ಜ್ಞಾನವಾಪಿ ಮಸೀದಿ | ಪೂಜೆ ಆದೇಶಕ್ಕೆ ತಡೆಯಾಜ್ಞೆ ನೀಡಲು ಅಲಹಾಬಾದ್ ಹೈಕೋರ್ಟ್ ನಿರಾಕರಣೆ

Date:

ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಾರಣಾಸಿ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. 

ಜ್ಞಾನವಾಪಿ ಮಸೀದಿ ಆವರಣದ ವ್ಯಾಸ್ ತೆಹ್‌ಖಾನದಲ್ಲಿ ಹಿಂದೂಗಳಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ನೀಡಿದ ವಾರಣಾಸಿ ನ್ಯಾಯಾಲಯದ ಆದೇಶಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲು ಅಲಹಾಬಾದ್ ಹೈಕೋರ್ಟ್ ಶುಕ್ರವಾರ (ಫೆಬ್ರವರಿ 2) ನಿರಾಕರಿಸಿದೆ. 

ಮಸೀದಿ ವ್ಯವಹಾರಗಳ ನೇತೃತ್ವ ವಹಿಸಿರುವ ಅಂಜುಮನ್ ಇನ್‌ತೆಜಾಮಿಯ ಮಸ್ಜಿದ್ ಸಮಿತಿಗೆ (ಎಐಎಂಸಿ) ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರವಾಲ್ ಪೀಠ ತಡೆಯಾಜ್ಞೆ ನಿರಾಕರಿಸಿದೆ.

ಜ್ಞಾನವಾಪಿ ಮಸೀದಿಯಲ್ಲಿ ಹಿಂದೂ ಪೂಜೆಗೆ ಅವಕಾಶ ನೀಡಿರುವ ಜನವರಿ 31ರ ವಾರಣಾಸಿ ನ್ಯಾಯಾಲಯದ ಆದೇಶಕ್ಕೆ ಮೂಲ ಕಾರಣವಾಗಿರುವ ಜನವರಿ 17ರ ಆದೇಶಕ್ಕೆ ತಡೆಯಾಜ್ಞೆ ಮನವಿಯನ್ನು ಸೇರಿಸಲು ಮುಸ್ಲಿಂ ಪರವಾಗಿ ಅರ್ಜಿ ಸಲ್ಲಿಸಿರುವ ಎಐಎಂಸಿಗೆ  ಫೆಬ್ರವರಿ 6ರವರೆಗೆ ಅಲಹಾಬಾದ್ ಹೈಕೋರ್ಟ್ ಕಾಲಾವಕಾಶ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶಕ್ಕೆ ತಡೆಯಾಜ್ಞೆ ನೀಡುವ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸುವಂತೆ ತಿಳಿಸಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದ ಕೆಲವೇ ಗಂಟೆಗಳಲ್ಲಿ ಸಮಿತಿ ಹೈಕೋರ್ಟ್ ನಲ್ಲಿ ಮನವಿ ಸಲ್ಲಿಸಿತ್ತು.

ಬುಧವಾರ ವಾರಣಾಸಿ ನ್ಯಾಯಾಲಯ ಜ್ಞಾನವಾಪಿ ಮಸೀದಿಯ ದಕ್ಷಿಣ ಮೂಲೆಯಲ್ಲಿರುವ ಕೊಠಡಿಯಲ್ಲಿರುವ ಪ್ರತಿಮೆಗೆ ಪುರೋಹಿತರು ಪೂಜೆ ಸಲ್ಲಿಸಬಹುದು ಎಂದು ಆದೇಶ ನೀಡಿತ್ತು.

ಜಿಲ್ಲಾ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಶುಕ್ರವಾರದ ನಮಾಜ್‌ಗೆ ಮೊದಲು ವಾರಣಾಸಿ ಜಿಲ್ಲೆಯಾದ್ಯಂತ ಮುಸ್ಲಿಂ ಸಮುದಾಯದ ಪ್ರಭಾವವಿರುವ ಪ್ರದೇಶಗಳಲ್ಲಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿತ್ತು. ಪೊಲೀಸರು ಪ್ರದೇಶಗಳಲ್ಲಿ ಗಸ್ತು ತಿರುಗುತ್ತಾ ನಿಗಾ ಇಟ್ಟಿದ್ದರು. ತೀರ್ಪಿನ ಹಿನ್ನೆಲೆಯಲ್ಲಿ ಶುಕ್ರವಾರದಂದು ವಾರಣಾಸಿ ಪಟ್ಟಣದಲ್ಲಿ ಅಂಜುಮಾನ್ ಸಮಿತಿ ಬಂದ್‌ಗೆ ಕರೆ ನೀಡಿತ್ತು. ದಾಲ್‌ಮಂಡಿ, ನೈ ಸಡಕ್‌, ನಾದೇಸರ್ ಹಾಗೂ ಅರ್ದ್ ಬಾಜಾರ್ ಪ್ರದೇಶಗಳಲ್ಲಿ ಅಂಗಡಿಗಳು ಮುಚ್ಚಿದ್ದವು.

ಆದರೆ ಸಮತಿ ಶಾಂತಿಯುತವಾಗಿ ನಮಾಝ್ ಮುಗಿಸುವಂತೆ ಸಮುದಾಯದ ಸದಸ್ಯರನ್ನು ಮನವಿ ಮಾಡಿಕೊಂಡಿತ್ತು. ಜೊತೆಗೆ ಸಮುದಾಯದ ಮಹಿಳೆಯರನ್ನು ಮನೆಯೊಳಗೇ ಇರುವಂತೆ ಸಲಹೆ ನೀಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...