ಪರಿಸರ ಸಚಿವಾಲಯದ ಸಮಿತಿಗೆ ಅದಾನಿ ಕಂಪನಿ ಉದ್ಯೋಗಿ: ‘ದೋಸ್ತಿ ಎಂದರೆ ಹೀಗಿರಬೇಕು’ ಎಂದ ವಿಪಕ್ಷಗಳು

Date:

ಕೇಂದ್ರ ಸರ್ಕಾರದ ಪರಿಸರ ಸಚಿವಾಲಯದ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ತಜ್ಞರ ಮೌಲ್ಯಮಾಪನ ಸಮಿತಿಗೆ ಗೌತಮ್ ಅದಾನಿ ಕಂಪನಿಯ ಉದ್ಯೋಗಿಯೋರ್ವರನ್ನು ನೇಮಕ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ವಿಪಕ್ಷಗಳು ಟೀಕೆ ಮಾಡಿದೆ.

ತಜ್ಞರ ಮೌಲ್ಯಮಾಪನ ಸಮಿತಿಗೆ ಶ್ರೀಮಂತ ಉದ್ಯಮಿ ಗೌತಮ್ ಅದಾನಿ ಕಂಪನಿಯ ಉದ್ಯೋಗಿ ಜನಾರ್ದನ ಚೌಧರಿ ಎಂಬುವವರನ್ನು ನೇಮಕ ಮಾಡಲಾಗಿದ್ದು, ‘ಅದಾನಿ-ಪ್ರಧಾನಿಯ ದೋಸ್ತಿ ಎಂದರೆ ಹೀಗಿರಬೇಕು’ ಎನ್ನುವ ಮೂಲಕ ವಿಪಕ್ಷಗಳ ನಾಯಕರು ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸಿದ್ದಾರೆ.

ಈ ಬಗ್ಗೆ ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯನ್ನು ಹಂಚಿಕೊಂಡು ಟ್ವೀಟ್ ಮಾಡಿರುವ ಕೇರಳ ಕಾಂಗ್ರೆಸ್ ಘಟಕ, ‘ಅದಾನಿಯ ಪ್ರಧಾನ ಸೇವಕ, ಅದಾನಿಯ ಉದ್ಯೋಗಿ ಜನಾರ್ದನ ಚೌಧರಿ ಅವರನ್ನು ಪರಿಸರ ಸಚಿವಾಲಯದ ತಜ್ಞರ ಮೌಲ್ಯಮಾಪನ ಸಮಿತಿಗೆ ನೇಮಕ ಮಾಡಿದ್ದಾರೆ. ಈ ಸಮಿತಿಯು ಅದಾನಿಯ 6 ಯೋಜನೆಗಳಿಗೆ ಅಂದರೆ 10,300 ಮೆಗಾವ್ಯಾಟ್ ಸಾಮರ್ಥ್ಯದ ಯೋಜನೆಗೆ ಅನುಮೋದನೆ ನೀಡಲಿದೆ’ ಎಂದು ಕೇಂದ್ರದ ನಡೆಯನ್ನು ಟೀಕಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗೆ ಮಹಾರಾಷ್ಟ್ರದ ಸತಾರದಲ್ಲಿ 1500 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್ ಸ್ಥಾವರಕ್ಕೆ ಇವರೇ ಒಪ್ಪಿಗೆ ನೀಡಿದ್ದಾರೆ ಎಂದು ಆರೋಪಿಸಿದ್ದು, ಇದು ವ್ಯಾಪಾರವನ್ನು ಸುಲಭಗೊಳಿಸುವ ವಿಧಾನ ಎಂದು ವ್ಯಂಗ್ಯವಾಡಿದೆ.

ಶಿವಸೇನಾ (ಯಟಿಬಿ) ಹಾಗೂ ತೃಣಮೂಲ ಕಾಂಗ್ರೆಸ್ ಕೂಡ ಸರ್ಕಾರದ ಈ ನಡೆಯನ್ನು ಟೀಕಿಸಿದೆ. ‘ದೋಸ್ತಿ ಎಂದರೆ ಹೀಗಿರಬೇಕು’ ಎಂದು ಶಿವಸೇನಾದ ರಾಜ್ಯಸಭೆ ಸದಸ್ಯೆ ಪ್ರಿಯಾಂಕ ಚತುರ್ವೇದಿ ಕೇಂದ್ರದ ನಡೆಯನ್ನು ವ್ಯಂಗ್ಯವಾಡಿದ್ದಾರೆ.

ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್‌ನ ಸಲಹೆಗಾರರಾಗಿರುವ ಚೌಧರಿಯವರನ್ನು ಅದಾನಿ ಸಮೂಹದ ಜಲವಿದ್ಯುತ್‌ ಯೋಜನೆ ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಲಿರುವ ಪರಿಸರ ಸಚಿವಾಲಯದ ಮೌಲ್ಯಮಾಪನ ಸಮಿತಿಗೆ ಕಳೆದ ಸೆ. 27ರಂದು ನೇಮಕ ಮಾಡಲಾಗಿತ್ತು. ಸರ್ಕಾರ ಒಪ್ಪಿಗೆ ನೀಡುವುದಕ್ಕೂ ಮುನ್ನ ಈ ಮೌಲ್ಯಮಾಪನ ಸಮಿತಿಯು ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಹೊಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...