ಹಿಡಿದ ಕೆಲಸ ಮಾಡಿಯೇ ತೀರುವ ಗುಣ ಡಿ.ಕೆ ಶಿವಕುಮಾರ್ ಅವರದ್ದು: ಮಲ್ಲಿಕಾರ್ಜುನ ಖರ್ಗೆ

Date:

  • ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಪ್ರಶಂಸಿಸಿದ ಎಐಸಿಸಿ ಅಧ್ಯಕ್ಷ ಖರ್ಗೆ
  • ಕಾಂಗ್ರೆಸ್ ನೂತನ ಕಟ್ಟಡ ಇಂದಿರಾ ಗಾಂಧಿ ಭವನ, ಭಾರತ ಜೋಡೋ ಸಭಾಂಗಣ ಉದ್ಘಾಟನೆ

ಡಿ.ಕೆ ಶಿವಕುಮಾರ್ ಅವರು ಪಕ್ಷದ ಕೆಲಸವನ್ನು ಬಹಳ ನಿಷ್ಠೆಯಿಂದ ಮಾಡುತ್ತಾರೆ. ಹಿಡಿದ ಕೆಲಸವನ್ನು ಮಾಡಿಯೇ ತೀರುವ ಗುಣ ಅವರದ್ದು. ಪಕ್ಷದ ಎಲ್ಲ ನಾಯಕರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವಲ್ಲಿ ಅವರು ಯಶಸ್ವಿಯಾಗಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶಂಸಿಸಿದರು.

ಕಾಂಗ್ರೆಸ್ ನೂತನ ಕಟ್ಟಡ ಇಂದಿರಾ ಗಾಂಧಿ ಭವನ ಮತ್ತು ಭಾರತ ಜೋಡೋ ಸಭಾಂಗಣ ಉದ್ಘಾಟಿಸಿ ಅವರು ಮಾತನಾಡಿದರು. “ಇದು ವಿಶೇಷ ಮತ್ತು ಚಿಕ್ಕ ಕಾರ್ಯಕ್ರಮವಾದರೂ ಇಂದಿರಾ ಗಾಂಧಿ ಅವರ ಹೆಸರಲ್ಲಿ ಕಾಂಗ್ರೆಸ್ ಕಚೇರಿ ಕಟ್ಟಿರುವುದು ದೊಡ್ಡ ವಿಚಾರ. ದೆಹಲಿ ಕಾಂಗ್ರೆಸ್ ಕಚೇರಿ ಬಿಟ್ಟರೆ ನಂತರದ ದೊಡ್ಡ ಕಾಂಗ್ರೆಸ್ ಕಚೇರಿ ಇರುವುದು ಬೆಂಗಳೂರಿನಲ್ಲಿ” ಎಂದು ತಿಳಿಸಿದರು.

“ಡಿ.ಕೆ ಶಿವಕುಮಾರ್ ಅವರನ್ನು ರಾಜ್ಯದ ಅಧ್ಯಕ್ಷರನ್ನಾಗಿ ಮಾಡುವಾಗ ನಾನು ತಲೆ ಕೆರೆದುಕೊಳ್ಳುತ್ತಿದ್ದೆ. ಆಗ ಸೋನಿಯಾ ಗಾಂಧಿ ಅವರು ಯಾಕೆ ಎಂದು ಕೇಳಿದರು. ನಾನು ಆಗ ಈ ಆಯ್ಕೆ ಬಗ್ಗೆ ಅನುಮಾನವಿದೆ ಎಂದು ಹೇಳಿದೆ. ಆದರೆ, ಸೋನಿಯಾ ಗಾಂಧಿ ಅವರು ಎಲ್ಲವೂ ಸರಿಯಾಗಲಿದೆಯೆಂದು ಹೇಳಿದ್ದರು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಧ್ಯಕ್ಷರಾದ ನಂತರ ಡಿ.ಕೆ ಶಿವಕುಮಾರ್ ಅವರು ತಾವು ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಿ, ಎಲ್ಲರ ಜತೆ ಸಾಗುವುದಾಗಿ ಸಾಬೀತು ಮಾಡಿ ತೋರಿಸಿದ್ದಾರೆ. ಎಲ್ಲ ನಾಯಕರ ಜತೆ ಬೆರೆತು ಕೆಲಸ ಮಾಡುತ್ತಿದ್ದಾರೆ. ಅವರು ಇದೇ ಕೆಲಸವನ್ನು ಮುಂದುವರಿಸಲಿ” ಎಂದು ಶುಭ ಕೋರಿದರು.

ಈ ಸುದ್ದಿ ಓದಿದ್ದೀರಾ? ದೇಶ ಮತ್ತು ಸಂವಿಧಾನ ರಕ್ಷಿಸುವ ಜವಾಬ್ದಾರಿ ನಮ್ಮ ಮೇಲಿದೆ : ರಾಹುಲ್ ಗಾಂಧಿ

‘ರಾಜ್ಯದ 150 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು’

“ನಾವು ಒಟ್ಟಾಗಿ ಕೆಲಸ ಮಾಡಿದರೆ ಕಾಂಗ್ರೆಸ್ ರಾಜ್ಯದಲ್ಲಿ 150 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ ಕಾಂಗ್ರೆಸ್‌ನ 4 ಗ್ಯಾರಂಟಿ ಯೋಜನೆ ಜನರಿಗೆ ತಲುಪಿಸಬೇಕು. ನಂತರ ನುಡಿದಂತೆ ನಡೆಯಬೇಕು” ಎಂದು ಕೈ ನಾಯಕರಿಗೆ ಕಿವಿಮಾತು ಹೇಳಿದರು.

“ನಾವು ಈಗಲೂ ಇಂದಿರಾ ಗಾಂಧಿ ಅವರನ್ನು ಯಾಕೆ ಸ್ಮರಿಸುತ್ತೇವೆ ಎಂದರೆ, ಅವರು ಭೂಸುಧಾರಣೆ ಕಾಯ್ದೆ, 10 ಅಂಶಗಳ ಕಾರ್ಯಕ್ರಮ ಜಾರಿ ಮಾಡಿ ಪಕ್ಷಕ್ಕೆ ಮರುಚೈತನ್ಯ ತುಂಬಿದರು. ಬ್ಯಾಂಕುಗಳ ರಾಷ್ಟ್ರೀಕರಣ ಮಾಡಿದರು” ಎಂದರು.

“ಇದೇ ಕಾರಣಕ್ಕೆ ದೇಶದ ಜನ ಇಂದಿರಾ ಗಾಂಧಿ ಅವರ ಜತೆ ನಿಂತರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಸರ್ಕಾರ ಬಂದಾಗ ಇಂದಿರಾ ಅವರ ಹಾದಿಯಲ್ಲೇ ಸಾಗಬೇಕು” ಎಂದು ಹೇಳಿದರು.

“ಮೋದಿ ಅವರು ಪ್ರಜಾಪ್ರಭುತ್ವ ಮುಗಿಸಲು ಮುಂದಾಗಿದ್ದಾರೆ. ಅವರು ಸರ್ವಾಧಿಕಾರಿಯಾಗಿ ಆಡಳಿತ ನಡೆಸಲು ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಪಿಸಿದರು.

“ಈ ಕಟ್ಟಡ ಕಟ್ಟಿರುವ ಶಿವಕುಮಾರ್ ಮತ್ತು ಇದಕ್ಕೆ ಸಹಕಾರ ನೀಡಿದ ಸಿದ್ದರಾಮಯ್ಯ, ಪರಮೇಶ್ವರ್ ಹಾಗೂ ಕೆ.ಜೆ ಜಾರ್ಜ್ ಅವರಿಗೆ ನಾನು ಅಭಿನಂದಿಸುತ್ತೇನೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...