ಜೆಡಿಎಸ್‌ನಿಂದ ಸಿ ಎಂ ಇಬ್ರಾಹಿಂ ಅಮಾನತುಗೊಳಿಸಿದ ಹೆಚ್‌ ಡಿ ದೇವೇಗೌಡ

Date:

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್‌.ಡಿ ದೇವೇಗೌಡರು ಸಿ.ಎಂ ಇಬ್ರಾಹಿಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಜೆಡಿಎಸ್ ಪಕ್ಷದಿಂದ ಅಮಾನತು ಮಾಡಿ, ಆದೇಶ ಹೊರಡಿಸಿದ್ದಾರೆ.

ಬಿಜೆಪಿ, ಜೆಡಿಎಸ್ ಮೈತ್ರಿ ಮಾತುಕತೆಯನ್ನು ವಿರೋಧಿಸಿದ್ದ ಸಿ.ಎಂ ಇಬ್ರಾಹಿಂ ಅವರು ‘ಒರಿಜಿನಲ್ ಜೆಡಿಎಸ್ ಪಕ್ಷ ನಮ್ಮದೇ. ನಿಜವಾದ ಜಾತ್ಯಾತೀತ ಜನತಾ ದಳವನ್ನು ಕಟ್ಟುತ್ತೇನೆ’ ಎಂದು ಗುಡುಗಿದ್ದರು. ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರನ್ನೇ ಪಕ್ಷದಿಂದ ಉಚ್ಛಾಟನೆ ಮಾಡಲು ಚಿಂತಿಸುವುದಾಗಿಯೂ ಮಾತನಾಡಿದ್ದರು.

ಸಿ.ಎಂ ಇಬ್ರಾಹಿಂ ಅವರ ಈ ರಾಜಕೀಯ ನಡೆಗೆ ಇದೀಗ ಹೆಚ್.ಡಿ ದೇವೇಗೌಡರೇ ಬ್ರೇಕ್ ಹಾಕಿದ್ದಾರೆ. ಕಳೆದ ನವೆಂಬರ್ 15ರಂದು ಕೇರಳದ ತಿರುವನಂತಪುರಂ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಭಾಗಿಯಾಗಿದ್ದರು. ಪಕ್ಷದ ವಿರೋಧಿ ಹೇಳಿಕೆಯನ್ನು ನೀಡಿದ್ದಾರೆ ಎಂಬ ಕಾರಣದಿಂದಾಗಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ‌.ದೇವೇಗೌಡರು ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

suspension

ಸಿ.ಎಂ. ಇಬ್ರಾಹಿಂರವರು ಸಾರ್ವಜನಿಕವಾಗಿ ಪಕ್ಷದ ರಾಷ್ಟ್ರಧ್ಯಕ್ಷ, ರಾಜ್ಯ ಶಾಸಕಾಂಗ ಪಕ್ಷದ ನಾಯಕರ ವಿರುದ್ಧ ಹಾಗೂ ರಾಜ್ಯದಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದೊಂದಿಗೆ ಮಾಡಿಕೊಂಡ ಮೈತ್ರಿ ಬಗ್ಗೆ, ಪಕ್ಷದ ರಾಜ್ಯ ಪರಿಷತ್‌, ಶಾಸಕಾಂಗ ಪಕ್ಷದ ಸಭೆ, ಕೋಡ್ ಸಮಿತಿ ಮುಂತಾದ ಸಭೆಗಳಲ್ಲಿ ಒಮ್ಮತದ ನಿರ್ಣಯವಾಗಿದೆ. ಆದರೂ ಕೂಡ ಬಹಿರಂಗವಾಗಿ ಪಕ್ಷ ವಿರೋಧಿ ಹೇಳಿಕೆ ನೀಡಿ, ಪಕ್ಷದ ಹಿತಕ್ಕೆ ಧಕ್ಕೆ ತಂದಿರುತ್ತಾರೆ. ಇಂತಹ ನಡವಳಿಕೆ ಮತ್ತು ಹೇಳಿಕೆಗಳು ಪಕ್ಷದ ವಿರೋಧಿ ಚಟುವಟಿಕೆ. ಹಾಗಾಗಿ, ಸಿಎಂ ಇಬ್ರಾಹಿಂ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಜೆಡಿಎಸ್ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್ ಡಿ ದೇವೇಗೌಡರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...