ನೀರಾವರಿ ಯೋಜನೆಗಳಿಗೆ ಅನುದಾನ ಪಡೆಯಲು ಪ್ರಧಾನಿ ಬಳಿ ಸರ್ವಪಕ್ಷ ನಿಯೋಗ: ಸಿದ್ದರಾಮಯ್ಯ

Date:

ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ತೀರುವಳಿಗಳನ್ನು ಪಡೆಯಲು ಸರ್ವ ಪಕ್ಷ ನಿಯೋಗ ಕೊಂಡೊಯ್ಯಲು ಸರ್ಕಾರ ಸಿದ್ಧವಿದೆ. ಕೇಂದ್ರದ ಮೇಲೆ ಒತ್ತಡ ಹಾಕಿ ತೀರುವಳಿಗಳನ್ನು ಕೊಡಿಸಿದರೆ ತಕ್ಷಣವೇ ಕಾಮಗಾರಿಗಳ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಮಂಡಲದಲ್ಲಿ ಇಂದು ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಂದರ್ಭದಲ್ಲಿ ಈ ವಿಷಯ ತಿಳಿಸಿದರು.

“ನೀರಾವರಿ ಕೃಷ್ಣಾ ಭಾಗ್ಯ ಜಲ ನಿಗಮ 3 ನೇ ಹಂತದಲ್ಲಿ 130 ಟಿಎಂಸಿ ನೀರು ಬಳಸಬೇಕು ಎಂಬ ಆದೇಶವಿದ್ದರೂ, ಅಫಿಡವಿಟ್ ಹಾಕಿಲ್ಲ. 2 ನೇ ಟ್ರಿಬ್ಯುನಲ್ ಬ್ರಿಜೇಶ್ ಕುಮಾರ್ ವರದಿ ಕೊಟ್ಟು 13 ವರ್ಷಗಳಾಯಿತು. 13 ವರ್ಷಗಳಿಂದ ಗೆಜೆಟ್ ಅಧಿಸೂಚನೆ ಆಗಿಲ್ಲ. ಇದು ಆಗದೇ ಆಲಮಟ್ಟಿ ಜಲಾಶಯದ ಎತ್ತರವನ್ನು 524 ಮೀಟರ್ ಗೆ ಏರಿಸಲಾಗುವುದಿಲ್ಲ. ಈ ಬಗ್ಗೆ ಒತ್ತಾಯಿಸಲು ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ. ಆದರೆ ಪ್ರಧಾನಿಗಳು ಭೇಟಿಗೆ ಅವಕಾಶವನ್ನೇ ನೀಡುವುದಿಲ್ಲ. ಮಹದಾಯಿ ಕುಡಿಯುವ ನೀರಿನ ಯೋಜನೆಗೆ ಅರಣ್ಯ ಮತ್ತು ಪರಿಸರದ ತೀರುವಳಿಯಾಗಬೇಕು. ಅವರು ಕೊಟ್ಟ ತಕ್ಷಣ ನಾವು ಕೆಲಸ ಪ್ರಾರಂಭ ಮಾಡುತ್ತೇವೆ. ಮಹದಾಯಿ, ಕೃಷ್ಣಾ ಮೇಲ್ದಂಡೆಗೂ ಸರ್ವ ಪಕ್ಷ ನಿಯೋಗ ಕರೆದೊಯ್ಯಲು ನಾವು ಸಿದ್ದರಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೃಷ್ಣಾ ಮೇಲ್ದಂಡೆಗೆ 21 ಕೋಟಿ ರೂ.ಗಳ ಪರಿಷ್ಕೃತ ಅಂದಾಜು ಪಟ್ಟಿ. 5300 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಘೋಷಣೆಯಾಗಿದೆ. ಇವತ್ತಿನವರೆಗೆ ಒಂದು ರೂ.ಬಿಡುಗಡೆಯಾಗಿಲ್ಲ. ಆದರೆ ಮತ್ತೊಂದೆಡೆ ಕೇಂದ್ರ ಹಣಕಾಸು ಮಂತ್ರಿಗಳು ಕರ್ನಾಟಕಕ್ಕೆ ಯಾವುದೇ ಅನುದಾನ ಬಾಕಿ ಇಲ್ಲ ಎನ್ನುತ್ತಾರೆ. ನಾವು ಅಧಿಸೂಚನೆ ಆಗುವವರೆಗೆ ಪುನರ್ವಸತಿ ಮತ್ತು ಪುನಶ್ಚೇತನ ಕಾರ್ಯವನ್ನು ಕೈಗೊಳ್ಳುತ್ತೇವೆ. ನಾವು ಅತಿ, ಅತ್ಯಂತ, ಹಿಂದುಳಿದ ತಾಲ್ಲೂಕುಗಳನ್ನು ಅಭಿವೃದ್ಧಿ ಮಾಡಲು ಬದ್ಧರಿದ್ದೇವೆ” ಎಂದು ತಿಳಿಸಿದರು.

“ಮೇಕೆದಾಟು 2018 ರಲ್ಲಿ ಸುಪ್ರೀಂ ಕೋರ್ಟ್ ನಿರ್ಧಾರ ಸಾಮಾನ್ಯ ವರ್ಷಗಳಲ್ಲಿ 177. 25 ಟಿಎಂಸಿ ತಮಿಳುನಾಡಿಗೆ ಕೊಡಬೇಕು ಎಂದು ತೀರ್ಪು ನೀಡಿದೆ. ಸಂಕಷ್ಟದ ಪರಿಸ್ಥಿತಿಯಲ್ಲಿ ಎರಡೂ ರಾಜ್ಯಗಳೂ ನೀರು ಹಂಚಿಕೊಳ್ಳಬೇಕು ಎಂದು ತಿಳಿಸಿದೆ. ಮೇಕೆದಾಟು ಯೋಜನೆಯು ಕುಡಿಯುವ ನೀರು, ವಿದ್ಯುತ್ ಉತ್ಪಾದನೆ ಮಾಡುವ ಸಲುವಾಗಿ ರೂಪಿಸಿರುವ ಯೋಜನೆ. ಅಣೆಕಟ್ಟು, ಬ್ಯಾಲೆನ್ಸಿಂಗ್ ರಿಸರ್ವಾಯರ್ ಕರ್ನಾಟಕದ ವ್ಯಾಪ್ತಿಯಲ್ಲಿಯೇ ನಿರ್ಮಿಸುವುದು. ಇದರಿಂದ ತಮಿಳುನಾಡಿಗೆ ಏನೂ ಹಾನಿಯಿಲ್ಲ. ಬದಲಿಗೆ ಅನುಕೂಲವಾಗುತ್ತದೆ” ಎಂದರು.

“ತಮಿಳುನಾಡು, ಕೇರಳ, ಆಂಧ್ರದ ಜೊತೆ ಮಾತುಕತೆ ವಿಫಲವಾಗಿ ನ್ಯಾಯಮಂಡಳಿಯು 193 ಟಿಎಂಸಿ ನೀರು ಕೊಡಬೇಕು ಎಂದು ತೀರ್ಪು ನೀಡಿತ್ತು. ನಂತರ 177.25 ಟಿಎಂಸಿಯನ್ನು ತಮಿಳುನಾಡಿಗೆ ಬಿಡಗಡೆ ಮಾಡಬೇಕು” ಎಂದು ಸುಪ್ರೀಂ ಕೋರ್ಟ್ ಹೇಳಿದೆ ವಿವರಿಸಿದರು.

ಉತ್ತರ ಕರ್ನಾಟಕದ ಬಗ್ಗೆ ಸುದೀರ್ಘ ಚರ್ಚೆ

“ಉತ್ತರ ಕರ್ನಾಟಕದ ಚರ್ಚೆಯಲ್ಲಿ 42 ಜನ ಭಾಗವಹಿಸಿದ್ದು 11. ಗಂಟೆ 4 ನಿಮಿಷಗಳ ಕಾಲ ಮಾತನಾಡಿದ್ದಾರೆ. ರಾಜಕೀಯ ಬೆರೆಸದೆ ರಾಜ್ಯದ ಅಭಿವೃದ್ಧಿ, 7 ಕೋಟಿ ಕನ್ನಡಿಗರ ಬಗ್ಗೆ ಚರ್ಚೆಯಾಗಿದೆ. ರಾಜ್ಯದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಚರ್ಚೆಯಾಗಿದೆ. ಕಾಂಗ್ರೆಸ್ ನ 24 ಜನ ಬಿಜೆಪಿಯ 15, ಜನತಾ ದಳದ 2, ಪಕ್ಷೇತರರು ಒಬ್ಬರು ವಿಶೇಷ ಚರ್ಚೆಯಲ್ಲಿ ಭಾಗವಹಿಸಿ ಅಭಿವೃದ್ಧಿಗೆ ಸಲಹೆಗಳನು ಕೊಟ್ಟಿದ್ದಾರೆ. ಸಮ್ಮಿಶ್ರ ಸರ್ಕಾರವಿದ್ದಾಗ ಹಾಗೂ ಬಿಜೆಪಿ ಮೂರು ವರ್ಷ ಆಡಳಿತ ನಡೆಸಿದಾಗ ಉತ್ತರ ಕರ್ನಾಟಕದ ಬಗ್ಗೆ ಒಮ್ಮೆ ಮಾತ್ರ ಚರ್ಚೆಯಾಗಿದೆ. ಮಾಧುಸ್ವಾಮಿಯವರು ಏಳೆಂಟು ಶಾಸಕರು ಮಾತನಾಡಿದ್ದಕ್ಕೆ 54 ಪದಗಳಲ್ಲಿ ಉತ್ತರ ನೀಡಿದ್ದರು” ಎಂದು ಮುಖ್ಯಮಂತ್ರಿಗಳು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...