ವಕ್ಫ್ ನಂತರ ಕ್ರೈಸ್ತ, ಜೈನ, ಬೌದ್ಧ, ಹಿಂದೂ ದೇವಾಲಯಗಳ ಭೂಮಿಯ ಮೇಲೆ ಬಿಜೆಪಿ ಕಣ್ಣಿಟ್ಟಿದೆಯೇ?

Date:

ವಕ್ಫ್ ಕಾನೂನು ಜಾರಿಗೆ ತಂದ ನಂತರ, ಬಿಜೆಪಿ ಈಗ ಕ್ರೈಸ್ತರು, ಜೈನರು, ಬೌದ್ಧರು ಮತ್ತು ಹಿಂದೂ ದೇವಾಲಯಗಳ ಭೂಮಿಯ ಮೇಲೆ ಕಣ್ಣಿಟ್ಟಿದೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಭಾನುವಾರ ಆರೋಪಿಸಿದ್ದಾರೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖವಾಣಿಯಾದ ಆರ್ಗನೈಸರ್‌ನಲ್ಲಿನ ಲೇಖನವನ್ನು ಉಲ್ಲೇಖಿಸಿ ಎನ್‌ಸಿಪಿ (ಎಸ್‌ಪಿ) ನಾಯಕ ಜಿತೇಂದ್ರ ಅವ್ಹಾದ್ ಕೂಡ ಇದೇ ರೀತಿಯ ಆರೋಪ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಆರ್‌ಎಸ್‌ಎಸ್‌ನ ಭಾಗವತರು ಮೌನ ಮುರಿದು ಮೋದಿ ಬಗ್ಗೆ ಗೊಣಗುತ್ತಿರುವುದೇಕೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾನುವಾರ ಈ ಬಗ್ಗೆ ಶಿವ ಸಂಚಾರ ಸೇನೆಯ (ಶಿವಸೇನೆಯ ಐಟಿ ಮತ್ತು ಸಂವಹನ ವಿಭಾಗ) ಬಿಡುಗಡೆಯ ಸಂದರ್ಭದಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, “ವಕ್ಫ್ ಕಾನೂನಿನ ನಂತರ ಮುಂದಿನ ಹೆಜ್ಜೆ ಕ್ರೈಸ್ತರು, ಜೈನರು, ಬೌದ್ಧರು ಮತ್ತು ಹಿಂದೂ ದೇವಾಲಯಗಳ ಭೂಮಿಯ ಮೇಲೆ ಕಣ್ಣಿಡುವುದಾಗಿದೆ. ತಮ್ಮ ಸ್ನೇಹಿತರಿಗೆ ಈ ಭೂಮಿ ನೀಡುವ ಹುನ್ನಾರವಿದೆ. ಅವರಿಗೆ (ಕೇಂದ್ರದ ಬಿಜೆಪಿ ಸರ್ಕಾರ) ಯಾವುದೇ ಸಮುದಾಯದ ಬಗ್ಗೆ ಪ್ರೀತಿಯಿಲ್ಲ” ಎಂದು ಹೇಳಿದರು.

ಈ ವಾರದ ಆರಂಭದಲ್ಲಿ 12 ಗಂಟೆಗಳ ಕಾಲ ನಡೆದ ಚರ್ಚೆಯ ನಂತರ ಲೋಕಸಭೆ ಮತ್ತು ರಾಜ್ಯಸಭೆ ಎರಡೂ ವಕ್ಫ್ (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದವು. ನಿರೀಕ್ಷೆಯಂತೆ 288 ಮತಗಳು ಮಸೂದೆ ಪರವಾಗಿ, 232 ಮತಗಳು ಮಸೂದೆ ವಿರುದ್ಧವಾಗಿ ಚಲಾವಣೆಯಾದವು. ರಾಜ್ಯಸಭೆಯಲ್ಲಿ, ಮಸೂದೆ ಪರವಾಗಿ 128 ಸದಸ್ಯರು ಮತ್ತು ವಿರುದ್ಧವಾಗಿ 95 ಸದಸ್ಯರು ಮತ ಚಲಾಯಿಸಿದರು. ಈ ಮಸೂದೆಗೆ ರಾಷ್ಟ್ರಪತಿ ಸಹಿ ಹಾಕಿದ್ದು, ಇದೀಗ ಕಾನೂನು ಜಾರಿಯಾಗಲಿದೆ.

ಈ ಕಾನೂನು ದೇಶದಲ್ಲಿ ಮುಸ್ಲಿಂ ಧಾರ್ಮಿಕ ದತ್ತಿಗಳಿಗೆ ಸಂಬಂಧಿಸಿದ ಸುಧಾರಣೆಗಳಿಗೆ ನಾಂದಿ ಹಾಡುತ್ತದೆ ಎಂದು ಸರ್ಕಾರ ಹೇಳುತ್ತದೆ. ಆದರೆ ಇದು ಮುಸ್ಲಿಮರ ಮೇಲೆ ದಾಳಿ, ಕಾನೂನು ಬಾಹಿರವೆಂದು ವಿಪಕ್ಷಗಳು ಆರೋಪಿಸಿದೆ. ಈಗಾಗಲೇ ಈ ವಿವಾದಾತ್ಮಕ ಕಾನೂನು ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ದಾಖಲಾಗಿವೆ.

ಇದನ್ನು ಓದಿದ್ದೀರಾ? ವಿಶ್ಲೇಷಣೆ | ಆರ್‌ಎಸ್‌ಎಸ್‌ ಮೀಸಲಾತಿ ವಿರುದ್ಧ ಇಲ್ಲವೇ?

“ಭವಿಷ್ಯದಲ್ಲಿ, ಎಲ್ಲಾ ವಕ್ಫ್ ಭೂಮಿ ಬಿಜೆಪಿಯ ‘ಕೈಗಾರಿಕಾ ಸ್ನೇಹಿತರ’ ಪಾಳಾಗುತ್ತದೆ” ಎಂದು ಠಾಕ್ರೆ ಅವರ ಪಕ್ಷದ ನಾಯಕ ಸಂಜಯ್ ರಾವತ್ ಹೇಳಿದರು. ಇನ್ನು ಎನ್‌ಸಿಪಿ (ಎಸ್‌ಪಿ) ನಾಯಕ ಜಿತೇಂದ್ರ ಅವ್ಹಾದ್, “ಮುಸ್ಲಿಮರನ್ನು ಗುರಿಯಾಗಿಸಿಕೊಂಡ ನಂತರ, ಈಗ ದೇಶದಲ್ಲಿ ಕ್ರೈಸ್ತರ ಸರದಿ ಬಂದಿದೆ” ಎಂದು ಹೇಳಿದ್ದಾರೆ.

ಆರ್‌ಎಸ್‌ಎಸ್ ಮುಖವಾಣಿ, “ವಕ್ಫ್ ಮಂಡಳಿಯಲ್ಲ, ಬದಲಾಗಿ ದೇಶದ ಅತಿದೊಡ್ಡ ಭೂಮಾಲೀಕರು ಭಾರತದ ಕ್ಯಾಥೋಲಿಕ್ ಚರ್ಚ್” ಎಂದು ಹೇಳಿಕೊಂಡಿದೆ. “ಭಾರತದಲ್ಲಿ ಯಾರಿಗೆ ಹೆಚ್ಚು ಭೂಮಿ ಇದೆ? ಕ್ಯಾಥೋಲಿಕ್ ಚರ್ಚ್ vs ವಕ್ಫ್ ಮಂಡಳಿ ಚರ್ಚೆ” ಎಂಬ ಶೀರ್ಷಿಕೆಯ ಲೇಖನವನ್ನು ಏಪ್ರಿಲ್ 3ರಂದು ಪ್ರಕಟಿಸಲಾಗಿದೆ ಎಂದು ಜಿತೇಂದ್ರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅವ್ಹಾದ್ ಪ್ರಕಾರ, ಕ್ಯಾಥೋಲಿಕ್ ಚರ್ಚ್ ಭಾರತದಾದ್ಯಂತ ಸುಮಾರು 17.29 ಕೋಟಿ ಎಕರೆ (7 ಕೋಟಿ ಹೆಕ್ಟೇರ್) ಭೂಮಿಯನ್ನು ಹೊಂದಿದೆ ಎಂದು ಲೇಖನವು ಹೇಳಿದೆ. “ಹೆಚ್ಚಿನ ಭೂಮಿಯನ್ನು ಬ್ರಿಟಿಷ್ ಆಳ್ವಿಕೆಯಲ್ಲಿ ಸ್ವಾಧೀನಪಡಿಸಿಕೊಳ್ಳಲಾಗಿದೆ. 1927ರಲ್ಲಿ, ಬ್ರಿಟಿಷ್ ಆಡಳಿತವು ಭಾರತೀಯ ಚರ್ಚ್ ಕಾಯ್ದೆಯನ್ನು ಅಂಗೀಕರಿಸಿದೆ. ಚರ್ಚ್‌ಗೆ ದೊಡ್ಡ ಪ್ರಮಾಣದ ಭೂ ಅನುದಾನವನ್ನು ಪಡೆಯಲು ದಾರಿ ಮಾಡಿಕೊಟ್ಟಿದೆ” ಎಂದು ಅವ್ಹಾದ್ ತನ್ನ ಪೋಸ್ಟ್‌ನಲ್ಲಿ ಲೇಖನವನ್ನು ಉಲ್ಲೇಖಿಸಿ ಬರೆದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...