ತಮಿಳುನಾಡು ಚುನಾವಣೆ | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ: ಅಣ್ಣಾ, ಎಂಜಿಆರ್, ಜಯ ಧ್ವಜ ಅನಾವರಣ

Date:

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ದಿವಂಗತ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಜನ್ಮ ದಿನಾಚರಣೆಯಂದು ಹೊಸ ಪಕ್ಷವನ್ನು ಸ್ಥಾಪಿಸಿದ್ದಾರೆ. ಭಾವನಾತ್ಮಕ ಮತ್ತು ರಾಜಕೀಯ ತುಂಬಿದ ಭಾಷಣ ಮಾಡಿದ ಶಶಿಕಲಾ ಅವರು ತಮ್ಮ ಪಕ್ಷ ಹೊಸ ಧ್ವಜವನ್ನು ಅನಾವರಣಗೊಳಿಸಿದ್ದು, ಅದರಲ್ಲಿ ಜಯಲಲಿತಾ ಅವರ ಭಾವಚಿತ್ರವೂ ಇದೆ.

“ಜಯಲಲಿತಾ ನಿಧನರಾದ ಅದೇ ರಾತ್ರಿ, ಎಲ್ಲಾ ಸಚಿವರು ಬಂದು ನನ್ನನ್ನು ಮುಖ್ಯಮಂತ್ರಿಯಾಗುವಂತೆ ಹೇಳಿದರು. ಎಲ್ಲಾ ಶಾಸಕರು ಸಹ ನನಗೆ ಹೇಳಿದರು” ಎಂದು 2016ರ ಡಿಸೆಂಬರ್‌ನ ಘಟನೆಗಳನ್ನು ಶಶಿಕಲಾ ವಿವರಿಸಿದ್ದಾರೆ. “ನಮ್ಮ ಶತ್ರುಗಳು ನಾನು ಅವರನ್ನು ಕೊಂದಿದ್ದೇನೆ ಎಂದು ಹೇಳಿದರು” ಎಂದು ತಮ್ಮ ಮೇಲಿರುವ ಆರೋಪದ ಬಗ್ಗೆಯೂ ಉಲ್ಲೇಖಿಸಿದರು.

ಇದನ್ನು ಓದಿದ್ದೀರಾ? ಜೈಲಿನಲ್ಲಿ ಕೈದಿಗಳ ‘ವಿಲಾಸಿ ಜೀವನ’: ಶಿಕ್ಷೆ ಯಾರಿಗೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಾನು ಅವರೊಂದಿಗೆ ರಾಜಕಾರಣಿಯಾಗಿ ಅಲ್ಲ, ನನ್ನ ಸ್ವಂತ ಸಹೋದರಿಯಾಗಿ ಅವರೊಂದಿಗಿದ್ದೆ. ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ನಾನು ಅವರಿಗೆ ಹೇಳಿದೆ. ನಾನು ಅವರ ಪದ್ಧತಿಗಳ ಪ್ರಕಾರ ಆಚರಣೆಗಳನ್ನು ಮಾಡಬೇಕು. ಓಪಿಎಸ್ ಮುಖ್ಯಮಂತ್ರಿಯಾಗಿ ಮುಂದುವರಿಯಲಿ, ಸಚಿವರು ಮುಂದುವರಿಯಲಿ ಎಂದೆ” ಎಂದು ಮಾಜಿ ಮುಖ್ಯಮಂತ್ರಿ ಓ. ಪನ್ನೀರ್‌ಸೆಲ್ವಂ ಅವರನ್ನು ಉಲ್ಲೇಖಿಸಿ ಹೇಳಿದರು.

ಈ ಸಂದರ್ಭದಲ್ಲೇ ದ್ರಾವಿಡ ಚಳವಳಿಯ ಪ್ರಮುಖ ನಾಯಕರಾದ ಸಿ.ಎನ್. ಅಣ್ಣಾದೊರೈ, ಎಂ.ಜಿ. ರಾಮಚಂದ್ರನ್ (ಎಂಜಿಆರ್) ಮತ್ತು ಜೆ. ಜಯಲಲಿತಾ ಅವರ ಭಾವಚಿತ್ರಗಳಿರುವ ಕೆಂಪು, ಬಿಳಿ ಮತ್ತು ಕಪ್ಪು ಪಟ್ಟಿಗಳನ್ನು ಹೊಂದಿರುವ ಧ್ವಜವನ್ನು ಶಶಿಕಲಾ ಅನಾವರಣಗೊಳಿಸಿದರು. “ಇದು ಅಣ್ಣಾ, ಎಂಜಿಆರ್ ಮತ್ತು ಜಯಲಲಿತಾ ಅವರ ಹೆಜ್ಜೆಗಳನ್ನು ಅನುಸರಿಸುವ ದ್ರಾವಿಡ ಪಕ್ಷವಾಗಿರುತ್ತದೆ. ಶತ್ರುಗಳನ್ನು ಬೇರುಸಹಿತ ಕಿತ್ತುಹಾಕಲು ಸಾಮಾನ್ಯ ಜನರಿಗೆ ಒಂದು ಪಕ್ಷ” ಎಂದು ಘೋಷಿಸಿದರು.

ಜಯಲಲಿತಾ ಅವರ ದೀರ್ಘಕಾಲದ ಸಹಾಯಕಿಯಾಗಿದ್ದ ಶಶಿಕಲಾ ಅವರನ್ನು ಜಯಲಲಿತಾ ಮರಣದ ನಂತರ ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಲಾಗಿತ್ತು. ಅವರು ಮುಖ್ಯಮಂತ್ರಿಯಾಗುವ ಪ್ರಯತ್ನವನ್ನೂ ಮಾಡಿದ್ದರು. ಆದರೆ ಅಕ್ರಮ ಆಸ್ತಿ ಪ್ರಕರಣದಲ್ಲಿ ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾದರು. ಹಾಗೆಯೇ 2027ರವರೆಗೆ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂದು ಹೇಳಲಾಗಿತ್ತು.

ಈ ನಡುವೆ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಎಡಪ್ಪಾಡಿ ಕೆ ಪಳನಿಸ್ವಾಮಿ, ಶಶಿಕಲಾ ಅವರು ಜೈಲಿನಲ್ಲಿ ಇರುವಾಗಲೇ ಓ ಪನ್ನೀರ್‌ಸೆಲ್ವಂ ಅವರೊಂದಿಗೆ ಕೈಜೋಡಿಸಿ ಶಶಿಕಲಾ ಅವರನ್ನೇ ಪಕ್ಷದಿಂದ ಹೊರಹಾಕಿ ಜಂಟಿ ನಾಯಕತ್ವ ಮಾದರಿಯನ್ನು ಸ್ಥಾಪಿಸಿದರು. 2021ರ ಜನವರಿಯಲ್ಲಿ ಜೈಲಿನಿಂದ ಬಿಡುಗಡೆಯಾದ ನಂತರ ಶಶಿಕಲಾ ರಾಜಕೀಯದಿಂದ ದೂರವಿದ್ದರು. ಆದರೆ, ಫೆಬ್ರವರಿ 24ರಂದು ಜಯಲಲಿತಾ ಅವರ 78ನೇ ಜನ್ಮದಿನದಂದು ತಮ್ಮ ಸ್ವಂತ ರಾಜಕೀಯ ಪಕ್ಷವನ್ನು ಘೋಷಿಸಿ, ಹೊಸ ಧ್ವಜವನ್ನು ಅನಾವರಣಗೊಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...