ಆಳಂದ ಮತಗಳವು | ಬಿಜೆಪಿ ಮಾಜಿ ಶಾಸಕ ಸೇರಿ 7 ಮಂದಿ ವಿರುದ್ಧ ಚಾರ್ಜ್‌ಶೀಟ್‌!

Date:

ಕಾಂಗ್ರೆಸ್‌ ಶಾಸಕ ಬಿ.ಆರ್‌ ಪಾಟೀಲ್ ಪ್ರತಿನಿಧಿಸುತ್ತಿರುವ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ 2023ರ ಚುನಾವಣೆಯಲ್ಲಿ ಮತಗಳವು ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಬಿಜೆಪಿ ಮಾಜಿ ಶಾಸಕ ಸುಭಾಷ್‌ ಗುತ್ತೇದಾರ್ ಅವರ ಪಾತ್ರ ಇರುವುದು ಸಿಐಡಿ ತನಿಖೆಯಲ್ಲಿ ಸಾಬೀತಾಗಿದೆ ಎಂದು ವರದಿಯಾಗಿದೆ. ತನಿಖೆ ನಡೆಸಿರುವ ಸಿಐಡಿ ಪೊಲೀಸರು ಸುಭಾಷ್ ಗುತ್ತೇದಾರ್, ಅವರ ಪುತ್ರ ಹರ್ಷಾನಂದ ಸೇರಿದಂತೆ 7 ಮಂದಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

2023ರ ವಿಧಾಸನಭಾ ಚುನಾವಣೆಯಲ್ಲಿ ಕಲಬುರಗಿ ಜಿಲ್ಲೆಯ ಆಳಂದ ಕ್ಷೆತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿದ್ದ ಬಿ.ಆರ್‌ ಪಾಟೀಲ್ ಅವರನ್ನು ಸೋಲಿಸಲು ಬಿಜೆಪಿ ನಾಯಕರು ಮತಗಳವು ನಡೆಸಲು ಯತ್ನಿಸಿದ್ದರು. ಮತಗಳವು ನಡೆಸಲು ಯತ್ನಿಸಿದ್ದ ಸಂದರ್ಭದಲ್ಲಿ, ಪ್ರತಿ ಮತದಾರರ ಹೆಸರು ಅಳಿಸಲು ಅರ್ಜಿ ಸಲ್ಲಿಸಿದ್ದವರಿಗೆ 80 ರೂ. ಹಣ ಪಾವತಿಸಲಾಗಿದೆ ಎಂದೂ ಆರೋಪಿಸಲಾಗಿತ್ತು. ಬಿ.ಆರ್ ಪಾಟೀಲ್ ಅವರು ನೀಡಿದ ದೂರಿನ ಆಧಾರದ ಮೇಲೆ ಪರಿಶೀಲನೆ ನಡೆಸಿದ್ದ ಚುನಾವಣಾ ಆಯೋಗದ ಅಧಿಕಾರಿಗಳು ಮತಗಳವು ಯತ್ನ ನಡೆದಿದೆ ಎಂಬುದನ್ನು ಬಹಿರಂಗಪಡಿಸಿದ್ದರು. ಅಲ್ಲದೆ, ಮತ ಅಳಿಸುವಿಕೆಗೆ ಯತ್ನಿಸಲಾಗಿದ್ದ 5,994 ಮತಗಳನ್ನು ಮರಳಿ ಮತಪಟ್ಟಿದೆ ಸೇರಿಸಿದ್ದರು.

ಚುನಾವಣಾ ಅಧಿಕಾರಿಗಳು ದಾಖಲಿಸಿದ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಬಳಿಕ, ಕಾಂಗ್ರೆಸ್‌ ಸರ್ಕಾರವು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿತ್ತು. ಸಿಐಡಿ ತನಿಖೆಗೆ ಚುನಾವಣಾ ಆಯೋಗ ಸರಿಯಾಗಿ ಸಹಕರಿಸದ ಹಿನ್ನೆಲೆ, ಪ್ರಕರಣವನ್ನು ಇತ್ತೀಚೆಗೆ ಎಸ್‌ಐಟಿ ತನಿಖೆಗೆ ಹಸ್ತಾಂತರಿಸಲಾಗಿತ್ತು. ಇದೀಗ, ಸಿಐಡಿ ಮತ್ತು ಎಸ್‌ಐಟಿ ತನಿಖೆ ಆಧರಿಸಿ ಎಸ್‌ಐಟಿ ಸುಮಾರು 22,000 ಪುಟಗಳ ಚಾರ್ಜ್‌ಶೀಟ್ಅನ್ನು ಬೆಂಗಳೂರು ನಗರದ ಎಸಿಎಂಎಂ ನ್ಯಾಯಾಲಯಕ್ಕೆ ಸಲ್ಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...