ಪಡಿತರ ಚೀಲಗಳ ಮೇಲೆ ಮೋದಿ ಫೋಟೋ: ಚುನಾವಣಾ ಪ್ರಚಾರಕ್ಕಾಗಿ ಕೇಂದ್ರದಿಂದ ಕೋಟ್ಯಂತರ ರೂ. ವೆಚ್ಚ

Date:

ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಯಡಿ ಆಹಾರ ಧಾನ್ಯಗಳನ್ನು ವಿತರಿಸುವ ಲ್ಯಾಮಿನೇಟೆಡ್ ಗೋಣಿಚೀಲಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಇರುವ ಫೋಟೋಗಳನ್ನು ಇರುವಂತೆ ಮುದ್ರಿಸಲು ಭಾರತೀಯ ಆಹಾರ ನಿಗಮ(FCI)ವು ಟೆಂಡರ್‌ ಕರೆಯುವಂತೆ ಪ್ರಾದೇಶಿಕ ಕಚೇರಿಗಳಿಗೆ ಸೂಚಿಸಿದ್ದು, ಇದಕ್ಕಾಗಿ ಕೇಂದ್ರ ಸರ್ಕಾರವು ಕೋಟ್ಯಂತರ ರೂ. ವೆಚ್ಚ ಮಾಡಲಿದೆ ಎಂದು ‘ದಿ ಹಿಂದೂ’ ವರದಿ ಮಾಡಿದೆ.

ಈ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗಳಿಗೆ ಮುನ್ನ ಈ ಸೂಚನೆ ಹೊರಬಿದ್ದಿದೆ ಎಂದು ವರದಿ ಮಾಡಿದೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ(ಪಿಎಂಜಿಕೆಎವೈ)ಯಡಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಕುಟುಂಬಗಳ ಯೋಜನೆಯ ಸುಮಾರು 81.35 ಕೋಟಿ ಫಲಾನುಭವಿಗಳಿಗೆ ಉಚಿತ ಆಹಾರ ಧಾನ್ಯಗಳನ್ನು ಒದಗಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಾಮಾಜಿಕ ಕಾರ್ಯಕರ್ತ ಅಜಯ್ ಬೋಸ್ ಎಂಬುವವರು ಆರ್‌ಟಿಐ ಕಾಯ್ದೆಯಡಿ ಈ ಬಗ್ಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಉತ್ತರಿಸಿರುವ ಅಧಿಕಾರಿಗಳು, ರಾಜಸ್ಥಾನವೊಂದರಲ್ಲೇ 13.29 ಕೋಟಿ ರೂ.ವೆಚ್ಚದಲ್ಲಿ ಸಿಂಥೆಟಿಕ್ ಬ್ಯಾಗ್‌ಗಳ ಪೂರೈಕೆಗಾಗಿ ಐದು ಕಂಪನಿಗಳಿಗೆ ಟೆಂಡ‌ರ್‌ಗಳನ್ನು ನೀಡಿರುವುದಾಗಿ ತಿಳಿಸಿದ್ದಾರೆ. ಪ್ರತಿ ಬ್ಯಾಗ್ ಗೆ 12.375 ರೂ.ದರದಲ್ಲಿ 1.07 ಕೋಟಿ ಸಿಂಥೆಟಿಕ್ ಚೀಲಗಳನ್ನು ಖರೀದಿಸಲು ಅದು ಉದ್ದೇಶಿಸಿದೆ. ನಾಗಾಲ್ಯಾಂಡ್ ಒಂದು ಕಂಪನಿಗೆ ಮಾತ್ರ ಪ್ರತಿ ಚೀಲಕ್ಕೆ 9.30 ರೂ.ದರದಲ್ಲಿ ಬ್ಯಾಗ್‌ಗಳ ಪೂರೈಕೆಗೆ ಟೆಂಡ‌ರ್ ನೀಡಿದೆ.

2024ರಲ್ಲಿ ‘ಚುನಾವಣೆಗಳಿಗೆ ಮುನ್ನ’ ಇಂತಹ ಬ್ರ್ಯಾಂಡಿಂಗ್ ಆರಂಭಗೊಂಡಿದೆ ಎಂದು ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವಾಲಯದ ಅಧಿಕಾರಿಯೋರ್ವರು ತಿಳಿಸಿರುವುದಾಗಿ ವರದಿ ಉಲ್ಲೇಖಿಸಿದೆ. ಈ ನಡುವೆ ತಮಿಳುನಾಡು 1.14 ಕೋಟಿ ಚೀಲಗಳಿಗಾಗಿ ಟೆಂಡ‌ರ್ ಕರೆದಿದ್ದರೆ, ಮಹಾರಾಷ್ಟ್ರ ಇನ್ನೂ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಲ್ಲ.

ಈ ತಿಂಗಳ ಆರಂಭದಲ್ಲಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು, ಪಿಎಂಜಿಕೆಎವೈ ಅಡಿ ಪಡಿತರ ಅಂಗಡಿಗಳಲ್ಲಿ ಮೋದಿಯವರ ಕಟೌಟ್‌ಗಳನ್ನೊಳಗೊಂಡ ಸೆಲ್ಫಿ ಪಾಯಿಂಟ್‌ಗಳನ್ನು ಸ್ಥಾಪಿಸುವಂತೆ ಕೇಂದ್ರ ಸರಕಾರದ ನಿರ್ದೇಶನವನ್ನು ತಿರಸ್ಕರಿಸಿದ್ದರು.

ಇದನ್ನು ಓದಿದ್ದೀರಾ? ಅಮೀರ್ ಖಾನ್ ಜೊತೆಗೆ ‘ದಂಗಲ್‌’ನಲ್ಲಿ ನಟಿಸಿದ್ದ ಯುವನಟಿ ಇನ್ನಿಲ್ಲ

ಇದಕ್ಕೂ ಮುನ್ನ ಪಡಿತರ ವಿತರಣೆಗೆ ಬಳಸುವ ಚೀಲಗಳ ಮೇಲೆ ಮೋದಿಯವರ ಚಿತ್ರವನ್ನು ಮುದ್ರಿಸಲು ನಿರಾಕರಿಸಿದ್ದಕ್ಕೆ ಕೇಂದ್ರ ಸರ್ಕಾರವು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಹಣಕಾಸು ತಡೆಹಿಡಿದಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...