ವಿಧಾನ ಪರಿಷತ್ ಸದಸ್ಯರನ್ನು ಶಾಸಕರೆಂದು ಸಂಬೋಧಿಸಿ: ಮುಖ್ಯ ಕಾರ್ಯದರ್ಶಿಗೆ ಬಸವರಾಜ ಹೊರಟ್ಟಿ ಪತ್ರ

Date:

ಕರ್ನಾಟಕ ವಿಧಾನ ಸಭೆಯ ಸದಸ್ಯರನ್ನು ಶಾಸಕರೆಂದು ಸಂಬೋಧಿಸುವ ರೀತಿಯಲ್ಲಿಯೇ ವಿಧಾನ ಪರಿಷತ್ತಿನ ಸದಸ್ಯರನ್ನು ಸಹ ಶಾಸಕರೆಂದು ಸಂಬೋಧಿಸಬೇಕು ಎಂದು ವಿಧಾನ ಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ಸರ್ಕಾರದ ಆಮಂತ್ರಣ ಪತ್ರಿಕೆಗಳಲ್ಲಿ ಇದೇ ರೀತಿ ಉಲ್ಲೇಖಿಸಿ ಶಿಷ್ಟಾಚಾರ ನಿಯಮವನ್ನು ಪಾಲಿಸುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆಯೂ ಸೂಚಿಸಿದ್ದಾರೆ.

ತಮ್ಮ ಪತ್ರದಲ್ಲಿ ಬಸವರಾಜ ಹೊರಟ್ಟಿ ಅವರು, “ಕರ್ನಾಟಕ ರಾಜ್ಯದ ವಿಧಾನ ಮಂಡಲದಲ್ಲಿ ವಿಧಾನ ಪರಿಷತ್ತು ಹಾಗೂ ವಿಧಾನ ಸಭೆ ಎಂದು ಎರಡು ಪ್ರತ್ಯೇಕ ಶಾಸನ ಸಭೆಗಳಿವೆ. ಚಿಂತಕರ ಚಾವಡಿ, ಪ್ರಾಜ್ಞರ ಮನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ವಿಧಾನ ಮಂಡಲದ ಮೇಲ್ಮನೆಯಾಗಿರುವ ವಿಧಾನ ಪರಿಷತ್ತಿನಲ್ಲಿ 75 ಜನ ಸದಸ್ಯರಿದ್ದಾರೆ. ಪದವೀಧರರು, ಶಿಕ್ಷಕರು, ಸ್ಥಳೀಯ ಸಂಸ್ಥೆಗಳಿಂದ ಚುನಾಯಿತರಾದವರು, ವಿಧಾನ ಸಭೆಯಿಂದ ನಾಮ ನಿರ್ದೇಶಿತರು ಹಾಗೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಮಹನೀಯರುಗಳು ಸದರಿ ವಿಧಾನ ಪರಿಷತ್ತಿನ ಸದಸ್ಯರಾಗಿರುತ್ತಾರೆ. ವಿಧಾನಸಭೆಯಲ್ಲಿಯೂ 224 ಸದಸ್ಯರು ಜನರಿಂದ ಚುನಾಯಿತಗೊಂಡವರು. ಇದು ಎಲ್ಲರಿಗೂ ತಿಳಿದಿರುವ ವಿಷಯವೇ ಆಗಿದೆ” ಎಂದು ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಧಾನ ಸಭೆ ಹಾಗೂ ವಿಧಾನ ಪರಿಷತ್ತಿನ ಸದಸ್ಯರಿಗೆ ಅಧಿಕಾರ, ವೇತನ ಸೇರಿದಂತೆ ಎಲ್ಲ ಸೌಲಭ್ಯಗಳು ಏಕರೂಪವಾಗಿರುತ್ತವೆ. ಜೊತೆಗೆ ಎರಡು ಮನೆಯ ಸದಸ್ಯರಿಗೂ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ದಿ ವಾರ್ಷಿಕ ನಿಧಿಯನ್ನು ಸಹ ಸಮಾನವಾಗಿ ನೀಡಲಾಗುತ್ತಿದೆ. ಆದರೆ ವಿಷಾದದ ಸಂಗತಿ ಎಂದರೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಸದಸ್ಯರನ್ನು ಅಧಿಕಾರಿ ವರ್ಗದವರು ತಾರತಮ್ಯದಿಂದ ಕಾಣುತ್ತಿರುವುದು ಗಮನಕ್ಕೆ ಬಂದಿದೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ವಿಧಾನ ಸಭೆಯ ಸದಸ್ಯರನ್ನು ಶಾಸಕರೆಂದು ಹಾಗೂ ವಿಧಾನ ಪರಿಷತ್ತಿನ ಸದಸ್ಯರನ್ನು ವಿಧಾನ ಪರಿಷತ್ತಿನ ಸದಸ್ಯರೆಂದೇ ಸಂಬೋಧಿಸುತ್ತಿದ್ದು, ಸರ್ಕಾರದ ವಿವಿಧ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳಲ್ಲಿ ವಿಧಾನ ಸಭೆಯ ಸದಸ್ಯರನ್ನು ಶಾಸಕರೆಂದು ಹಾಗೂ ವಿಧಾನ ಪರಿಷತ್ತಿನ ಸದಸ್ಯರನ್ನು ವಿಧಾನ ಪರಿಷತ್ತಿನ ಸದಸ್ಯರೆಂದೇ ಮುದ್ರಿಸಲಾಗುತ್ತಿರುವುದು ಕಂಡು ಬರುತ್ತಿದೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ‘ಕಾಟೇರ’ ಸಂದರ್ಶನದ ವೇಳೆ ಚಾಟ್ಸ್‌ ಅಂಗಡಿ ನಡೆಸುತ್ತಿರುವ ವಿಶೇಷ ಚೇತನ ಯುವಕನನ್ನು ಹೊಗಳಿದ ನಟ ದರ್ಶನ್; ಜನವೋ ಜನ

“ಇತ್ತೀಚೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದ ವಿಧಾನ ಪರಿಷತ್ತಿನ ಕಲಾಪದಲ್ಲಿ ಹಲವಾರು ಸದಸ್ಯರುಗಳು ಇದರ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಅಧಿಕಾರಿಗಳ ವರ್ತನೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಹಿಂದೆ ಹಲವಾರು ಬಾರಿ ಈ ವಿಷಯದ ಕುರಿತು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸರ್ಕಾರದಿಂದ ಆದೇಶ ಹೊರಡಿಸಿದ್ದರೂ, ಸಹ ಸೂಕ್ತವಾಗಿ ಪಾಲನೆಯಾಗುತ್ತಿಲ್ಲ ಎನ್ನುವುದು ವಿಷಾದನೀಯ ಸಂಗತಿ” ಎಂದು ಬಸವರಾಜ ಹೊರಟ್ಟಿ ವಿ‍ಷಾದಿಸಿದ್ದಾರೆ.

ಆದ್ದರಿಂದ, “ಈ ಕ್ಷಣದಿಂದಲೇ ಉಭಯ ಸದನಗಳ ಸದಸ್ಯರುಗಳನ್ನು ಶಾಸಕರು, ವಿಧಾನ ಸಭೆ ಮತ್ತು ಶಾಸಕರು ವಿಧಾನ ಪರಿಷತ್ತು ಎಂದು ಸಂಬೋಧಿಸುವುದರ ಜೊತೆಗೆ ಸರ್ಕಾರದ ಆಮಂತ್ರಣ ಪತ್ರಿಕೆಗಳಲ್ಲಿ ಇದೇ ರೀತಿ ಉಲ್ಲೇಖಿಸಿ ಶಿಷ್ಟಾಚಾರ ನಿಯಮವನ್ನು ಪಾಲಿಸುವಂತೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಲಿಖಿತ ಮೂಲಕ ಕಟ್ಟು ನಿಟ್ಟಿನ ನಿರ್ದೇಶನ ನೀಡಿ” ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಭಾಪತಿ ಬಸವರಾಜ ಹೊರಟ್ಟಿ ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...