ಹೊರಗುತ್ತಿಗೆ ದಂಧೆಯಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳು ಶಾಮೀಲು: ಎಚ್‌ ವಿಶ್ವನಾಥ್‌ ಆರೋಪ

Date:

ಸರ್ಕಾರದ ಕಚೇರಿಗಳಲ್ಲಿ ನೇಮಕ ಮಾಡಿಕೊಳ್ಳುತ್ತಿರುವ ಹೊರಗುತ್ತಿಗೆ ದೊಡ್ಡ ದಂಧೆಯಾಗಿದ್ದು, ಸರ್ಕಾರ ಇದಕ್ಕೆ ಕಡಿವಾಣ ಹಾಕಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಆಗ್ರಹಿಸಿದರು.

ಬಜೆಟ್‌ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಹಲವು ಇಲಾಖೆಗಳಲ್ಲಿ ಅಂದಾಜು 2 ಲಕ್ಷ ನೌಕರರನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿದೆ. ಇದರಲ್ಲಿ ಐಎಎಸ್, ಐಪಿಎಸ್ ಅಧಿಕಾರಿಗಳು ಮತ್ತು ಅವರ ಸಂಬಂಧಿಕರೇ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.

ನಿವೃತ್ತಿಯಾದ ಸರ್ಕಾರಿ ನೌಕರನೊಬ್ಬ ಪ್ರಸ್ತುತ ಸಚಿವರೊಬ್ಬರಿಗೆ ವಿಶೇಷ ಕರ್ತವ್ಯ ಅಧಿಕಾರಿಯಾಗಿ ನೇಮಕವಾಗಿದ್ದಾನೆ. ಪಿಂಚಣಿ 80 ಸಾವಿರ, ಮಾಸಿಕ ವೇತನ 9 ಸಾವಿರ ಹಾಗೂ ವಾಹನ ಭತ್ಯೆ 45 ಸಾವಿರ ಸೇರಿದಂತೆ ತಿಂಗಳಿಗೆ 2 ಲಕ್ಷದ 5 ಸಾವಿರ ರೂ. ಪಡೆದುಕೊಳ್ಳುತ್ತಾನೆ. ಇದು ಅಗತ್ಯವಿದೆಯೇ ಎಂದು ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊರಗುತ್ತಿಗೆಯನ್ನು ನಾವು ಬೇರೊಂದು ಏಜೆನ್ಸಿಗೆ ನೀಡುತ್ತೇವೆ. ಆ ಏಜೆನ್ಸಿಯು ಒಬ್ಬ ನೌಕರನಿಗೆ ತಿಂಗಳಿಗೆ 15 ರಿಂದ 20 ಸಾವಿರ ರೂ. ಸರ್ಕಾರದಿಂದ ಪಡೆದುಕೊಳ್ಳುತ್ತದೆ. ಆದರೆ, ಈ ಏಜೆನ್ಸಿ ನೌಕರರಿಗೆ ತಿಂಗಳಿಗೆ 8 ರಿಂದ 10 ಸಾವಿರ ರೂ. ಮಾತ್ರವೇ ಕೊಡುತ್ತದೆ. ಶಾಸಕರ ಭವನದಲ್ಲಿ ಲಿಫ್ಟ್ ಓಡಿಸುವ ವಿಕಲಚೇತನನೊಬ್ಬನಿಗೆ ಸರ್ಕಾರದಿಂದ 15 ಸಾವಿರ ರೂ. ಕೊಡಲಾಗುತ್ತಿದೆ. ಆದರೆ, ಏಜೆನ್ಸಿಯವರು ಕೇವಲ 6 ಸಾವಿರ ರೂ. ಕೊಡುತ್ತಾರೆ. ಈ ದಂಧೆಗೆ ಮೊದಲು ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳು ಜನತೆಗೆ ಒಂದಿಲ್ಲೊಂದು ರೀತಿಯಲ್ಲಿ ಅನುಕೂಲ ಮಾಡಿಕೊಡುತ್ತದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಅಧಿವೇಶನ | ಕಾಗದ ಹರಿದು ಸ್ಪೀಕರ್ ಪೀಠದ ಮೇಲೆ ಎಸೆದ ಬಿಜೆಪಿ ಶಾಸಕರು

ವಿಧಾನ ಪರಿಷತ್‌ ನಡವಳಿಕೆಗಳ ಬಗ್ಗೆ ಬೇಸರ

ಇತ್ತೀಚೆಗೆ ವಿಧಾನ ಪರಿಷತ್‌ನಲ್ಲಿ ನಡೆಯುತ್ತಿರುವ ನಡವಳಿಕೆಗಳ ಬಗ್ಗೆ ಬೇಸರ ವ್ಯಕ್ತಪಡಿಸಿದ ಅವರು, ಮೊದಲು ನಾನು ಶಾಸಕನಾಗಿ ಬಂದ ಮೇಲೆ ಸದನದಲ್ಲಿ ಯಾರು, ಏನು ಮಾತನಾಡುತ್ತಿದ್ದಾರೆಂದು ದಿನಪೂರ್ತಿ ಆಲಿಸುತ್ತಿದ್ದೆವು. ಅಪ್ಪಿತಪ್ಪಿಯೂ ಯಾರಾದರೂ ಹಿರಿಯರು, ಮಾತನಾಡುತ್ತಿದ್ದರೆ ಮಧ್ಯಪ್ರವೇಶಿಸುತ್ತಿರಲಿಲ್ಲ, ಏಕೆಂದರೆ ನಮಗೆ ವಿಷಯ ತಿಳಿದಿಲ್ಲವೆಂದರೆ ಸದಸ್ಯರ ಮುಂದೆ ಮುಜುಗರವಾಗಬಹುದೆಂದು ಮೌನಕ್ಕೆ ಶರಣಾಗುತ್ತಿದ್ದೆವು. ಆದರೆ, ಈಗ ಗೊತ್ತೂ ಇಲ್ಲ, ಗುರಿಯೂ ಇಲ್ಲ. ಯಾರು, ಏನು ಮಾತನಾಡುತ್ತಿದ್ದಾರೆಂಬುದು ಅರ್ಥವಾಗುವುದಿಲ್ಲ. ಸುದ್ದಿ ಮಾಧ್ಯಮದವರೂ ಇದನ್ನು ಬೊಟ್ಟು ಮಾಡುವುದಿಲ್ಲ. ಅವರಿಗೂ ಕಿತ್ತಾಟ, ಟೀಕೆ, ಟಿಪ್ಪಣಿಯೇ ಬೇಕಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಉನ್ನತ ಸ್ಥಾನದಲ್ಲಿರುವ ಪ್ರಧಾನಿಗಳೇ ವಿರೋಧಪಕ್ಷಗಳ ಸಭೆಯನ್ನು ಭ್ರಷ್ಟರ ಸಂತೆ ಎಂದು ಕರೆಯುತ್ತಾರೆ. ಪ್ರತಿಪಕ್ಷಗಳು ಬಜೆಟ್ ಅನ್ನು ಮನಸೋ ಇಚ್ಛೆ ಟೀಕಿಸುತ್ತಾರೆ. ಇದು ಜನರಿಂದ ಜನರಿಗಾಗಿ ಜನರಿಗೋಸ್ಕರ ಮಾಡಿರುವ ಬಜೆಟ್ ಎಂಬುದು ತಿಳಿಯುವುದಿಲ್ಲವೇ ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...