ಬಿಹಾರ ಚುನಾವಣೆ | ಈವರೆಗೆ 23 ಕೋಟಿ ರೂ. ಮೌಲ್ಯದ ಮದ್ಯ ವಶಕ್ಕೆ

Date:

ಅಕ್ಟೋಬರ್ 6ರಂದು ಬಿಹಾರ ವಿಧಾನಸಭೆ ಚುನಾವಣೆ ಘೋಷಣೆಯಾದಾಗಿನಿಂದ ಈವರೆಗೆ ಸುಮಾರು 64.13 ಕೋಟಿ ರೂ. ಮೌಲ್ಯದ ಮದ್ಯ, ನಗದು, ಮಾದಕ ವಸ್ತುಗಳು ಮತ್ತು ಉಚಿತ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. 23 ಕೋಟಿ ರೂ. ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಸೋಮವಾರ ಮಾಹಿತಿ ನೀಡಿದ್ದಾರೆ.

ಅಕ್ಟೋಬರ್ 6ರಿಂದ ಪೊಲೀಸರು ಮತ್ತು ಸಂಬಂಧಿತ ಇತರ ಸಂಸ್ಥೆಗಳು ರಾಜ್ಯದಲ್ಲಿ 753 ಜನರನ್ನು ಬಂಧಿಸಿವೆ. ಈ ಅವಧಿಯಲ್ಲಿಯೇ 13,587 ಜಾಮೀನು ರಹಿತ ವಾರಂಟ್‌ಗಳನ್ನು ಜಾರಿಗೊಳಿಸಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬಿಹಾರ ಚುನಾವಣೆ | ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ: ಮಹಾಘಟಬಂಧನದಲ್ಲಿ ಸೀಟು ಹಂಚಿಕೆ ಕಿತ್ತಾಟ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಕಚೇರಿ ಒದಗಿಸಿದ ಇತ್ತೀಚಿನ ಮಾಹಿತಿಯ ಪ್ರಕಾರ, ವಶಪಡಿಸಿಕೊಂಡ ವಸ್ತುಗಳಲ್ಲಿ 23.41 ಕೋಟಿ ರೂ. ಮೌಲ್ಯದ ಮದ್ಯ, 14 ಕೋಟಿ ರೂ. ಮೌಲ್ಯದ ಇತರೆ ಉಚಿತ ವಸ್ತುಗಳು, 16.88 ಕೋಟಿ ರೂ. ಮಾದಕ ದ್ರವ್ಯಗಳು ಮತ್ತು 4.19 ಕೋಟಿ ರೂ. ನಗದು ಸೇರಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಹಣ ಹಂಚಿಕೆ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ಭಾರತೀಯ ಚುನಾವಣಾ ಆಯೋಗ (ಇಸಿಐ) ಈಗಾಗಲೇ ಹಲವಾರು ಜಾರಿ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ಈ ಸಂಬಂಧ ರಾಜ್ಯ ಪೊಲೀಸ್, ಅಬಕಾರಿ ಮತ್ತು ಆದಾಯ ತೆರಿಗೆ ಇಲಾಖೆಗಳು, ಕಸ್ಟಮ್ಸ್, ಕಂದಾಯ ಗುಪ್ತಚರ ಮತ್ತು ಜಾರಿ ನಿರ್ದೇಶನಾಲಯಗಳಿಗೆ ಈಗಾಗಲೇ ಸೂಚನೆಗಳನ್ನು ನೀಡಲಾಗಿದೆ ಎಂದು ವರದಿಯಾಗಿದೆ.

ಬಿಹಾರದ ಎಲ್ಲಾ 243 ವಿಧಾನಸಭಾ ಸ್ಥಾನಗಳಲ್ಲಿ 121 ಕ್ಷೇತ್ರಗಳಿಗೆ ನವೆಂಬರ್ 6 ಮೊದಲ ಹಂತದಲ್ಲಿ ಮತ್ತು 122 ಕ್ಷೇತ್ರಗಳಿಗೆ ನವೆಂಬರ್ 11ರಂದು ಎರಡನೇ ಹಂತದಲ್ಲಿ ಮತದಾನ ನಡೆಯಲಿದೆ. ನವೆಂಬರ್ 14ರಂದು ಮತ ಎಣಿಕೆ ನಡೆಸಿ ಫಲಿತಾಂಶವನ್ನು ಘೋಷಿಸಲಾಗುತ್ತದೆ.

ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆ ಈಗಾಗಲೇ ಅಕ್ಟೋಬರ್ 17ರಂದು ಕೊನೆಯಾಗಿದೆ. ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಇಂದೇ ಕೊನೆಯ ದಿನಾಂಕವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...