ಶರದ್‌ ಪವಾರ್‌ಗೆ ಕೈಕೊಟ್ಟು ಮೈತ್ರಿ ಸರ್ಕಾರದಲ್ಲಿ ಡಿಸಿಎಂ ಪಟ್ಟ ಅಲಂಕರಿಸಿದ ಅಜಿತ್‌ ಪವಾರ್

Date:

ಮಹಾರಾಷ್ಟ್ರ ಎನ್‌ಸಿಪಿ ರಾಜಕೀಯದಲ್ಲಿ ಮಿಂಚಿನ ರಾಜಕೀಯ ಬದಲಾವಣೆ ಉಂಟಾಗಿದೆ. ಶರತ್‌ ಪವಾರ್‌ಗೆ ಮತ್ತೆ ಕೈಕೊಟ್ಟ ಸೋದರಳಿಯ ಅಜಿತ್‌ ಪವಾರ್, ತನ್ನ ಬೆಂಬಲಿಗ ಶಾಸಕರೊಂದಿಗೆ ಶಿಂಧೆ – ಫಡ್ನವೀಸ್‌ ಸರ್ಕಾರಕ್ಕೆ ಬೆಂಬಲ ಘೋಷಿಸಿದ್ದಾರೆ.

ಇದರ ಭಾಗವಾಗಿ ತುರ್ತಾಗಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಅಜಿತ್‌ ಪವಾರ್ ಡಿಸಿಎಂ ಆಗಿ ಹಾಗೂ ಅವರ ಪಕ್ಷದ 8 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಂತ್ರಿಯಾದವರಲ್ಲಿ ಛಗನ್ ಬುಜ್‌ಬಲ್, ಧನಂಜಯ್ ಮುಂಡೆ, ದಿಲೀಪ್ ವಲ್ಸೆ ಪಾಟೀಲ್ ಕೂಡ ಸೇರಿದ್ದಾರೆ.   

ಅಜಿತ್‌ ಪವಾರ್‌ ಇತ್ತೀಚಿಗಷ್ಟೆ ವಿಪಕ್ಷ ನಾಯಕನ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕೆಲವೇ ದಿನಗಳಲ್ಲಿ ಹೊಸ ಸರ್ಕಾರ ಸೇರ್ಪಡೆಗೊಂಡಿದ್ದಾರೆ. ಮೈತ್ರಿ ಸರ್ಕಾರದಲ್ಲಿ ದೇವೇಂದ್ರ ಫಡ್ನವೀಸ್‌ ಅವರೊಂದಿಗೆ ಅಜಿತ್‌ ಪವಾರ್‌ 2ನೇ ಡಿಸಿಎಂ ಆಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಕ್ಷದ ಮೂಲಗಳ ಪ್ರಕಾರ, 53 ಎನ್‌ಸಿಪಿ ಶಾಸಕರ ಪೈಕಿ 43 ಶಾಸಕರ ಬೆಂಬಲವನ್ನು ಅಜಿತ್ ಪವಾರ್ ಹೊಂದಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ನವದೆಹಲಿ: ಮೇಲ್ಸೇತುವೆ ನಿರ್ಮಾಣಕ್ಕಾಗಿ ಹಿಂದೂ ಹಾಗೂ ಮುಸ್ಲಿಂ ಧಾರ್ಮಿಕ ಕಟ್ಟಡಗಳ ತೆರವು

ಇಂದು ಮುಂಜಾನೆ, ಎನ್‌ಸಿಪಿ ಶಾಸಕರ ಗುಂಪು ಅಜಿತ್ ಪವಾರ್ ಅವರ ಮುಂಬೈ ನಿವಾಸದಲ್ಲಿ ಸಭೆ ನಡೆಸಿತು. ಅಲ್ಲಿ ಪಕ್ಷದ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ಮತ್ತು ಹಿರಿಯ ನಾಯಕ ಛಗನ್ ಭುಜಬಲ್ ಕೂಡ ಹಾಜರಿದ್ದರು. ಪಕ್ಷದ ರಾಜ್ಯಾಧ್ಯಕ್ಷ ಜಯಂತ್ ಪಾಟೀಲ್ ಸಭೆಗೆ ಹಾಜರಾಗಿರಲಿಲ್ಲ.

ಅಜಿತ್‌ ಪವಾರ್ 2019 ರಲ್ಲಿ ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಆದರೆ ಕೆಲವೇ ದಿನಗಳಲ್ಲಿ ರಾಜೀನಾಮೆ ನೀಡಿ ಶರದ್‌ ಪವಾರ್‌ ಬಣಕ್ಕೆ ಮರಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...