ಗಾಝಾ ಮೇಲೆ ಇಸ್ರೇಲ್ ಬಾಂಬ್ ದಾಳಿ: ವರದಿ ಮಾಡುತ್ತಿದ್ದ ಮೂವರು ಪತ್ರಕರ್ತರು ಬಲಿ

Date:

ಹಮಾಸ್ ಇಸ್ರೇಲ್ ಮೇಲೆ ಅನಿರೀಕ್ಷಿತ ರಾಕೆಟ್ ದಾಳಿ ನಡೆಸಿದ ಬಳಿಕ ಯುದ್ಧ ಘೋಷಿಸಿರುವ ಇಸ್ರೇಲ್, ಗಾಝಾ ಪಟ್ಟಿ ಮೇಲೆ ನಿರಂತರವಾಗಿ ಬಾಂಬ್ ಸುರಿಯುತ್ತಿದೆ. ಇದರ ಪರಿಣಾಮ ಗಾಝಾದಲ್ಲಿ ಮೂವರು ಪತ್ರಕರ್ತರು ಬಲಿಯಾಗಿರುವುದಾಗಿ ವರದಿಯಾಗಿದೆ.

ಇಸ್ರೇಲ್ ಗಾಝಾ ಮೇಲೆ ನಿರಂತರವಾಗಿ ಬಾಂಬ್ ಹಾಕುತ್ತಿರುವುದು ನಾಲ್ಕನೇ ದಿನಕ್ಕೆ ಮುಂದುವರಿದಿದೆ. ಈ ಸಂಘರ್ಷದಲ್ಲಿ ಕೊಲ್ಲಲ್ಪಟ್ಟ, ಗಾಯಗೊಂಡ ಅಥವಾ ಕಾಣೆಯಾದ ನಾಗರಿಕರಲ್ಲಿ ಪತ್ರಕರ್ತರೂ ಇದ್ದಾರೆ. ಬಾಂಬ್ ದಾಳಿಗೆ ಸ್ಥಳದಲ್ಲಿ ವರದಿ ಮಾಡುತ್ತಿದ್ದ ಮೂವರು ಪತ್ರಕರ್ತರು ಕೂಡ ಮೃತಪಟ್ಟಿರುವುದಾಗಿ ಅಲ್ ಜಝೀರಾ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತಪಟ್ಟವರಲ್ಲಿ ಐನ್ ಮೀಡಿಯಾದ ಛಾಯಾಗ್ರಾಹಕ ಇಬ್ರಾಹಿಂ ಮೊಹಮ್ಮದ್ ಲಾಫಿ, ಸ್ಮಾರ್ಟ್‌ ಮೀಡಿಯಾದ ವರದಿಗಾರ ಮೊಹಮ್ಮದ್ ಜರ್ಘೌನ್ ಹಾಗೂ ಸ್ವತಂತ್ರ ಪತ್ರಕರ್ತ ಮೊಹಮ್ಮದ್ ಎಲ್-ಸಾಲ್ಹಿ ಅವರನ್ನು ಸೆಂಟ್ರಲ್ ಗಾಝಾ ಪಟ್ಟಿಯಲ್ಲಿ ಇಸ್ರೇಲಿ ಸೇನೆಯು ಗುಂಡಿಕ್ಕಿ ಕೊಂದಿದೆ ಎಂದು ವರದಿಯಾಗಿದೆ.

gaza media

ಅಲ್ಲದೇ, ನಿರಂತರ ಬಾಂಬ್ ದಾಳಿಯ ಬಳಿಕ ಕೆಲವು ಪತ್ರಕರ್ತರು ಗಾಯಗೊಂಡಿದ್ದರೆ, ಕೆಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

‘ಪತ್ರಕರ್ತರು, ನಾಗರಿಕರನ್ನು ಗುರಿಯಾಗಿಸಿ ದಾಳಿ ನಡೆಸಬಾರದು ಎಂದು ಎರಡೂ ಕಡೆಯವರಿಗೆ ಕರೆ ನೀಡಿದ್ದೇವೆ. ಬಿಕ್ಕಟ್ಟಿನ ಸಮಯದಲ್ಲಿ ನಿಖರವಾದ ವರದಿಯು ನಿರ್ಣಾಯಕವಾಗಿದೆ. ಗಾಝಾ ಮತ್ತು ಇಸ್ರೇಲ್‌ನ ನಡುವೆ ನಡೆಯುತ್ತಿರುವ ಸಂಘರ್ಷದ ಪರಿಣಾಮವನ್ನು ಜಗತ್ತಿಗೆ ತೋರಿಸುವುದರಲ್ಲಿ ಮಾಧ್ಯಮಗಳು ಪ್ರಮುಖ ಪಾತ್ರವನ್ನು ವಹಿಸುತ್ತದೆ. ಹಾಗಾಗಿ, ಈ ಬಗ್ಗೆ ಎಚ್ಚರ ವಹಿಸಬೇಕು’ ಎಂದು ಸಿಪಿಜೆಯ ಮಧ್ಯಪ್ರಾಚ್ಯ ಮತ್ತು ಉತ್ತರ ಆಫ್ರಿಕಾ ಕಾರ್ಯಕ್ರಮ ಸಂಯೋಜಕ ಶೆರಿಫ್ ಮನ್ಸೂರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

RSS, BJP ವಿರುದ್ಧ ಹೋರಾಡುವ ದೇಶದ ಏಕೈಕ ನಾಯಕ ರಾಹುಲ್‌ ಗಾಂಧಿ : RS MP ಕ್ರಿಸ್ಟೋಫರ್ ತಿಲಕ್

ಸೋನಿಯಾ ಗಾಂಧಿ ಅವರು ಕಂಡ ರಾಜಕೀಯದ ಪರಿಸ್ಥಿತಿಯೇ ಬೇರೆ, ರಾಹುಲ್‌ ಗಾಂಧಿ...

ಅಮೆರಿಕ ವಿಮಾನ ನಿಲ್ದಾಣ: ಏರ್ ಕೆನಡಾ ವಿಮಾನಕ್ಕೆ ಅಪ್ಪಳಿಸಿದ ಟ್ರಕ್

ಅಮೆರಿಕದ ನ್ಯೂಯಾರ್ಕ್‌ನಲ್ಲಿರುವ ಜನನಿಬಿಡ ಲಾ ಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಏರ್ ಕೆನಡಾ...

UAPA ದುರ್ಬಳಕೆ; ವಿಕಸಿತ ಭಾರತಕ್ಕೆ ಶೋಭೆ ತರಲ್ಲ: ಮೋಶಾ ಆಡಳಿತಕ್ಕೆ ಸುಪ್ರೀಂ ನ್ಯಾಯಮೂರ್ತಿ ತಪರಾಕಿ

"2047ರ ವೇಳೆಗೆ ವಿಕಸಿತ ಭಾರತ ನಿರ್ಮಾಣ ಮಾಡುವ ರಾಜಕೀಯ ಮುಖಂಡರ ಗುರಿಯಲ್ಲಿ...