ಮಾಜಿ ಸಿಜೆಐ ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್‌ ಮೇಲೆ ಚಪ್ಪಲಿಯಿಂದ ಹಲ್ಲೆ

Date:

ಸುಪ್ರೀಂ ಕೋರ್ಟ್‌ನಲ್ಲಿ ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮೇಲೆ ಶೂ ಎಸೆದ ವಕೀಲ ರಾಕೇಶ್ ಕಿಶೋರ್ ಮೇಲೆ ಅಪರಿಚಿತ ಗುಂಪೊಂದು ಚಪ್ಪಲಿಯಿಂದ ಹಲ್ಲೆ ನಡೆಸಿದೆ. ಮಂಗಳವಾರ ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದಲ್ಲಿ ಈ ಘಟನೆ ನಡೆದಿದ್ದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಆದರೆ ಈ ದಾಳಿಯ ಹಿಂದಿನ ಕಾರಣ ಇನ್ನೂ ತಿಳಿದುಬಂದಿಲ್ಲ. ಕೆಲ ನೆಟ್ಟಿಗರು ಮಾಜಿ ಸಿಜೆಐ ಮೇಲೆ ಶೂ ಎಸೆದ ಕಾರಣಕ್ಕೆ ಈಗ ಚಪ್ಪಲಿಯಿಂದ ಹಲ್ಲೆ ನಡೆದಿರಬಹುದು ಎಂದು ಹೇಳಿದರೆ, ಇನ್ನು ಕೆಲವರು ಬೇರೆ ಯಾವುದೋ ವಿಚಾರಕ್ಕೆ ವಾಗ್ವಾದ ನಡೆದು ಚಪ್ಪಲಿಯಿಂದ ಥಳಿಸಲಾಗಿದೆ ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ? ಸಿಜೆಐಗೆ ಶೂ ಎಸೆದ ವಕೀಲನನ್ನು ಶ್ಲಾಘಿಸಿದ ಬಿಜೆಪಿ ಮುಖಂಡ ಭಾಸ್ಕರ ರಾವ್; ಎಲ್ಲಡೆ ಆಕ್ರೋಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ದಿ ಇಂಡಿಯನ್ ಎಕ್ಸ್‌ಪ್ರೆಸ್‌ ಜತೆ ಮಾತನಾಡಿದ ಕಿಶೋರ್, “ಬಹುಶಃ ಸುಮಾರು 35 ಅಥವಾ 40 ವರ್ಷ ವಯಸ್ಸಿನ ಯುವ ವಕೀಲರೊಬ್ಬರು ತಮ್ಮ ಚಪ್ಪಲಿಯಿಂದ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ. ನಂತರ ನಾವು ಅಲ್ಲಿಂದ ಹೊರಟೆವು. ಸಿಜೆಐ ಮೇಲೆ ಶೂ ಎಸೆದಿದ್ದಕ್ಕಾಗಿ ನನ್ನನ್ನು ಶಿಕ್ಷಿಸುತ್ತಿದ್ದಾರೆ ಎಂದು ಅವರು ಹೇಳಿದರು. ಅವರು ದಲಿತರು ಮತ್ತು ಅದಕ್ಕಾಗಿಯೇ ನನ್ನ ಮೇಲೆ ಚಪ್ಪಲಿ ಎಸೆದರು. ನಾವು ‘ಸನಾತನ’ ಘೋಷಣೆಗಳನ್ನು ಕೂಗಿದೆವು” ಎಂದು ಹೇಳಿಕೊಂಡಿದ್ದಾರೆ. ಇನ್ನು ಈ ಸಂಬಂಧ ಕಿಶೋರ್ ದೂರು ದಾಖಲಿಸಿಲ್ಲ ಎಂದು ಹೇಳಲಾಗಿದೆ.

ಅಕ್ಟೋಬರ್ 6ರಂದು ಸುಪ್ರೀಂ ಕೋರ್ಟ್‌ನ ನ್ಯಾಯಾಲಯ ಕೊಠಡಿ ಮಾಜಿ ಸಿಜೆಐ ಗವಾಯಿ ಮೇಲೆ 71 ವರ್ಷದ ಕಿಶೋರ್ ಶೂ ಎಸೆದಿದ್ದು ಈ ಸಂಬಂಧ ಕಿಶೋರ್ ಬಂಧಿಸಿ ಬಳಿಕ ಬಿಡುಗಡೆ ಮಾಡಲಾಗಿತ್ತು. ಕಿಶೋರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಶೂ ಎಸೆಯುವಾಗ, ಆರೋಪಿ “ಸನಾತನ ಧರ್ಮದ ಮೇಲಿನ ಅವಮಾನವನ್ನು ಹಿಂದೂಸ್ತಾನವು ಸಹಿಸುವುದಿಲ್ಲ” ಎಂಬ ಘೋಷಣೆಗಳನ್ನು ಕೂಗಿದ್ದ.

ಆದರೆ ಘಟನೆಯಿಂದ ವಿಚಲಿತರಾಗದ ಸಿಜೆಐ ಗವಾಯಿ, “ಇಂತಹ ವಿಷಯಗಳು ನನ್ನ ಮೇಲೆ ಪರಿಣಾಮ ಬೀರುವುದಿಲ್ಲ” ಎಂದು ಹೇಳಿ ವಿಚಾರಣೆಯನ್ನು ಮುಂದುವರೆಸಿದ್ದರು. ಈ ಘಟನೆಯನ್ನು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ಖಂಡಿಸಿತ್ತು. ವಕೀಲನ ಪ್ರವೇಶ ಕಾರ್ಡ್ ಅನ್ನು ರದ್ದುಗೊಳಿಸಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...