ಎರಡು ದಶಕಗಳ ನಂತರ ‘ಮರಾಠಿ ವಿಜಯ’ ರ್‍ಯಾಲಿ ನೆಪದಲ್ಲಿ ಒಂದಾದ ರಾಜ್, ಉದ್ಧವ್ ಠಾಕ್ರೆ

Date:

ಸುಮಾರು ಎರಡು ದಶಕಗಳಿಂದ ಪ್ರತ್ಯೇಕವಾಗಿ ಸಂಘಟನೆ ಕಟ್ಟುತ್ತಾ ಬಂದಿದ್ದ ಠಾಕ್ರೆ ಸಹೋದರರಾದ ರಾಜ್ ಠಾಕ್ರೆ ಮತ್ತು ಉದ್ಧವ್ ಠಾಕ್ರೆ ಇದೀಗ ಭಾಷಾ ಪ್ರೇಮದ ವಿಚಾರದಲ್ಲಿ ಒದ್ದಾಗಿದ್ದಾರೆ. ಎರಡು ದಶಕಗಳ ನಂತರ ‘ಮರಾಠಿ ವಿಜಯ’ ರ್‍ಯಾಲಿಯಲ್ಲಿ ಇಬ್ಬರು ಸಹೋದರರು ಜೊತೆಯಾಗಲಿದ್ದಾರೆ.

ತ್ರಿಭಾಷಾ ನೀತಿ ಅಡಿಯಲ್ಲಿ ಹಿಂದಿ ಹೇರಿಕೆಗೆ ಹೊರಟಿದ್ದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ನಿರಂತರವಾಗಿ ವಿಪಕ್ಷಗಳು ಹೋರಾಟ ನಡೆಸಿದ್ದು, ಎರಡನೇ ಬಾರಿಗೆ ಸರ್ಕಾರ ಆದೇಶವನ್ನು ಹಿಂಪಡೆದಿದೆ. ಇದನ್ನು ತಮ್ಮ ಹೋರಾಟದ ಯಶಸ್ಸು ಎಂದು ಪರಿಗಣಿಸಿರುವ ವಿಪಕ್ಷಗಳು ‘ಮರಾಠಿ ವಿಜಯ’ ರ್‍ಯಾಲಿಗೆ ಕರೆ ನೀಡಿದೆ.

ಇದನ್ನು ಓದಿದ್ದೀರಾ? ಮಹಾರಾಷ್ಟ್ರ ಶಾಲೆಗಳಲ್ಲಿ ಹಿಂದಿ ಹೇರಿಕೆಗೆ ವಿರೋಧ: ಮತ್ತೆ ಒಂದಾದ ರಾಜ್, ಉದ್ಧವ್ ಠಾಕ್ರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಲೆಗಳಲ್ಲಿ ತ್ರಿಭಾಷಾ ನೀತಿಯ ಕುರಿತಾದ ತನ್ನ ಆದೇಶವನ್ನು ಮಹಾರಾಷ್ಟ್ರ ಸರ್ಕಾರ ಹಿಂತೆಗೆದುಕೊಂಡ ನಿಟ್ಟಿನಲ್ಲಿ ಜುಲೈ 5ರಂದು ಮುಂಬೈನಲ್ಲಿ ‘ಮರಾಠಿ ವಿಜಯ ದಿವಸ’ ಆಚರಿಸಲು ಶಿವಸೇನೆ(ಯುಬಿಟಿ) ಮತ್ತು ಎಂಎನ್ಎಸ್ ಮಂಗಳವಾರ ಜಂಟಿ ಸಾರ್ವಜನಿಕ ಆಹ್ವಾನವನ್ನು ನೀಡಿವೆ.

‘ಮರಾಠಿಚಾ ಆವಾಜ್’ ಎಂಬ ಶೀರ್ಷಿಕೆಯ ಜಂಟಿ ಆಹ್ವಾನವು ಕಾರ್ಯಕ್ರಮದ ಮೊದಲ ಅಧಿಕೃತ ಘೋಷಣೆಯಾಗಿದೆ. ಸೋದರಸಂಬಂಧಿಗಳಾದ ರಾಜ್ ಠಾಕ್ರೆ ಮತ್ತು ಉದ್ಧವ್ ಠಾಕ್ರೆ ಈ ಕಾರ್ಯಕ್ರಮದ ನಿಮ್ಮೆಲ್ಲರನ್ನೂ ಆಹ್ವಾನಿಸುತ್ತಿರುವುದಾಗಿ ಉಲ್ಲೇಖಿಸಲಾಗಿದೆ.

ಶಿವಸೇನೆ(ಯುಬಿಟಿ) ಸಂಸದ ಸಂಜಯ್ ರಾವತ್ ಮಂಗಳವಾರ ತಮ್ಮ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನಾ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಈ ರ್‍ಯಾಲಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ. ಸುಮಾರು ಎರಡು ದಶಕಗಳ ಬಳಿಕ ಮೊದಲ ಬಾರಿಗೆ ರಾಜಕೀಯ ಕಾರ್ಯಕ್ರಮವೊಂದರಲ್ಲಿ ರಾಜ್, ಉದ್ಧವ್ ಠಾಕ್ರೆ ಕಾಣಿಸಿಕೊಳ್ಳಲಿದ್ದಾರೆ.

ಮಹಾರಾಷ್ಟ್ರ ಶಾಲೆಗಳಲ್ಲಿ 1ರಿಂದ 5ನೇ ತರಗತಿಯವರೆಗೆ ಹಿಂದಿ ಭಾಷೆ ಕಡ್ಡಾಯಗೊಳಿಸುವುದ್ದಕ್ಕೆ ತೀವ್ರ ವಿರೋಧ ವ್ಯಕ್ತವಾದ ಬಳಿಕ ರಾಜ್ಯ ಸಚಿವ ಸಂಪುಟವು ಭಾನುವಾರ ತ್ರಿಭಾಷಾ ನೀತಿಯ ಅನುಷ್ಠಾನದ ಕುರಿತು ಎರಡು ಸರ್ಕಾರಿ ಆದೇಶಗಳನ್ನು ಹಿಂಪಡೆದುಕೊಂಡಿದೆ. ಈ ಬೆನ್ನಲ್ಲೇ ಜುಲೈ 5ರಂದು ನಡೆಯಲಿದ್ದ ಪ್ರತಿಭಟನಾ ಮೆರವಣಿಗೆಯನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದಾರೆ. ಆದರೆ ‘ಮರಾಠಿ ಮನೂಸ್’ ಅನ್ನು ಆಚರಿಸಲು ಜುಲೈ 5ರಂದು ಕಾರ್ಯಕ್ರಮ ನಡೆಯಲಿದೆ ಎಂದು ಉದ್ಧವ್ ಠಾಕ್ರೆ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...