ವಯೋಮಿತಿ ಸಡಿಲಿಕೆ | ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದಕ್ಕೆ ಸುಣ್ಣ: ಪಿಎಸ್ಐ ಅಭ್ಯರ್ಥಿಗಳ ಅಳಲು

Date:

ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್‌ ಬಿ ಮತ್ತು ಮತ್ತು ಗ್ರೂಪ್‌ ಸಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಆದೇಶಿಸಿದ ಬೆನ್ನಲ್ಲೇ 402 ಪಿಎಸ್ಐ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಲುವಾಗಿ ವಂಚಿತರಾದ ಅಭ್ಯರ್ಥಿಗಳು, ತಮಗೂ ವಯೋಮಿತಿ ಸಡಿಲಿಕೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸೆ.5ರಂದು ನಡೆದಿದ್ದ ಸಚಿವ ಸಂಪುಟ ನಿರ್ಣಯದಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆಯನ್ನು ನೀಡಿ ರಾಜ್ಯ ಸರ್ಕಾರ ಸೆ.10ರಂದು ಆದೇಶಿಸಿದೆ.

ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ದಿನಾಂಕ 13-03-2024ರನ್ವಯ ಅಧಿಸೂಚಿಸಿರುವ ಉಳಿಕೆ ಮೂಲ ವೃಂದದಲ್ಲಿನ ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ಸೆ.14 ಮತ್ತು 15 ರಂದು ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪರೀಕ್ಷೆಯ ಹಿಂದಿನ ದಿನವೇ (ಸೆ.13) ದಿಢೀರ್‌ ಮುಂದೂಡಿದೆ. ಹಾಗೆಯೇ ಸದರಿ ಅಧಿಸೂಚನೆಯಲ್ಲಿನ ಹುದ್ದೆಗಳಿಗೆ ಇತರೆ ದಿನಾಂಕಗಳಲ್ಲಿ ನಿಗದಿಪಡಿಲಾಗಿದ್ದ ನಿರ್ದಿಷ್ಟ ಪತ್ರಿಕೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಸರ್ಕಾರ ನಿರ್ದಿಷ್ಟ ದಿನಾಂಕವನ್ನು ತಿಳಿಸದೇ ‘ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿಗೆ ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ ಮೂರು ವರ್ಷಗಳ ಸಡಿಲಿಕೆ ಅಂತ ಹೇಳಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್‌ 3ರಂದು ನಿಗದಿಯಾಗಿರುವ 402 ಪಿಎಸ್‌ಐ ನೇಮಕಾತಿ ಪರೀಕ್ಷೆಗೆ (ಈ ಮೊದಲು ಸೆ.22ರಂದು ಪರೀಕ್ಷೆ ನಿಗದಿಯಾಗಿತ್ತು. ನಂತರ ಸೆ.28ಕ್ಕೆ ಎಂದು ಪರೀಕ್ಷೆ ಇದೆ ಎಂದು ಗೃಹ ಸಚಿವ ಪರಮೇಶ್ವರ್‌ ದಿನಾಂಕ ಘೋಷಿಸಿದರು. ಅಂದು ಕೂಡ ಯುಪಿಎಸ್‌ಸಿ ಪರೀಕ್ಷೆ ಇದ್ದಿದ್ದರಿಂದ ಅಕ್ಟೋಬರ್‌ 3ಕ್ಕೆ ಪರೀಕ್ಷೆ ನಿಗದಿ ಪಡಿಸಲಾಗಿದೆ) ವಯೋಮಿತಿ ಸಡಿಲಿಕೆ ಅವಕಾಶ ಕೊಡಿ ಎಂದು ಅವಕಾಶ ವಂಚಿತ ಅಭ್ಯರ್ಥಿಗಳು ಸರ್ಕಾರವನ್ನು ಕೇಳುತ್ತಿದ್ದಾರೆ.

“ರಾಜ್ಯದ ಎಲ್ಲ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳ ಮೇಲೆ ರಾಜ್ಯ ಸರ್ಕಾರ ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚುವುದು ಬೇಡ. 402 ಪಿಎಸ್ಐ ನೇಮಕಾತಿ ಪರೀಕ್ಷೆಗೆ ವಯೋಮಿತಿ ಸಲುವಾಗಿ ವಂಚಿತರಾದ ಅಭ್ಯರ್ಥಿಗಳು ಸಾಕಷ್ಟಿದ್ದೇವೆ. ಕೆಪಿಎಸ್‌ಸಿ ಪರೀಕ್ಷೆಗಳನ್ನು ಮುಂದೂಡಿದಂತೆ 402 ಪಿಎಸ್‌ಐ ನೇಮಕಾತಿ ಪರೀಕ್ಷೆ ಮುಂದೂಡಿ ತಮಗೂ ವಯೋಮಿತಿ ಸಡಿಲಿಕೆಗೆ ಅವಕಾಶ ಮಾಡಿಕೊಡಬೇಕು” ಎಂದು ಅವಕಾಶ ವಂಚಿತ ಅಭ್ಯರ್ಥಿ ಶಿವಕುಮಾರ್‌ ಎನ್‌ ಈ ದಿನ.ಕಾಮ್‌ ಜೊತೆ ಮಾತನಾಡಿ ಆಗ್ರಹಿಸಿದರು.

ಮುಂದುವರಿದು, “545 ಪಿಎಸ್‌ಐ ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದಾಗಿ ಮರು ಪರೀಕ್ಷೆ ಘೋಷಣೆ ಮಾಡಲಾಯಿತು. ನಂತರ 402ರ ಪಿಎಸ್‌ಐ ನೇಮಕಾತಿಗೂ ಅಧಿಸೂಚನೆ ಹೊರಡಿಸಲಾಯಿತು. ಆದರೆ, 545 ಮತ್ತು 402 ನೇಮಕಾತಿಗೆ ಒಂದೇ ದೈಹಿಕ ಪರೀಕ್ಷೆ ನಡೆಸಿ, 402 ನೇಮಕಾತಿಯಲ್ಲಿ ಪಾಸಾದವರಿಗೆ 545ರ ನೇಮಕಾತಿಗೂ ಅವಕಾಶ ಮಾಡಿಕೊಡಲಾಗಿದೆ. ಅದೊಂದು ಅಕ್ರಮದಿಂದ ನಮಗೆ ಬಹಳ ಅನ್ಯಾಯವಾಗಿದೆ. ಇನ್ನೂ 402 ನೇಮಕಾತಿಗೆ ಪರೀಕ್ಷೆ ನಡೆದಿಲ್ಲ. ಒಂದು ಅವಕಾಶ ಇದೆ. ಅವಕಾಶ ವಂಚಿತರಿಗೆ ವಯೋಮಿತಿ ಸಡಿಲಿಕೆ ನೀಡಬೇಕು” ಎಂದರು.

WhatsApp Image 2024 09 14 at 11.21.28 AM

ಹಿಂದೆ ಧ್ವನಿ ಎತ್ತಿ ಈಗ ಮೌನರಾದ ಸಿದ್ದರಾಮಯ್ಯ!

“ವಿರೋಧ ಪಕ್ಷದ ನಾಯಕರಾಗಿದ್ದ ವೇಳೆ ಸಿದ್ದರಾಮಯ್ಯ ಇದೇ ವಿಚಾರವಾಗಿ ಧ್ವನಿ ಎತ್ತಿದ್ದರು. 22.11.202ರಲ್ಲಿ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರಕ್ಕೆ ಪತ್ರ ಬರೆದು, ಕರ್ನಾಟಕ ರಾಜ್ಯ ಸರ್ಕಾರವು 3ನೇ ಅಕ್ಟೋಬರ್ 2021ರಂದು 545 ಸಿವಿಲ್ ಪಿಎಸ್ಐ ಸಬ್‌ಇನ್ಸ್‌ಪೆಕ್ಟರ್ ಪರೀಕ್ಷೆ ಅವ್ಯವಹಾರದಿಂದಾಗಿ ಮರುಪರೀಕ್ಷೆ ನಡೆಸಲು ಸರ್ಕಾರ ಆದೇಶ ಹೊರಡಿಸಿದೆ. ಈ ವಿಷಯದ ಬಗ್ಗೆ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣವಿರುವುದರಿಂದ ಈ 402 ಸಿವಿಲ್ ಪಿಎಸ್‌ಐ ಪರೀಕ್ಷೆಯಲ್ಲಿ ಅವಕಾಶ ವಂಚಿತರಾದ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ಸಿವಿಲ್ ಪಿಎಸ್‌ಐ ಅಭ್ಯರ್ಥಿಗಳ ಮನವಿಯನ್ನ ಪರಿಶೀಲಿಸಿ, ಪುನಃ ಅವಕಾಶ ನೀಡಲು ಕ್ರಮ ತೆಗೆದುಕೊಳ್ಳಬೇಕು ಎಂದು ಕೋರಿದ್ದರು. ಈಗ ಸಿದ್ದರಾಮಯ್ಯ ಅವರೇ ಸಿಎಂ ಇದ್ದಾರೆ. ನಮ್ಮ ಮನವಿಯನ್ನು ಪರಿಗಣಿಸಿ ಸರ್ಕಾರದ ಹೊಸ ಆದೇಶದಡಿ ನಮಗೂ ನ್ಯಾಯ ಒದಗಿಸಿಕೊಡಬೇಕು” ಎಂದು ರವಿಕುಮಾರ್‌ ಮಾಲಿಪಾಟೀಲ್‌ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ: ಆಶಯವೋ, ಅಣಕವೋ?

ವಯೋಮಿತಿ ವಿಚಾರವಾಗಿ 402 ಪಿಎಸ್‌ಐ ನೇಮಕಾತಿ ಪರೀಕ್ಷೆಗೆ ಅವಕಾಶ ವಂಚಿತ ಅಭ್ಯರ್ಥಿ ಪ್ರಕೃತಿ ಎಂಬುವರು ಈ ದಿನ.ಕಾಮ್‌ ಜೊತೆ ಮಾತನಾಡಿ, “545 ಪಿಎಸ್ಐ ನೇಮಕಾತಿಯಲ್ಲಿ ಪರೀಕ್ಷೆಯಲ್ಲಿ ನಾನು ಆಯ್ಕೆಯಾಗಿದ್ದೆ. ಆದರೆ ಸರ್ಕಾರದ ಯಡವಟ್ಟಿನಿಂದ ಅಕ್ರಮ ನಡೆದು ಮರು ಪರೀಕ್ಷೆ ಘೋಷಣೆಯಾಗಿದ್ದರಿಂದ ನಮ್ಮ ಆಯ್ಕೆ ರದ್ದಾಯಿತು. ನಂತರ 402 ಪಿಎಸ್ಐ ನೇಮಕಾತಿ ಪರೀಕ್ಷೆಗೆ ಅಧಿಸೂಚನೆ ಹೊರಡಿಸಲಾಯಿತು. ವಯೋಮಿತಿ ಸಲುವಾಗಿ ಅವಕಾಶವನ್ನು ಕಳೆದುಕೊಂಡಿದ್ದೇವೆ. ಸರ್ಕಾರದಿಂದಲೇ ಪರೀಕ್ಷೆಗಳು ವಿಳಂಬವಾಗಿ ನಡೆದಿದ್ದರಿಂದ ನಮಗೆ ಈ ಶಿಕ್ಷೆ. ದಯವಿಟ್ಟು ಸರ್ಕಾರ 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಬರೆದಿರುವ ಎಲ್ಲ ಅಭ್ಯರ್ಥಿಗಳಿಗೂ ವಯೋಮಿತಿ ಸಡಿಲಿಕೆ ನೀಡಿ, 402 ಪಿಎಸ್ಐ ನೇಮಕಾತಿ ಪರೀಕ್ಷೆಗೆ ಅವಕಾಶ ಮಾಡಿಕೊಡಬೇಕು” ಎಂದರು.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಈ ಹಿಂದೆ ಆಗ್ರಹ

402 ಪಿಎಸ್ಐ ನೇಮಕಾತಿಗೆ ವಯೋಮಿತಿ ಸಡಿಲಿಕೆ ಮಾಡುವಂತೆ 2022ರಲ್ಲಿ ಬಿಜೆಪಿ ಸರ್ಕಾರವನ್ನು ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಆಗ್ರಹಿಸಿದ್ದರು. ಸರ್ಕಾರಕ್ಕೆ ಪತ್ರ ಬರೆದಿದ್ದ ಅವರು, “545 ಸಿವಿಲ್ ಪಿಎಸ್ಐ ಪರೀಕ್ಷೆಯಲ್ಲಿ ವಯೋಮಿತಿ ಅವಕಾಶ ವಂಚಿತರಾದ ಅಭ್ಯರ್ಥಿಗಳಿಗೆ 402 ಸಿವಿಲ್ ಪಿಎಸ್ಐ ಪರೀಕ್ಷೆಯಲ್ಲಿ ಅವಕಾಶ ನೀಡಬೇಕು. ಈ ಪರೀಕ್ಷೆಯಲ್ಲಿ ಬರೆದ ಸುಮಾರು 56,000 ಅಭ್ಯರ್ಥಿಗಳಿಗೆ ಒಂದು ಬಾರಿ ಕ್ರಮವಾಗಿ ಮಾನವೀಯ ನೆಲೆಯಲ್ಲಿ 402 (ಪಿಎಸ್ಐ) ಹುದ್ದೆಯ ಆಯ್ಕೆಗಾಗಿ ನಡೆಯಲಿರುವ ಲಿಖಿತ ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಿಕೊಡಬೇಕು” ಎಂದು ಬೊಮ್ಮಾಯಿ ಸರ್ಕಾರವನ್ನು ಒತ್ತಾಯಿಸಿದ್ದರು. ಈಗ ಕೇಂದ್ರ ಸಚಿವರಾಗಿರುವ ಕುಮಾರಸ್ವಾಮಿ ಅವರು ಅವಕಾಶ ವಂಚಿತ ಪರೀಕ್ಷಾರ್ಥಿಗಳಿಗೆ ನ್ಯಾಯ ಒದಗಿಸಿಕೊಡಲಿ ಎಂಬುದು ಅವಕಾಶ ವಂಚಿತ ಅಭ್ಯರ್ಥಿಗಳ ಒತ್ತಾಸೆಯಾಗಿದೆ.

ಸಿಎಂ ಭೇಟಿ ಮಾಡಲಿರುವ ಅಭ್ಯರ್ಥಿಗಳು

“ಮೂರು ವರ್ಷ ವಯೋಮಿತಿ ಸಡಿಲಿಕೆ ನೀಡಿ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ 402 ಪಿಎಸ್‌ಐ ನೇಮಕಾತಿ ಪರೀಕ್ಷೆಗೆ ಅವಕಾಶ ಕಳೆದುಕೊಂಡ ಅಭ್ಯರ್ಥಿಗಳೆಲ್ಲರೂ ಒಟ್ಟಾಗಿ ಸೋಮವಾರದೊಳಗಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸುತ್ತೇವೆ. ಸಿಎಂ ಸಿದ್ದರಾಮಯ್ಯ ಅವರು ದೊಡ್ಡ ಮನಸ್ಸು ಮಾಡಿ ನಮಗೆ ಕರುಣೆ ತೋರಲಿ” ಎಂದು ಅವಕಾಶ ವಂಚಿತ ಅಭ್ಯರ್ಥಿ ಮಹೇಶ್‌ ತಿಳಿಸಿದರು.

WhatsApp Image 2023 04 01 at 3.53.40 PM e1680350106945
+ posts

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಶರಣು ಚಕ್ರಸಾಲಿ
ಶರಣು ಚಕ್ರಸಾಲಿ
ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್‌1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...