ಆಪರೇಷನ್ ಸಿಂಧೂರ | ಸೇನೆಯೊಂದಿಗೆ ನಾವಿದ್ದೇವೆ ಎಂದ ಕಾಂಗ್ರೆಸ್, ಶಿವಸೇನೆ, ಆರ್‌ಜೆಡಿ ನಾಯಕರು

Date:

ಹೆಚ್ಚಿನ ಪ್ರವಾಸಿಗರು ಸೇರಿದಂತೆ 26 ಮಂದಿಯ ಹತ್ಯೆ ಮಾಡಲಾದ ಪಹಲ್ಗಾಮ್ ದಾಳಿ ಬಳಿಕ ಭಾರತ ‘ಆಪರೇಷನ್ ಸಿಂಧೂರ’ ಆರಂಭಿಸಿದೆ. ಭಾರತೀಯ ಸೇನೆಯು ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಿದೆ. ಭಾರತೀಯ ಸೇನೆ ನಡೆಸಿದ ಕ್ಷಿಪಣಿ ದಾಳಿಯನ್ನು ಪಕ್ಷಾತೀತವಾಗಿ ರಾಜಕಾರಣಿಗಳು ಶ್ಲಾಘಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ, “ಜೈ ಹಿಂದ್” ಎಂಬ ಪೋಸ್ಟ್‌ಗಳನ್ನು ಮಾಡಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ‘ಭಾರತ್ ಮಾತಾ ಕಿ ಜೈ’ ಎಂದು ಪೋಸ್ಟ್ ಮಾಡಿದರೆ, ವಿದೇಶಾಂಗ ಸಚಿವ ಎಸ್ ಜೈಶಂಕರ್, “ಭಯೋತ್ಪಾದನೆಗೆ ಜಗತ್ತು ಶೂನ್ಯ ಸಹಿಷ್ಣುತೆಯನ್ನು ತೋರಿಸಬೇಕು” ಎಂದು ಹೇಳಿದ್ದಾರೆ. ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, “ಸೇನೆಯ ಬಗ್ಗೆ ಹೆಮ್ಮಿಯಿದೆ. ಜೈ ಹಿಂದ್” ಎಂದಿದ್ದಾರೆ.

ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ | ಭಾರತದ ವಿಮಾನಗಳನ್ನು ನಾವೂ ಹೊಡೆದುರುಳಿಸಿದ್ದೇವೆ ಎಂದ ಪಾಕ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಭಾರತೀಯ ಪಡೆಗಳು ರಾತ್ರೋರಾತ್ರಿ ನಡೆಸಿದ ಮಿಲಿಟರಿ ಕ್ರಮವನ್ನು ಎಐಎಂಐಎಂ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಸ್ವಾಗತಿಸಿದ್ದಾರೆ. ಉರ್ದು ಮತ್ತು ಹಿಂದಿಯಲ್ಲಿ ಆನ್‌ಲೈನ್ ಪೋಸ್ಟ್‌ ಮಾಡಿದ್ದಾರೆ. “ಪಾಕಿಸ್ತಾನಕ್ಕೆ ಕಠಿಣ ಪಾಠ ಕಲಿಸುವ ಅಗತ್ಯವಿದೆ” ಎಂದು ಓವೈಸಿ ಹೇಳಿದ್ದಾರೆ.

“ನಮ್ಮ ರಕ್ಷಣಾ ಪಡೆಗಳು ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ನಡೆಸಿದ ಸರ್ಜಿಕಲ್ ಸ್ಟ್ರೈಕ್‌ಗಳನ್ನು ನಾನು ಸ್ವಾಗತಿಸುತ್ತೇನೆ. ಮತ್ತೊಂದು ಪಹಲ್ಗಾಮ್ ಮತ್ತೆಂದೂ ಸಂಭವಿಸದಂತೆ ಪಾಕಿಸ್ತಾನಕ್ಕೆ ಕಠಿಣ ಪಾಠ ಕಲಿಸಬೇಕು. ಪಾಕಿಸ್ತಾನದ ಭಯೋತ್ಪಾದಕ ಮೂಲಸೌಕರ್ಯವನ್ನು ಸಂಪೂರ್ಣವಾಗಿ ನಾಶಪಡಿಸಬೇಕು. ಜೈ ಹಿಂದ್” ಎಂದು ಓವೈಸಿ ಪೋಸ್ಟ್ ಮಾಡಿದ್ದಾರೆ.

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಶಿವಸೇನಾ ನಾಯಕ ಏಕನಾಥ್ ಶಿಂದೆ, “ಜೈ ಹಿಂದ್. ಆಪರೇಷನ್ ಸಿಂಧೂರ” ಎಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದರೆ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು “ಜೈ ಹಿಂದ್, ಸೇನೆಗೆ ಜಯವಾಗಲಿ” ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿದ್ದೀರಾ? BREAKING NEWS : ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಪಾಕ್ ಭಯೋತ್ಪಾದಕರ‌ ನೆಲೆಗಳ ಮೇಲೆ ಭಾರತದಿಂದ ವಾಯು ದಾಳಿ

ಇನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸೇನೆಯೊಂದಿಗೆ ನಾವಿದ್ದೇವೆ ಎಂದಿದ್ದಾರೆ. “ಪಾಕಿಸ್ತಾನ ಮತ್ತು ಪಿಒಕೆಯಲ್ಲಿ ಭಯೋತ್ಪಾದನೆಯ ಎಲ್ಲಾ ಮೂಲಗಳನ್ನು ನಿರ್ಮೂಲನೆ ಮಾಡುವ ಭಾರತದ ಬದ್ಧತೆಯಲ್ಲಿ ಯಾವುದೇ ರಾಜಿಯಾಗದಂತಿರಬೇಕು. ರಾಷ್ಟ್ರೀಯ ಹಿತಾಸಕ್ತಿಯೇ ಯಾವಾಗಲೂ ಸರ್ವೋಚ್ಚ. ಇದು ಏಕತೆ ಮತ್ತು ಒಗ್ಗಟ್ಟಿನ ಸಮಯ. ಏಪ್ರಿಲ್ 22ರ ರಾತ್ರಿಯಿಂದಲೇ, ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ರಾಷ್ಟ್ರದ ಪ್ರತಿಕ್ರಿಯೆಯಲ್ಲಿ ನೀಡಲು ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲವಿರುತ್ತದೆ ಎಂದು ಕಾಂಗ್ರೆಸ್ ಸ್ಪಷ್ಟವಾಗಿ ಹೇಳುತ್ತಿದೆ. ಕಾಂಗ್ರೆಸ್ ನಮ್ಮ ಸೇನಾಪಡೆಗಳೊಂದಿಗೆ ದೃಢವಾಗಿ ನಿಂತಿದೆ” ಎಂದು ಹೇಳಿದ್ದಾರೆ. ಆಪರೇಷನ್ ಸಿಂಧೂರ ಎಂಬ ಹ್ಯಾಶ್‌ಟ್ಯಾಗ್ ಬಳಸಿ ಎಕ್ಸ್‌ನಲ್ಲಿ ಹೇಳಿದರು.

ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, “ಭಾರತಕ್ಕೆ ಜಯವಾಗಲಿ! ಭಯೋತ್ಪಾದನೆಯಾಗಲಿ ಅಥವಾ ಪ್ರತ್ಯೇಕತಾವಾದವಾಗಲಿ ಇರಬಾರದು! ನಮ್ಮ ಧೈರ್ಯಶಾಲಿ ಯೋಧರು ಮತ್ತು ಭಾರತೀಯ ಸೇನೆಯ ಬಗ್ಗೆ ನಮಗೆ ಹೆಮ್ಮೆಯಿದೆ” ಎಂದು ಹೇಳಿದ್ದಾರೆ. ಇನ್ನು ಅವರ ತಂದೆ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್, “ಜೈ ಹಿಂದ್” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...