ಬಿಹಾರ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಹೃದಯಾಘಾತದಿಂದ ಜನ ಸುರಾಜ್ ಪಕ್ಷದ ಅಭ್ಯರ್ಥಿ ನಿಧನ

Date:

ಬಿಹಾರ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಿನ್ನೆ ನಡೆದಿದ್ದು, ಫಲಿತಾಂಶ ಹೊರಬಿದ್ದಿದೆ. ಈ ಬೆನ್ನಲ್ಲೇ ಅಸ್ವಸ್ಥರಾಗಿದ್ದ ಜನ ಸುರಾಜ್ ಪಕ್ಷದ ಅಭ್ಯರ್ಥಿ, ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ್ ಸಿಂಗ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮತ ಎಣಿಕೆ ಪ್ರಕ್ರಿಯೆ ಆರಂಭವಾಗುವುದಕ್ಕೂ ಮುನ್ನವೇ ಶುಕ್ರವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸಿಂಗ್‌ಗೆ ಹೃದಯಾಘಾತವಾಗಿದ್ದು, ಅವರನ್ನು ಪಟನಾದ ರೂಬನ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮಧ್ಯಾಹ್ನದ ಬಳಿಕ ಸ್ಥಿತಿ ಹದಗೆಟ್ಟಿದ್ದು, ಸಂಜೆ 4 ಗಂಟೆಗೆ ಮತ್ತೆ ಹೃದಯಾಘಾತವಾಗಿದೆ, ಸಂಜೆ 7 ಗಂಟೆಗೆ ನಿಧನರಾಗಿದ್ದಾರೆ.

ಇದನ್ನು ಓದಿದ್ದೀರಾ? ಬಿಹಾರ ಚುನಾವಣೆ | ಚಿರಾಗ್‌ರ ‘ಎಲ್‌ಜೆಪಿ’ – ಪ್ರಶಾಂತ್‌ ಕಿಶೋರ್‌ರ ‘ಜನ ಸುರಾಜ್’ ಮೈತ್ರಿ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಕ್ಟೋಬರ್ 31ರಂದು ಪ್ರಚಾರದ ವೇಳೆಯೇ ಸಿಂಗ್ ಅವರ ಆರೋಗ್ಯ ಹದಗೆಟ್ಟಿತ್ತು. ಅಂದೂ ರೂಬನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಅವರಿಗೆ ಮೂತ್ರಪಿಂಡ ವೈಫಲ್ಯವಿದೆ ಎಂದು ಹೇಳಿದ್ದರು.

ಈ ಹಿಂದೆ ಶಿಕ್ಷಕರ ಸಂಘದ ಸಕ್ರಿಯ ಸದಸ್ಯರಾಗಿದ್ದ ಸಿಂಗ್ ಅವರು ಬ್ರಹ್ಮರ್ಷಿ ಸಮಾಜದ ರಾಜ್ಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ 202 ಸ್ಥಾನಗಳಲ್ಲಿ ಗೆಲುವು ಕಂಡಿದೆ. ಮಹಾಘಟಬಂಧನ 35 ಕ್ಷೇತ್ರಗಳಲ್ಲಿ ಜಯ ಗಳಿಸಿದೆ. ಜನ ಸುರಾಜ್ ಪಕ್ಷ ಯಾವುದೇ ಕ್ಷೇತ್ರದಲ್ಲಿ ಗೆಲುವು ಕಂಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...