ಅಧ್ಯಯನ ವರದಿ ಬಳಿಕ ಅಲೆಮಾರಿ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿ: ಡಿಸಿಎಂ ಶಿವಕುಮಾರ್

Date:

  • ಅಲೆಮಾರಿ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚೆ
  • ಸಮಾಜ ಕಲ್ಯಾಣ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಮುಂದಿನ ಕ್ರಮ

ಸಮಾಜದಲ್ಲಿ ಸಂಕಷ್ಟಕ್ಕೊಳಗಾಗಿರುವ ಸಮುದಾಯಗಳಲ್ಲಿ ಅಲೆಮಾರಿ ಜನಾಂಗವೂ ಒಂದು. ಪ್ರಸಕ್ತ ಸನ್ನಿವೇಶದಲ್ಲಿಈ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿ ಸ್ಥಾಪಿಸುವ ಅನಿವಾರ್ಯತೆ ಇದೆ. ಈ ಹಿನ್ನೆಲೆಯಲ್ಲಿ ಅಲೆಮಾರಿ ಜನಾಂಗದ ಸ್ಥಿತಿಗತಿ ಕುರಿತ ಸಮಗ್ರ ಅಧ್ಯಯನ ನಡೆಸಲು ಆಯೋಗ ರಚಿಸಲಿದ್ದೇವೆ. ಅದರ ಅಧ್ಯಯನ ವರದಿ ಪಡೆದು ನಂತರ ಅಲೆಮಾರಿ ಜನಾಂಗಕ್ಕೆ ಪ್ರತ್ಯೇಕ ನಿಗಮ ಮಂಡಳಿ ರಚನೆ ಮಾಡುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸ್ಪಷ್ಟಪಡಿಸಿದರು.

ಬೆಂಗಳೂರಿನ ಕುಮಾರಕೃಪ ಅತಿಥಿಗೃಹದಲ್ಲಿ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಸಿ ಎಸ್ ದ್ವಾರಕಾನಾಥ್ ನೇತೃತ್ವದಲ್ಲಿ ಅಲೆಮಾರಿ ಸಮುದಾಯಗಳ ಮುಖಂಡರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ನಿಗಮ ಮಂಡಳಿ ಸ್ಥಾಪಿಸುವಂತೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಡಿ ಕೆ ಶಿವಕುಮಾರ್, “23 ಅಲೆಮಾರಿ ಜನಾಂಗಗಳಿಗೆ ಸೇರಿದ ಸಮುದಾಯಗಳ ಸಮಸ್ಯೆ ಬಗ್ಗೆ ನನ್ನ ಗಮನಕ್ಕೆ ತರಲಾಗಿದೆ. ಇವರೊಂದಿಗೆ ಇದೇ ಮಾದರಿ ಬದುಕು ಸಾಗಿಸುವ ಅನೇಕ ಸಮುದಾಯದವರನ್ನು, ಪ್ರಮಾಣಪತ್ರ ಇಲ್ಲದವರು, ಗುರುತಿಲ್ಲದವರನ್ನೂ ನಾವು ಮರಳಿ ಗುರುತಿಸಬೇಕಿದೆ. ಇದಕ್ಕಾಗಿ ಆಯೋಗ ರಚಿಸಬೇಕು ಎಂದಿದ್ದಾರೆ. ಈ ವಿಚಾರವನ್ನು ಸಮಾಜ ಕಲ್ಯಾಣ ಸಚಿವರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಮಾಡಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯಾರು ತುಳಿತಕ್ಕೆ ಒಳಗಾಗಿದ್ದಾರೋ, ಅವರನ್ನು ಗುರುತಿಸಿ ಅವರಿಗೆ ನ್ಯಾಯ ಮತ್ತು ಸರಿಯಾದ ಗುರುತು ನೀಡಬೇಕೆನ್ನುವುದು ನಮ್ಮ ಪಕ್ಷದ ಸಿದ್ಧಾಂತವಾಗಿದೆ. ಹೀಗಾಗಿ ಈ ಸಮುದಾಯಗಳಿಗೂ ಸರಿಯಾದ ನ್ಯಾಯ ಕೊಡಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ?:ನನಗೆ ರಾಜಕಾರಣದಲ್ಲಿ ಒಲವಿಲ್ಲ; ಕಾರ್ಯಕರ್ತರ ಒತ್ತಾಯಕ್ಕೆ ಇದ್ದೇನೆ : ಎಚ್‌ಡಿಕೆ

ಇದೇ ವೇಳೆ ನಿಷ್ಕ್ರಿಯ ನಿಗಮ ಮಂಡಳಿಗಳನ್ನು ಮುಂದುವರೆಸುವ ಇಲ್ಲ ಬಂದ್ ಮಾಡುವ ವಿಚಾರವಾಗಿ ಮಾತನಾಡಿದ ಡಿಕೆಶಿ, ಬಜೆಟ್ ಅಧಿವೇಶನದ ಬಳಿಕ ಇವುಗಳ ಭವಿಷ್ಯದ ಬಗ್ಗೆ ಸಿಎಂ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.

“ನಿಷ್ಕ್ರಿಯ ನಿಗಮ ಮಂಡಳಿಗಳನ್ನು ಸದ್ಯ ಬಂದ್ ಮಾಡಲ್ಲ. ಈಗಾಗಲೇ ಬಜೆಟ್‌ನಲ್ಲಿ ಎಲ್ಲ ನಿಗಮ ಮಂಡಳಿಗಳಿಗೂ ಹಣ ಹಂಚಿಕೆ ಆಗಿದೆ. ಮುಂದಿನ ಬಜೆಟ್ ವೇಳೆಗೆ ನಮ್ಮ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಪಯುಕ್ತ ನಿಗಮ ಮಂಡಳಿಗಳ ಕುರಿತು ನಿರ್ಧಾರ ಮಾಡುತ್ತಾರೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...