ನಟ ದರ್ಶನ್‌ ಜಾಮೀನು ಅರ್ಜಿ ವಜಾ, ನಟಿ ಪವಿತ್ರಾಗೂ ಇಲ್ಲ ಬಿಡುಗಡೆ ಭಾಗ್ಯ

Date:

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಎ2 ಆರೋಪಿ ನಟ ದರ್ಶನ್‌ ಅವರಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ.

ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್‌ ಅವರ ಜಾಮೀನು ಅರ್ಜಿಯನ್ನು ಸೋಮವಾರ ವಜಾಗೊಳಿಸಿ 57ನೇ ಸಿಸಿಎಚ್‌ ಕೋರ್ಟ್ ಆದೇಶಿಸಿದೆ.

ಜಾಮೀನು ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುದೀರ್ಘವಾಗಿ ನಡೆಸಿದ 57ನೇ ಸಿಸಿಎಚ್ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಗುರುವಾರ ಮುಕ್ತಾಯಗೊಳಿಸಿ, ಇಂದು (ಅ.14) ತೀರ್ಪು ಪ್ರಕಟಿಸಿದೆ. ನಟಿ ಪವಿತ್ರಾ ಗೌಡ ಅವರ ಅರ್ಜಿ ಕೂಡ ಇಂದು ವಜಾಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಾಗೆಯೇ ಇದೇ ಪ್ರಕರಣದ ಆರೋಪಿ ಎ8 ರವಿಶಂಕರ್‌ಗೆ 57ನೇ ಸಿಸಿಎಚ್‌ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ರೇಣುಕಾಸ್ವಾಮಿಯನ್ನು ಎ8 ರವಿಶಂಕರ್ ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆ ತಂದಿದ್ದ ಆರೋಪ ಈತನ ಮೇಲಿದೆ.

ದರ್ಶನ್‌ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಪರ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿ ಎಸ್‌ಪಿಪಿ ಪ್ರಸನ್ನಕುಮಾರ್ ಅವರು ವಾದ ಮಂಡಿಸಿದ್ದರು. ದರ್ಶನ್ ಸೇರಿ ನಾಲ್ವರಿಗೆ ಜಾಮೀನು ಮಂಜೂರು ಮಾಡದಂತೆ ಎಸ್‌ಪಿಪಿ ಆಕ್ಷೇಪಣೆ ಸಲ್ಲಿಸಿದ್ದರು. ದರ್ಶನ್ ಪರ ವಕೀಲ ಸಿ ವಿ ನಾಗೇಶ್ ಹಾಗೂ ಪವಿತ್ರಾ ಗೌಡ ಪರವಾಗಿ ವಕೀಲ ಟಾಮಿ ಸೆಬಾಸ್ಟಿಯನ್ ವಾದ ಮಂಡಿಸಿದ್ದರು.

ಈ ಸುದ್ದಿ ಓದಿದ್ದೀರಾ? ವಾಲ್ಮೀಕಿ ನಿಗಮ ಹಗರಣ | ಮಾಜಿ ಸಚಿವ ನಾಗೇಂದ್ರಗೆ ಜಾಮೀನು

ರೇಣುಕಸ್ವಾಮಿ ಕೊಲೆ ಆರೋಪದ ಮೇಲೆ ಜೂನ್‌ 11ರಂದು ದರ್ಶನ್ ಹಾಗೂ ಇತರರನ್ನು ಬಂಧಿಸಲಾಗಿತ್ತು. ಸದ್ಯ ದರ್ಶನ್‌ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ರಾಜಾತಿಥ್ಯ ಹಿನ್ನೆಲೆಯಲ್ಲಿ ನಟ ದರ್ಶನ್‌ ತೂಗುದೀಪ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿತ್ತು.

ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರಿಗೆ ಜಾಮೀನು ಮಂಜೂರಾಗಿದೆ. ಎ15 ಕಾರ್ತಿಕ್, ಎ 16 ಕೇಶವಮೂರ್ತಿ, ಎ17 ನಿಖಿಲ್ ನಾಯಕ್ ಗೆ ಜಾಮೀನು ಮಂಜೂರಾಗಿದೆ. ಕಾರ್ತಿಕ್ ಮತ್ತು ನಿಖಿಲ್ ನಾಯಕ್ ಗೆ 57ನೇ ಸಿಸಿಎಚ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದರೇ ಎ16 ಕೇಶವ್ ಮೂರ್ತಿಗೆ ಹೈಕೋರ್ಟ್ ಜಾಮೀನು ನೀಡಿದೆ.

ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಎಸಿಪಿ ಚಂದನ್‌ ನೇತೃತ್ವದಲ್ಲಿ 24ನೇ ಎಸಿಎಂಎಂ ನ್ಯಾಯಾಲಯಕ್ಕೆ 3991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ದೋಷಾರೋಪ ಪಟ್ಟಿ ಒಟ್ಟು 231 ಸಾಕ್ಷ್ಯಾಧಾರಗಳ ನ್ನೊಳಗೊಂಡಂತೆ ಒಟ್ಟು 291 ಪುಟಗಳ 3991 ಪುಟಗಳುಳ್ಳ ಏಳು ಸಂಪುಟಗಳ 10 ಕಡತಗಳನ್ನು ಒಳಗೊಂಡಿರುತ್ತದೆ. ಪವಿತ್ರಾಗೌಡ ಎ1 ಮತ್ತು ದರ್ಶನ್‌ ಎ2 ಆರೋಪಿಗಳಾಗಿದ್ದು, ಒಟ್ಟು 17 ಆರೋಪಿಗಳ ವಿರುದ್ಧ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿದೆ. ಚಾರ್ಜ್‌ಶೀಟ್‌ನಲ್ಲಿ ದರ್ಶನ್‌ ಗ್ಯಾಂಗ್‌ ವಿರುದ್ಧ ಕೊಲೆ, ಅಪಹರಣ, ಒಳಸಂಚು, ಸಾಕ್ಷ್ಯನಾಶ ಸೇರಿದಂತೆ ಹಲವು ಗಂಭೀರ ಅಪರಾಧಗಳನ್ನು ಉಲ್ಲೇಖಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...