ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಒಪ್ಪಿಗೆ: ಸಂಪುಟ ಸಭೆ ಬಳಿಕ ಗ್ಯಾರಂಟಿ ಜಾರಿ

Date:

  • ಪ್ರಣಾಳಿಕೆಯಲ್ಲಿ ಘೋಷಿತ ಮೊದಲ ಗ್ಯಾರಂಟಿ ಜಾರಿಗೆ ಮುಂದಾದ ಸರ್ಕಾರ
  • ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣದ ಭರವಸೆ ನೀಡಿದ ಸಾರಿಗೆ ಸಚಿವ

ಕಾಂಗ್ರೆಸ್ ಸರ್ಕಾರದ ಮೊದಲ ಗ್ಯಾರಂಟಿ ಯೋಜನೆ ಜಾರಿಗೆ ಮುಹೂರ್ತ ಕೂಡಿ ಬಂದಿದೆ. ಅಳೆದು ತೂಗಿ ಲೆಕ್ಕಾಚಾರ ಹಾಕಿರುವ ರಾಜ್ಯ ಸರ್ಕಾರ ಎಲ್ಲವೂ ಅಂದುಕೊಂಡಂತೆ ಆದಲ್ಲಿ ಮೇ 31 ಅಥವಾ ಜೂನ್ 1 ರಿಂದ ಮಹಿಳೆಯ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲು ಮುಂದಾಗಿದೆ.

ಶಾಂತಿನಗರದ ಕೆಎಸ್ಆರ್‌ಟಿಸಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ಬಳಿಕ ಮಾತನಾಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಇದಕ್ಕೆ ಎಪಿಎಲ್ – ಬಿಪಿಎಲ್ ಎಂಬ ಯಾವುದೇ ನಿಬಂಧನೆಗಳಿಲ್ಲ ಎಂದು ಸ್ಪಷ್ಟಪಡಿಸಿದರು.

ಇಲಾಖೆ ಅಧಿಕಾರಿಗಳೊಂದಿಗಿನ ಸಭೆ ಬಳಿಕ ಉಚಿತ ಪ್ರಯಾಣದ ಬಗ್ಗೆ ಮಾಹಿತಿ ನೀಡಿದ ಅವರು, ಇಂದಿನ ಸಭೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ವರದಿ ಸಲ್ಲಿಸುತ್ತೇವೆ. ಅವರು ಅಂತಿಮ ಕ್ರಮ ಕೈಗೊಳ್ಳುತ್ತಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಯೋಜನೆ ಪ್ರತಿ ವರ್ಷ ಅಂದಾಜು 3,200 ಕೋಟಿ ಹಣ ಬೇಕಾಗುತ್ತದೆ. ಸಾರಿಗೆ ಇಲಾಖೆಯ ನಾಲ್ಕು ನಿಗಮಗಳು ನಷ್ಟದಲ್ಲಿರುವ ಹಿನ್ನೆಲೆ ಸರ್ಕಾರ ಸಹಾಯಧನ ನೀಡಿದರೆ ಯೋಜನೆ ಜಾರಿಗೆ ಮಾಡಲು ಅನುಕೂಲವಾಗುತ್ತದೆ ಎಂದು ಸಭೆಯಲ್ಲಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಇದನ್ನೂ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಎಂದು ಸಾರಿಗೆ ಸಚಿವರು ತಿಳಿಸಿದರು.

ನಾಲ್ಕು ನಿಗಮಗಳಲ್ಲಿ ನೌಕರರ ಸಂಖ್ಯೆ ಕಡಿಮೆ ಇದೆ. ಮೊದಲು ಈ ಕಾರ್ಯಕ್ಕೆ ಒತ್ತು ಕೊಟ್ಟು ನೇಮಕಾತಿ ಮಾಡಿಕೊಳ್ಳಬೇಕು. ಬಸ್ಸುಗಳ ಸಂಖ್ಯೆ ಕೂಡ ತುಂಬಾ ಕಡಿಮೆ ಇದೆ. ಇದನ್ನು ಹೆಚ್ಚಳ ಮಾಡಬೇಕು. ಆರ್ಥಿಕ ಪರಿಸ್ಥಿತಿ, ಕೋವಿಡ್ ವೇಳೆ ಆಗಿರುವ ನಷ್ಟ, ಹಾಗೂ ಇದರಿಂದ ನೌಕರರ ನೇಮಕ್ಕೆ ಆಗಿದ್ದ ತಡೆ ವಿಚಾರದ ಬಗೆಗೂ ಗಮನಹರಿಸಬೇಕಿದೆ.

ಹಾಗೆಯೇ ಹೊಸ ಬಸ್ ಗಳ ಸಂಚಾರಕ್ಕೆ ಎಲ್ಲೆಲ್ಲಿ ತೊಂದರೆ ಇದೆ. ಇವೆಲ್ಲವುಗಳ ಬಗ್ಗೆ ಮಾಹಿತಿ ತೆಗೆದುಕೊಳ್ಳಲಾಗಿದೆ. ಅಗತ್ಯಕ್ಕೆ ಅನುಸಾರವಾಗಿ ಹೊಸ ಬಸ್‌ಗಳನ್ನು ಎಲ್ಲ ನಿಗಮಗಳಿಗೆ ಸೇರ್ಪಡೆ ಮಾಡುತ್ತೇವೆ ಎಂದವರು ತಿಳಿಸಿದರು.

ನಾಲ್ಕು ಸಾರಿಗೆ ಸಂಸ್ಥೆಗಳ ವಿಭಾಗಗಳಿಂದ 240 ಘಟಕಗಳಿವೆ. ಒಟ್ಟು 23,978 ವಾಹನಗಳಿವೆ. 1 ಲಕ್ಷ 4,450 ಸಿಬ್ಬಂದಿಗಳಿದ್ದಾರೆ.

ಕೆಎಸ್ಆರ್ಟಿಸಿಯಲ್ಲಿ 918 ಬಸ್‌ಗಳಿವೆ. ಬಿಎಂಟಿಸಿಯಲ್ಲಿ 1894 ಬಸ್ಗಳು, ಕಿತ್ತೂರು ಕರ್ನಾಟಕ ಭಾಗದ ಸಾರಿಗೆ ಸಂಸ್ಥೆಯಲ್ಲಿ ಆರುನೂರು ಬಸ್ ಗಳು, ಕಲ್ಯಾಣ ಕರ್ನಾಟಕ ಭಾಗದಲ್ಲಿ 850 ಸೇರಿ ಒಟ್ಟು 4250 ಹೊಸ ಬಸ್‌ಗಳಿವೆ.

ಕೇಂದ್ರ ಸರ್ಕಾರ 15 ವರ್ಷ ಆಗಿರುವ ಬಸ್ ಗಳಿಗೆ ಎಫ್‌ಸಿ ಕೊಡದಂತೆ ನಿರ್ಬಂಧಿಸಿದೆ. ಹಾಗಾಗಿ ಹೊಸ ಬಸ್ ಗಳ ಖರೀದಿ ಮಾಡಬೇಕಿದೆ ಎಂದರು. ಸಾರಿಗೆ ಬಸ್ ಗಳಲ್ಲಿ ಪ್ರತಿದಿನ 85,054 ಮ೦ದಿ ಪ್ರಯಾಣ ಮಾಡುತ್ತಾರೆ.

ಪ್ರತಿ ದಿನ 23.13 ಕೋಟಿ ರೂಪಾಯಿ ಆದಾಯ ಬರುತ್ತಿದೆ. ವಾರ್ಷಿಕ ಆದಾಯ 8946 ಕೋಟಿ ರೂಪಾಯಿಗಳಾಗಿದೆ. ನಾಲ್ಕು ಸಾರಿಗೆ ನಿಗಮಗಳಲ್ಲಿನ ಕಾರ್ಯಾಚರಣೆ ವೆಚ್ಚ ಹಾಗೂ ಆದಾಯದ ನಡುವೆ 100 ಕೋಟಿ ರೂಪಾಯಿ ನಷ್ಟವಾಗಬಹುದು ಎಂದರು.

ನಾಳೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಚರ್ಚಿಸಿದ ಬಳಿಕ ಹೆಚ್ಚಿನ ಮಾಹಿತಿ ನೀಡುವುದಾಗಿ ತಿಳಿಸಿದರು. ಉಚಿತ ಪ್ರಯಾಣ ಸೌಲಭ್ಯದಿಂದ ದೈನಂದಿನ ಆದಾಯ 23 ಕೋಟಿ ರೂಪಾಯಿಯಲ್ಲಿ ಅರ್ಧದಷ್ಟು ಕಡಿಮೆಯಾಗಬಹುದು. ಸುಮಾರು 13 ಕೋಟಿ ಹೊರೆಯಾಗಬಹುದು.

ಈ ಸುದ್ದಿ ಓದಿದ್ದೀರಾ:ಮುಖ್ಯಮಂತ್ರಿಗಳೇ ಜನರಿಗೆ ನೇರವಾಗಿ ಗ್ಯಾರಂಟಿ ಖಾತರಿ ಬಗ್ಗೆ ಹೇಳಲಿ: ಮಾಜಿ ಸಿಎಂ ಎಚ್‌ಡಿಕೆ ಒತ್ತಾಯ

ಸಾರಿಗೆ ಸಂಸ್ಥೆಗಳು ದೈನಂದಿನ ಡಿಸೆಲ್‌ಗೆ 15 ಕೋಟಿ ರೂಪಾಯಿ ಖರ್ಚು ಮಾಡುತ್ತಿವೆ. ಡಿಸೆಲ್ ಬಿಲ್ ಅನ್ನು ಹದಿನೈದು ದಿನಕ್ಕೊಮ್ಮೆ ಪಾವತಿಸಲಾಗುತ್ತಿದೆ. ಉಚಿತ ಪ್ರಯಾಣದಿಂದ ಹೊರೆಯಾಗುವ ಮೊತ್ತವನ್ನು ಭರಿಸಲು ಸರ್ಕಾರದೊಂದಿಗೆ ಲಿಖಿತ ಒಪ್ಪಂದ ಮಾಡಿಕೊಳ್ಳಲಾಗುವುದು. ಕಾಲಕಾಲಕ್ಕೆ ಡಿಸೆಲ್ ಬಿಲ್ ಪಾವತಿಸಲಾಗುವುದು ಎಂದು ಹೇಳಿದರು.

ಇದೇ ವೇಳೆ ಗ್ಯಾರಂಟಿ ಜಾರಿಯಾಗದಿದ್ದರೆ ಪ್ರತಿಭಟನೆ ಮಾಡುವುದಾಗಿ ಹೇಳಿಕೊಂಡಿದ್ದ ಬಿಜೆಪಿ ನಿರ್ಧಾರದ ಬಗ್ಗೆ ಮಾತನಾಡಿದ ರಾಮಲಿಂಗಾರೆಡ್ಡಿ, ಬಿಜೆಪಿಯವರಿಗೆ ಪ್ರತಿಭಟನೆ ಮಾಡಲು ಅವಕಾಶ ಕೊಡುವುದಿಲ್ಲ. ಜನ ಬಿಜೆಪಿಗೆ ರೆಸ್ಟ್ ಮಾಡಲು ಹೇಳಿದ್ದಾರೆ. ಅವರು ಮನೆಯಲ್ಲಿ ರೆಸ್ಟ್ ಮಾಡಲಿ ಎಂದು ಸಚಿವರು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...