ಕಾಂಗ್ರೆಸ್ ತೊರೆದ ಅಕ್ಕೈ ಪದ್ಮಶಾಲಿ: ಲಿಂಗತ್ವ, ಲೈಂಗಿಕತೆ ವಿಷಯಗಳಲ್ಲಿ ರಾಜಕೀಯ ಪ್ರಬುದ್ಧತೆಗೆ ಕರೆ

Date:

ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಹಕ್ಕುಗಳ ಹೋರಾಟಗಾರ್ತಿ ಡಾ. ಅಕ್ಕೈ ಪದ್ಮಶಾಲಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ(ಕೆಪಿಸಿಸಿ) ಉಪಾಧ್ಯಕ್ಷೆ ಹುದ್ದೆ ಹಾಗೂ ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಸೋಮವಾರ(ಆಗಸ್ಟ್ 11) ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರವನ್ನು ಅಕ್ಕೈ ಸಲ್ಲಿಸಿದ್ದಾರೆ.

“2020ರ ಸೆಪ್ಟೆಂಬರ್ 20ರಂದು ತನಗೆ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ಕೊಟ್ಟು, ಬಳಿಕ ಕೆಪಿಸಿಸಿಗೆ ತನ್ನನ್ನು ಸೇರಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉಪಾಧ್ಯಕ್ಷೆ ಹುದ್ದೆಗಳನ್ನು ನೀಡಿರುವುದಕ್ಕೆ ತಾನು ಅಭಾರಿ” ಎಂದು ತಿಳಿಸಿದ್ದಾರೆ. ಹಾಗೆಯೇ ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯ ಮತ್ತು ಲೈಂಗಿಕ ಕಾರ್ಯಕರ್ತರ ಸಮುದಾಯಗಳ ಹೋರಾಟಗಳಿಗೆ ಬೆಂಬಲ ನೀಡಿದ ಕಾಂಗ್ರೆಸ್ ನಾಯಕರಿಗೆ ಧನ್ಯವಾದ ತಿಳಿಸಿದರು.

ಇದನ್ನು ಓದಿದ್ದೀರಾ? ಯಶ್ಪಾಲ್ ಸುವರ್ಣರೇ… ನೀವೇಕೆ ಇನ್ನೂ ಲಿಂಗ ಪರಿವರ್ತನೆ ಮಾಡಿಕೊಂಡಿಲ್ಲ!?: ಅಕ್ಕೈ ಪದ್ಮಶಾಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ತುಳಿತಕ್ಕೊಳಗಾದ ಹಾಗೂ ಶೋಷಿತ ಅಂತರ್ಲಿಂಗಿ , ಲಿಂಗತ್ವ ಹಾಗೂ ಲೈಂಗಿಕ ಅಲ್ಪಸಂಖ್ಯಾತರು, ಲೈಂಗಿಕ ಕಾರ್ಯಕರ್ತೆಯ ಸಮುದಾಯವು ಇಂದಿನ ಪ್ರಸ್ತುತ ಸಾಮಾಜಿಕ, ಆರ್ಥಿಕ, ರಾಜಕೀಯ, ಶೈಕ್ಷಣಿಕ, ಕಾನೂನು, ಮೂಲಭೂತ ಹಕ್ಕುಗಳ ಹಾಗೂ ನೀತಿ ನಿರೂಪಣೆಗಳ ನೆಲೆಗಟ್ಟಿನಿಂದ ತೀರಾ ಹಿಂದುಳಿದಿದೆ. ನಮ್ಮ ಸಮುದಾಯವನ್ನು ರಾಷ್ಟ್ರದಾದ್ಯಂತ ಸಂಘಟಿಸುವ ಸಾಮಾಜಿಕ ಜವಾಬ್ದಾರಿ ಹಾಗೂ ಸಂವಿಧಾನದ ನೈತಿಕತೆಯನ್ನು ಎತ್ತಿ ಹಿಡಿಯುವ ಜವಾಬ್ದಾರಿ ನಿಭಾಯಿಸುವ ಸಲುವಾಗಿ ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

“ನಾವು ಸಮಾಜದ ಅತ್ಯಂತ ಅಂಚಿನಲ್ಲಿರುವ ವರ್ಗ. ಒಂದು ಪಕ್ಷದೊಳಗೆ ಇರುವುದು ಒಂದು ರೀತಿಯಾದರೆ, ಅದರಿಂದ ಹೊರಬರುವುದು ನನ್ನನ್ನು ಇನ್ನಷ್ಟು ಮುಕ್ತ ಮತ್ತು ಬಲಶಾಲಿಯಾಗಿ ಮಾಡುತ್ತದೆ ಎಂದು ನಾನು ಭಾವಿಸಿದ್ದೇನೆ. ಅದಕ್ಕಾಗಿಯೇ ಈ ರಾಜಕೀಯ ವ್ಯವಸ್ಥೆಯಿಂದ ಹೊರಬಂದು ನನ್ನ ಚಳವಳಿಯ ತೊಡಗಿಸಿಕೊಳ್ಳಲು ನಿರ್ಧರಿಸಿದೆ” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...