ಮಾಜಿ ಸಚಿವ ರಮೇಶ್ ಕುಮಾರ್‌ ವಿರುದ್ಧ ಅರಣ್ಯ ಭೂಮಿ ಒತ್ತುವರಿ ಆರೋಪ, ಜಂಟಿ ಸರ್ವೆ ಆರಂಭ

Date:

ಮಾಜಿ ಸಭಾಧ್ಯಕ್ಷ ಕೆ ಆರ್ ರಮೇಶ್‌ ಕುಮಾರ್ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನಲಾದ ಅರಣ್ಯ ಜಮೀನಿನ ಜಂಟಿ ಸರ್ವೆ ಕಾರ್ಯ ಬುಧವಾರ ಆರಂಭವಾಗಿದೆ.

ಜಿಲ್ಲಾಡಳಿತ ದಿನಾಂಕ ನಿಗದಿ ಮಾಡಿಕೊಂಡು, ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಹೊಸಹುಡ್ಯ ಗ್ರಾಮದ ಜಿಗಲಕುಂಟೆ ಅರಣ್ಯ ಪ್ರದೇಶದ ಸರ್ವೆ ನಂಬರ್ 1 ಮತ್ತು 2ರ ಜಮೀನಿನ ಜಂಟಿ ಸಮೀಕ್ಷೆ ಹೈಕೋರ್ಟ್ ನಿರ್ದೇಶನದಂತೆ ಇಂದು ಜಂಟಿ ಸರ್ವೆ ಕಾರ್ಯ ನಡೆಸುತ್ತಿದೆ.

ಅರ್ಜಿದಾರ ಮಾಜಿ ಸಚಿವ ಕೆ.ಆ‌ರ್.ರಮೇಶ್ ಕುಮಾರ್ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ. ಜಿಲ್ಲಾಧಿಕಾರಿ ಎಂ.ಆ‌ರ್.ರವಿ ನೇತೃತ್ವದಲ್ಲಿ ನಡೆಯುತ್ತಿದ್ದು, ಡಿಸಿಎಫ್ ಸರೀನಾ ಸಿಕ್ಕಲಿಗಾರ್, ಡಿಡಿಎಲ್‌ಆರ್ ಸಂಜಯ್, ಉಪವಿಭಾಗಾಧಿಕಾರಿ ಡಾ.ಮೈತ್ರಿ, ಶ್ರೀನಿವಾಸಪುರ ತಹಶೀಲ್ದಾರ್ ಜಿ.ಎನ್.ಸುಧೀಂದ್ರ ಸರ್ವೇಯಲ್ಲಿ ಇದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿನಗುಲಕುಂಟೆ ಅರಣ್ಯ ಪ್ರದೇಶದಲ್ಲಿ ರಮೇಶಕುಮಾರ್ 61.39 ಎಕರೆ ಒತ್ತುವರಿ ಮಾಡಿಕೊಂಡಿದ್ದಾರೆ ಎನ್ನುವ ಆರೋಪವಿದೆ. ಸೂಕ್ತ ದಾಖಲೆಗಳೊಂದಿಗೆ ಸ್ಥಳಕ್ಕೆ ಹಾಜರಾಗುವಂತೆ ರಮೇಶ್‌ ಕುಮಾರ್‌ಗೆ ಸೂಚನೆ ನೀಡಲಾಗಿತ್ತು.ಆ ಪ್ರಕಾರ ರಮೇಶ್ ಕುಮಾ‌ರ್ ಸ್ಥಳಕ್ಕೆ ಬಂದು ದಾಖಲೆ ಒಪ್ಪಿಸಿ, ಸಹಿ ಹಾಕಿ ಸಮೀಕ್ಷೆ ಕಾರ್ಯಕ್ಕೆ ಸಹಕಾರ ನೀಡಿದ್ದಾರೆ. ಹೊಸಹುಡ್ಯ ಸುತ್ತಮುತ್ತ ಪೊಲೀಸರನ್ನು ನಿಯೋಜಿಸಲಾಗಿದೆ. ನಾಲ್ಕು ತಂಡಗಳನ್ನು ರಚಿಸಿದ್ದು, ರೋವರ್ ಉಪಕರಣ ಬಳಸಿ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಕರಣ ಹಿನ್ನೆಲೆ

ಶ್ರೀನಿವಾಸಪುರ ವಲಯದಲ್ಲಿ ಬಡವರು ಒತ್ತುವರಿ ಮಾಡಿಕೊಂಡಿದ್ದ ಸಾವಿರಾರು ಎಕರೆ ಜಮೀನನ್ನು ತೆರವುಗೊಳಿಸಿದ್ದ ಅರಣ್ಯ ಇಲಾಖೆಯ ಅಧಿಕಾರಿಗಳು, ಬಲಾಢ್ಯರ ಜಮೀನನ್ನು ತೆರವುಗೊಳಿಸುತ್ತಿಲ್ಲ. ಜಿನಗಲಕುಂಟೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವುಗೊಳಿಸಲು ಮುಂದಾಗುತ್ತಿಲ್ಲ ಎಂದು ಕೇಂದ್ರ ಅರಣ್ಯ ಇಲಾಖೆಗೆ ಕೆಲವರು ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಕೇಂದ್ರ ಅರಣ್ಯ ಇಲಾಖೆಯು ಕೂಡಲೇ ಒತ್ತುವರಿ ತೆರವುಗೊಳಿಸಿ ವರದಿ ನೀಡುವಂತೆ ರಾಜ್ಯ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ರಾಜ್ಯ ಮಟ್ಟದ ಅಧಿಕಾರಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದ್ದರು.

ಪ್ರಕರಣವನ್ನು ವಿಲೇ ಮಾಡಿದ್ದ ಕರ್ನಾಟಕ ಹೈಕೋರ್ಟ್‌ ಕೆ.ಆರ್‌. ರಮೇಶಕುಮಾರ್ ಅವರ ಉಪಸ್ಥಿತಿಯಲ್ಲಿ ಜಂಟಿ ಸರ್ವೆ ನಡೆಸಿ, ಅರಣ್ಯ ಜಮೀನು ಒತ್ತುವರಿ ಆಗಿರುವುದು ಕಂಡು ಬಂದಲ್ಲಿ ತೆರವುಗೊಳಿಸಿ ಕ್ರಮ ಜರುಗಿಸಬೇಕೆಂದು ಸೂಚಿಸಿತ್ತು. ಆದರೆ, ಜಂಟಿ ಸರ್ವೆ ನಡೆದಿಲ್ಲ ಎಂಬ ಆರೋಪಗಳು ಕೇಳಿಬಂದಿದ್ದವು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...