಹೊರ ಹಾಕಿದ ಸಿ.ಟಿ ರವಿಯೇ ಕ್ಷೇತ್ರ ಖಾಲಿ ಮಾಡ್ಬೇಕಾಯ್ತು: ಎಂಪಿಕೆ
ಬ್ಯಾನರ್ ಬರಹದಲ್ಲಿ “ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ. ನೊಂದ ಹಿಂದೂ ಕಾರ್ಯಕರ್ತರು” ಎಂದು ಬರೆಯಲಾಗಿದೆ.
ಈ ಬ್ಯಾನರ್‌ನ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಕುರಿತಂತೆ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ.





