ಮತ್ತೆ ಬಿಬಿಎಂಪಿ ವಾರ್ಡ್‌ ಮರುವಿಂಗಡಣೆ; 12 ವಾರಗಳ ಗಡುವು ನೀಡಿದ ಹೈಕೋರ್ಟ್

Date:

ಬಿಜೆಪಿ ಸರ್ಕಾರ ಮಾಡಿದ್ದ ಬಿಬಿಎಂಪಿ ವಾರ್ಡ್‌ ಮರುವಿಂಗಡಣೆಯಲ್ಲಿ ಸಾಕಷ್ಟು ಲೋಪಗಳಿದ್ದು, ಮತ್ತೊಮ್ಮೆ ಹೊಸದಾಗಿ ವಾರ್ಡ್‌ಗಳನ್ನು ಪುನರ್‌ವಿಂಗಡಣೆ ಮಾಡುವುದು ಅನಿವಾರ್ಯವಾಗಿದೆ ಎಂದು ರಾಜ್ಯ ಕಾಂಗ್ರೆಸ್‌ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಸರ್ಕಾರದ ನಿರ್ಧಾರಕ್ಕೆ ಸಮ್ಮತಿ ನೀಡಿರುವ ಹೈಕೋರ್ಟ್‌, ಪುನರ್‌ವಿಂಗಡಣೆ ಪ್ರಕ್ರಿಯೆ ಪೂರ್ಣಗೊಳಿಸಲು 12 ವಾರಗಳ ಗಡುವು ನೀಡಿದೆ.

ಬಿಬಿಎಂಪಿ ಚುನಾವಣೆ ನಡೆದು 8 ವರ್ಷಗಳಾಗಿವೆ. ಕಳೆದ ಮೂರು ವರ್ಷಗಳಿಂದ ಆಡಳಿತಾಧಿಕಾರಿ ಬಿಬಿಎಂಪಿಯನ್ನು ಮುನ್ನಡೆಸುತ್ತಿದ್ದಾರೆ. ಇದೀಗ, ಮತ್ತೆ ವಾರ್ಡ್‌ ಪುನರ್‌ವಿಂಗಡಣೆ ನಡೆಯಲಿದ್ದು, ಚುನಾವಣೆಗೆ ಮತ್ತಷ್ಟು ವಿಳಂಬವಾಗುವ ಸಾಧ್ಯತೆ ಇದೆ.

ಬಿಬಿಎಂಪಿ ವಾರ್ಡ್‌ ಮರುವಿಂಗಡಣೆಗೆ ಅನುಮತಿ ಕೋರಿ ಸರ್ಕಾರದ ಪರವಾಗಿ ಎ.ಜೆ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದ್ದು, “ಈ ಹಿಂದೆ ನಡೆದ ಮರುವಿಂಗಡಣೆಯಲ್ಲಿ ಹಲವಾರು ಲೋಪಗಳಿವೆ. ಅವುಗಳನ್ನು ಸರಿಪಡಿಸಲು ಕಾಲಾವಕಾಶ ನೀಡಬೇಕು” ಎಂದು ಕೋರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾದ ಆಲಿಸಿದ ಹೈಕೋರ್ಟ್ ನ್ಯಾಯಾಧೀಶ ಪ್ರಸನ್ನ ಬಿ ವರಾಳೆ ಮತ್ತು ಎಂ.ಜಿ.ಎಸ್ ಕಮಲ್ ಅವರಿದ್ದ ವಿಭಾಗೀಯ ಪೀಠ, 12 ವಾರಗಳ ಅವಕಾಶ ನೀಡಿ ಆದೇಶ ಹೊರಡಿಸಿದೆ.

ಈ ಹಿಂದೆ ಬಿಜೆಪಿ ಸರ್ಕಾರ ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆ ಮಾಡಿತ್ತು. ಆ ಪ್ರಕ್ರಿಯೆಯು ಬಿಜೆಪಿಗೆ ಅನುಕೂಲವಾಗುವ ರೀತಿಯಲ್ಲಿದೆ ಎಂಬ ಆರೋಪಗಳೂ ಕೇಳಿಬಂದಿದ್ದವು. ಇದೀಗ, ಕಾಂಗ್ರೆಸ್‌ ಸರ್ಕಾರ ರಚನೆ ಮಾಡಿದ್ದು, ಮತ್ತೆ ವಾರ್ಡ್‌ಗಳ ಪುನರ್‌ವಿಂಗಡಣೆಗೆ ಮುಂದಾಗಿದೆ. ಲೋಕಸಭಾ ಚುನಾವಣೆಗೂ ಮುನ್ನ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...